ಮತ್ತೆ ಗಗನದತ್ತ ಮುಖ ಮಾಡಿದ ಪೆಟ್ರೋಲ್, ಡೀಸೆಲ್ ದರ
ಪೆಟ್ರೋಲ್ ಮತ್ತು ಡೀಸೆಲ್ ದರ ಮತ್ತೆ ಗಗನದತ್ತ ಮುಖ ಮಾಡಿದ್ದು, ಇಂದು ಮತ್ತೆ ದರ 16 ಪೈಸೆಯಷ್ಟು ಏರಿಕೆಯಾಗಿದೆ.
ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ದರ ಮತ್ತೆ ಗಗನದತ್ತ ಮುಖ ಮಾಡಿದ್ದು, ಇಂದು ಮತ್ತೆ ದರ 16 ಪೈಸೆಯಷ್ಟು ಏರಿಕೆಯಾಗಿದೆ.
ಕಳೆದ ಆಗಸ್ಟ್ 16ರಿಂದಲೂ ನಿರಂತರವಾಗಿ ಪೆಟ್ರೋಲ್ ಮತ್ತು ಡೀಸೆಲ್ ದರಗಳು ಏರಿಕೆಯಾಗುತ್ತಲೇ ಇದ್ದು, 16ನೇ ದಿನವೂ ದರ ಏರಿಕೆಯಾಗಿದೆ. ಇಂದು ಪ್ರತೀ ಲೀಟರ್ ಡೀಸೆಲ್ ದರದಲ್ಲಿ 16 ಪೈಸೆಯಷ್ಟು ಏರಿಕೆಯಾಗಿದ್ದು, ಪೆಟ್ರೋಲ್ ದರದಲ್ಲಿ 36 ಪೈಸೆಯಷ್ಟು ಏರಿಕೆಯಾಗಿದೆ.
ಬೆಂಗಳೂರಿನಲ್ಲಿ ಇಂದು ಲೀಟರ್ ಡಿಸೇಲ್ ದರ ಪ್ರತೀ ಲೀಟರ್ ಗೆ 72.51 ರೂ ಮತ್ತು ಪೆಟ್ರೋಲ್ ದರ 81.12 ರೂ ಗಳಾಗಿವೆ. ಮುಂಬೈನಲ್ಲಿ ಇಂದಿನ ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಕ್ರಮವಾಗಿ 86.25, 75.12ರೂ ಗಳಾಗಿವೆ.
ಇನ್ನು ಹಾಲಿ ದರ ಏರಿಕೆಗೆ ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಛಾ ತೈಲದಲ್ಲಾದ ಬೆಲೆ ಏರಿಕೆಯೇ ಕಾರಣ ಎಂದು ಕೇಂದ್ರ ಪೆಟ್ರೋಲಿಯಂ ಸಚಿವಾಲಯ ಮಾಹಿತಿ ನೀಡಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.