ಕೇಂದ್ರ ಸರ್ಕಾರ ತೈಲ ಬೆಲೆ ಇಳಿಸಿದರೂ ಪೆಟ್ರೋಲ್, ಡೀಸೆಲ್ ದರ ಮತ್ತೆ ಗಗನಕ್ಕೆ!
ಗ್ರಾಹಕರ ಮೇಲಿನ ಹೊರೆ ಇಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್ ದರವನ್ನು ಇಳಿಕೆ ಮಾಡಿದರೂ, ತೈಲ ಕಂಪನಿಗಳು ಮಾತ್ರ ಬೆಲೆ ಏರಿಕೆ ಮಾಡುತ್ತಲೇ ಇವೆ...
ನವದೆಹಲಿ: ಗ್ರಾಹಕರ ಮೇಲಿನ ಹೊರೆ ಇಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್ ದರವನ್ನು ಇಳಿಕೆ ಮಾಡಿದರೂ, ತೈಲ ಕಂಪನಿಗಳು ಮಾತ್ರ ಬೆಲೆ ಏರಿಕೆ ಮಾಡುತ್ತಲೇ ಇವೆ.
ಕೇಂದ್ರ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯನ್ನು ಶುಕ್ರವಾರವಷ್ಟೇ ರೂ.2.50 ಇಳಿಕೆ ಮಾಡಿತ್ತು. ಆದರೆ, ಇದಾದ ಮಾರನೇ ದಿನವೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಪರ್ವ ಆರಂಭವಾಗಿದೆ.
ಭಾನುವಾರವಷಅಟೇ ಪೆಟ್ರೋಲ್ ಬೆಲೆ 14 ಪೈಸೆ ಏರಿಕೆ ಮಾಡಿದ್ದ ತೈಲ ಕಂಪನಿಗಳು ಇಂದೂ ಕೂಡ ಮತ್ತೆ ಏರಿಕೆ ಮಾಡಿದ್ದು, ಪೆಟ್ರೋಲ್ ಬೆಲೆಯಲ್ಲಿ 21 ಪೈಸೆ ಹಾಗೂ ಡೀಸೆಲ್ ಬೆಲೆಯಲ್ಲಿ 29 ಪೈಸೆ ಏರಿಕೆ ಮಾಡಿವೆ.
ರಾಜಧಾನಿ ದೆಹಲಿಯಲ್ಲಿ ಇಂದಿನ ಪೆಟ್ರೋಲ್ ಬೆಲೆ ಪ್ರತೀ ಲೀಟರ್'ಗೆ ರೂ.82.3 ಹಾಗೂ ಡೀಸೆಲ್ ಬೆಲೆ ಪ್ರತೀ ಲೀಟರ್'ಗೆ ರೂ.73.82 ಆಗಿದೆ.
ಇನ್ನು ವಾಣಿಜ್ಯ ನರಗದಲ್ಲಿ ಪೆಟ್ರೋಲ್ ದರ 21 ಪೈಸೆ ಹಾಗೂ ಡೀಸೆಲ್ ದರ 31 ಪೈಸೆ ಏರಿಕೆಯಾಗಿದ್ದು, ಮುಂಬೈ ನಲ್ಲಿ ಇಂದಿನ ಪೆಟ್ರೋಲ್ ದರ ರೂ.87.50 ಹಾಗೂ ಡೀಸೆಲ್ ದರ ರೂ.77.37 ಇದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.