ವಾಣಿಜ್ಯ

ಮತ್ತೆ ಪೆಟ್ರೋಲ್, ಡೀಸೆಲ್ ದರದಲ್ಲಿ ಏರಿಕೆ.. ಇಂದಿನ ದರ ಎಷ್ಟು ಗೊತ್ತಾ?

Srinivasamurthy VN
ನವದೆಹಲಿ: ಗಗನದತ್ತ ಮುಖ ಮಾಡಿರುವ ತೈಲೋತ್ಪನ್ನಗಳ ದರ ಮತ್ತೆ ಏರಿಕೆಯಾಗಿದ್ದು, ಸತತ 7ನೇ ದಿನವೂ ಗ್ರಾಹಕರ ಜೇಬಿಗೆ ಕತ್ತರಿ ಹಾಕಿದೆ.
ಇಂದು ಪ್ರತೀ ಲೀಟರ್ ಪೆಟ್ರೋಲ್ ದರದಲ್ಲಿ 28 ಪೈಸೆ ಏರಿಕೆಯಾಗಿದ್ದು, ಮುಂಬೈನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 88.67ಕ್ಕೆ ಏರಿಕೆಯಾಗಿದ್ದು, ಇದೇ ವೇಳೆ ಡೀಸೆಲ್ ದರದಲ್ಲಿ ಕೂಡ 22 ಪೈಸೆಯಷ್ಚು ಏರಿಕೆಯಾಗಿದ್ದು ಪ್ರತೀ ಲೀಟರ್ ಪೆಟ್ರೋಲ್ ದರ 77.82 ಏರಿಕೆಯಾಗಿದೆ.
ಇನ್ನು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 81.28ಕ್ಕೆ ಏರಿಕೆಯಾಗಿದ್ದು, ಡೀಸೆಲ್ ದರ 73.30 ರೂಗೆ ಏರಿಕೆಯಾಗಿದೆ.
ನಿನ್ನೆ ಬೆಂಗಳೂರಿನಲ್ಲಿ ಪೆಟ್ರೋಲ್ ದರ ಪ್ರತೀ ಲೀಟರ್ ಗೆ 83.74 ರೂ.ಗಳಾಗಿತ್ತು.
SCROLL FOR NEXT