ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ವಾಣಿಜ್ಯ

ದೇಶ ಭ್ರಷ್ಟ ವಿಜಯ್ ಮಲ್ಯ ವಿಚಾರದಲ್ಲಿ ಸಡಿಲ ನೀತಿ ಅನುಸರಿಸಿಲ್ಲ: ಎಸ್‌ಬಿಐ

9 ಸಾವಿರ ಕೋಟಿ ರುಪಾಯಿ ಸಾಲ ವಂಚಿಸಿ ವಿದೇಶಕ್ಕೆ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ ಪ್ರಕರಣದಲ್ಲಿ ದೂರು ದಾಖಲಿಸಲು ಮತ್ತು ಇತರ ಪ್ರಕ್ರಿಯೆ...

Vishwanath S
Updated On : 14 Sept 2018, 7:02 am
ನವದೆಹಲಿ: 9 ಸಾವಿರ ಕೋಟಿ ರುಪಾಯಿ ಸಾಲ ವಂಚಿಸಿ ವಿದೇಶಕ್ಕೆ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ ಪ್ರಕರಣದಲ್ಲಿ ದೂರು ದಾಖಲಿಸಲು ಮತ್ತು ಇತರ ಪ್ರಕ್ರಿಯೆ ಕೈಗೊಳ್ಳಲು ವಿಳಂಬ ನೀತಿ ಅನುಸರಿಸಿಲ್ಲ ಎಂದು ಎಸ್‌ಬಿಐ ಹೇಳಿದೆ. 
ಬ್ಯಾಂಕುಗಳ ಸಾಲ ವಂಚನೆ ಪ್ರಕರಣದಲ್ಲಿ ಮಲ್ಯ ಪರಾರಿಯಾಗಲು ಬ್ಯಾಂಕ್ ಗಳ ವಿಳಂಬ ಧೋರಣೆಯೇ ಕಾರಣ ಎಂಬ ಮಾತುಗಳು ಕೇಳಿಬಂದ ಹಿನ್ನೆಲೆಯಲ್ಲಿ ಸ್ಪಷ್ಟನೆ ನೀಡಿರುವ ಎಸ್‌ಬಿಐ ಮಲ್ಯ ವಿಚಾರದಲ್ಲಿ ಯಾವುದೇ ವಿಳಂಬ ನೀತಿ ಅನುಸರಿಸಿಲ್ಲ. ಬ್ಯಾಂಕ್ ನಿಯಮದ ಅನುಸಾರ ಕ್ರಮ ಕೈಗೊಳ್ಳಲಾಗಿದೆ. ಮಲ್ಯ ಪರಾರಿಯಾಗಲು ಅನುಕೂಲ ಕಲ್ಪಿಸಲಾಗಿದೆ ಎಂಬ ಆರೋಪಗಳು ಸತ್ಯಕ್ಕೆ ದೂರವಾಗಿದೆ ಎಂದು ಹೇಳಿದೆ. 
2016ರ ಮಾರ್ಚ್ 2ರಂದು ವಿಜಯ್ ಮಲ್ಯ ವಿದೇಶಕ್ಕೆ ಪರಾರಿಯಾಗಿದ್ದು ಅದಾದ ನಾಲ್ಕು ದಿನಗಳ ನಂತರ 13 ಬ್ಯಾಂಕ್ ಗಳು ಸುಪ್ರೀಂಕೋರ್ಟ್ ಗೆ ದೂರು ಸಲ್ಲಿಸಿ, ಮಲ್ಯ ವಿದೇಶಕ್ಕೆ ಪರಾರಿಯಾಗದಂತೆ ಕ್ರಮ ಕೈಗೊಳ್ಳಬೇಕು ಮತ್ತು ಸಾಲ ವಸೂಲಾತಿಗೆ ವ್ಯವಸ್ಥೆ ಮಾಡಬೇಕು ಎಂದು ಕೋರಿ ಕೊಂಡಿದ್ದವು. ಆದರೆ ಅಷ್ಟರಲ್ಲಾಗಲೇ ಮಲ್ಯ ವಿದೇಶಕ್ಕೆ ಪರಾರಿಯಾಗಿದ್ದು ಬ್ಯಾಂಕ್ ಗಳು ನಂತರ ಎಚ್ಚೆತ್ತುಕೊಂಡಿವೆ ಎಂದು ಆರೋಪಿಸಲಾಗಿದೆ. 

Advertisement

Advertisement

ವಿಜಯ್ ಮಲ್ಯ ಒಟ್ಟಾರೆ 17 ಬ್ಯಾಂಕ್ ಗಳಿಗೆ ಸುಮಾರು 9 ಸಾವಿರ ಕೋಟಿ ರುಪಾಯಿ ವಂಚನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments