ಭಾರತದ ವಿದೇಶಿ ವಿನಿಮಯ ಮೀಸಲು 1.3 ಬಿಲಿಯನ್ ಡಾಲರ್ ನಷ್ಟು ಕುಸಿತ!
ಭಾರತದ ವಿದೇಶಿ ವಿನಿಮಯ ಮೀಸಲು ಸೆಪ್ಟೆಂಬರ್ ತಿಂಗಳಾಂತ್ಯಕ್ಕೆ 1.26 ಬಿಲಿಯನ್ ಡಾಲರ್ ಕುಸಿತ ಕಂಡಿದೆ.
ನವದೆಹಲಿ: ಭಾರತದ ವಿದೇಶಿ ವಿನಿಮಯ ಮೀಸಲು ಸೆಪ್ಟೆಂಬರ್ ತಿಂಗಳಾಂತ್ಯಕ್ಕೆ 1.26 ಬಿಲಿಯನ್ ಡಾಲರ್ ಕುಸಿತ ಕಂಡಿದೆ.
ಆರ್ ಬಿಐ ಬಿಡುಗಡೆ ಮಾಡಿರುವ ಅಂಕಿ ಅಂಶಗಳ ಪ್ರಕಾರ ಒಟ್ಟಾರೆ ವಿದೇಶಿ ವಿನಿಮಯ ಮೀಸಲು 401.79 ಬಿಲಿಯನ್ ಡಾಲರ್ ನಿಂದ $400.52 ಬಿಲಿಯನ್ ಗೆ ಕುಸಿದಿದೆ. ಫಾರಿನ್ ಕರೆನ್ಸಿ ಅಸೆಟ್ಸ್(ಎಫ್ ಸಿಎ) ಚಿನ್ನದ ಮೀಸಲು, ವಿಶೇಷ ಹಿಂತೆಗೆತ ಅಧಿಕಾರ (ಎಸ್ ಡಿ ಆರ್ ) ಹಾಗೂ ಐಎಂಎಫ್ ನಲ್ಲಿ ಆರ್ ಬಿಐ ನ ಸ್ಥಿತಿ ಎಲ್ಲವೂ ವಿದೇಶಿ ವಿನಿಮಯವನ್ನು ನಿರ್ಧರಿಸುವ ಅಂಶಗಳಾಗಿವೆ.
ಇನ್ನು ಇದೇ ವೇಳೆ ದೇಶದ ಚಿನ್ನದ ಮೀಸಲು ಸಹ ಇಳಿಕೆಯಾಗಿದ್ದು, 70.7 ಮಿಲಿಯನ್ ಡಾಲರ್ ಇಳಿಕೆಯಾಗಿದ್ದು, 20.34 ಬಿಲಿಯನ್ ಡಾಲರ್ ಗೆ ಕುಸಿದಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.