ಮತ್ತೆ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಇಳಿಕೆ: ಸಾರ್ವಜನಿಕರಿಗೆ ನಿರಾಳ
ದೇಶದಾದ್ಯಂತ ತೈಲೆ ಬೆಲೆ ಮತ್ತೆ ಇಳಿಕೆಯಾಗಿದ್ದು, ಕಳೆದ ಒಂದು ವಾರದಲ್ಲಿ ಪ್ರತೀ ಲೀಟರ್ ಪೆಟ್ರೋಲ್ ಬೆಲೆ ರೂ.1.98 ಹಾಗೂ ಡೀಸೆಲ್ 99 ಪೈಸೆ ಇಳಿಕೆಯಾಗಿದೆ. ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ...
ನವದೆಹಲಿ: ದೇಶದಾದ್ಯಂತ ತೈಲೆ ಬೆಲೆ ಮತ್ತೆ ಇಳಿಕೆಯಾಗಿದ್ದು, ಕಳೆದ ಒಂದು ವಾರದಲ್ಲಿ ಪ್ರತೀ ಲೀಟರ್ ಪೆಟ್ರೋಲ್ ಬೆಲೆ ರೂ.1.98 ಹಾಗೂ ಡೀಸೆಲ್ 99 ಪೈಸೆ ಇಳಿಕೆಯಾಗಿದೆ. ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಇಳಿಕೆಯಾಗಿರುವ ಹಿನ್ನಲೆಯಲ್ಲಿ ಸಾರ್ವಜನಿಕರಿಗೆ ಕೊಂಚ ನಿರಾಳವುಂಟಾಗಿದೆ.
ರಾಜಧಾನಿ ದೆಹಲಿಯಲ್ಲಿ ಪ್ರತೀ ಲೀಟರ್ ಪೆಟ್ರೋಲ್ ಬೆಲೆ ರೂ.80.45ಗಳಿದ್ದು, ಡೀಸೆಲ್ ಬೆಲೆ ರೂ.74.38 ಇದೆ. ಪ್ರಸ್ತುತ ವಾಣಿಜ್ಯ ನಗರಿ ಮುಂಬೈ ನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ಬೆಲೆ ರೂ.85.93 ಹಾಗೂ ಡೀಸೆಲ್ ರೂ.77.969ಕ್ಕೆ ಮಾರಾಟವಾಗುತ್ತಿದೆ.
ಇನ್ನು ರಾಜ್ಯ ರಾಜಧಾನಿ ಬೆಗಳೂರಿನಲ್ಲಿ ಪ್ರತೀ ಲೀಟಲೆ ಪೆಟ್ರೋಲ್ ಬೆಲೆ 22 ಪೈಸೆ ಇಳಿಕೆಯೊಂದಿಗೆ ರೂ.81.74 ಇದ್ದು, 11 ಪೈಸೆ ಇಳಿಕೆ ಕಂಡಿರುವ ಡೀಸೆಲ್ ರೂ.75.19ಕ್ಕೆ ಮಾರಾಟವಾಗುತ್ತಿದೆ ಎಂದು ವರದಿಗಳು ತಿಳಿಸಿವೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.