ಸಾಂದರ್ಭಿಕ ಚಿತ್ರ 
ವಾಣಿಜ್ಯ

ಡಾಲರ್ ಎದುರು ಪಾತಾಳಕ್ಕೆ ಕುಸಿದ ರುಪಾಯಿ ಮೌಲ್ಯ, 72.11 ರು.ಇಳಿಕೆ

ಅಮೆರಿಕದ ಡಾಲರ್ ಎದುರು ಭಾರತದ ರುಪಾಯಿ ವಿನಿಮಯ ಮೌಲ್ಯ ಗುರುವಾರ ಮತ್ತೆ ದಾಖಲೆಯ ಕುಸಿತ ಕಂಡಿದ್ದು...

ಮುಂಬೈ: ಅಮೆರಿಕದ ಡಾಲರ್ ಎದುರು ಭಾರತದ ರುಪಾಯಿ ವಿನಿಮಯ ಮೌಲ್ಯ ಗುರುವಾರ ಮತ್ತೆ ದಾಖಲೆಯ ಕುಸಿತ ಕಂಡಿದ್ದು, ಇದೇ ಮೊದಲ ಬಾರಿಗೆ 72.11 ರುಪಾಯಿಗೆ ತಲುಪಿದೆ.
ನಿನ್ನೆ ಮುಂಬೈ ಷೇರು ಮಾರುಕಟ್ಟೆ ಮುಕ್ತಾಯದ ವೇಳೆ 71.75ಕ್ಕಿಳಿದಿದ್ದ ರುಪಾಯಿ ಮೌಲ್ಯ ಇಂದು 36 ಪೈಸೆಯಷ್ಟು ಇಳಿಕೆಯಾಗುವ ಮೂಲಕ 72.11 ರುಪಾಯಿಗೆ ತಲುಪಿದೆ.
ಭಾರತೀಯ ಕರೆನ್ಸಿಯ ಮೌಲ್ಯ ಇದೇ ತಿಂಗಳಲ್ಲಿ ಶೇ.2ರಷ್ಟು ಕುಸಿದಿದ್ದು, ಈ ವರ್ಷದಲ್ಲಿಶೇ.12ಕ್ಕಿಂತಲೂ ಹೆಚ್ಚಿನ ಪ್ರಮಾಣದಲ್ಲಿ ಕುಸಿದಿದೆ. ಇದು ಉದಯೋನ್ಮುಖ ಮಾರುಕಟ್ಟೆಗಳಲ್ಲಿ ಅತ್ಯಂತ ಕೆಟ್ಟ ಪ್ರದರ್ಶನವಾಗಿದೆ ಎಂದು ಮಾರುಕಟ್ಟೆ ತಜ್ಞರು ತಿಳಿಸಿದ್ದಾರೆ. 
ಅಂತಾರಾಷ್ಟ್ರೀಯ ಬ್ಯಾಂಕ್‌ ಮತ್ತು ಆಮದುದಾರರಿಂದ ಡಾಲರ್‌ಗೆ ಭಾರಿ ಡಿಮಾಂಡ್‌ ಸೃಷ್ಟಿಯಾಗಿದ್ದು, ಅತ್ಯಂತ ಶೀಘ್ರದಲ್ಲೇ ರುಪಾಯಿ ಮೌಲ್ಯ 73 ತಲುಪಲಿದೆ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ. 
ಆಗಸ್ಟ್ 31ರಂದು ಡಾಲರ್ ಎದುರು ರುಪಾಯಿ ಮೌಲ್ಯ 71 ರುಪಾಯಿಗೆ ಇಳಿಕೆಯಾಗಿ ಸಾರ್ವಕಾಲಿಕ ದಾಖಲೆ ನಿರ್ಮಿಸಿತ್ತು. ಈಗ ಮತ್ತೊಂದು ದಾಖಲೆ ನಿರ್ಮಿಸಿದೆ.
ರುಪಾಯಿ ಕುಸಿತಕ್ಕೆ ಜಾಗತಿಕ ಅಂಶಗಳಿಗೆ ಕಾರಣವಾಗಿದ್ದು, ಇತರ ಕರೆನ್ಸಿಗಳಿಗೆ ಹೋಲಿಸಿದರೆ ದೇಶೀಯ ಘಟಕವು ಉತ್ತಮವಾಗಿದೆ ಎಂದು ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಹೇಳಿದ್ದಾರೆ. ಅಲ್ಲದೆ ಪರಿಸ್ಥಿತಿಯನ್ನು ಎದುರಿಸಲು ರಿಸರ್ವ್ ಬ್ಯಾಂಕ್ ಸೂಕ್ತ ಕ್ರಮ ಕೈಗೊಳ್ಳುತ್ತಿದೆ ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT