ನವದೆಹಲಿ: ಭಾರತದಲ್ಲಿ ಗಗನದತ್ತ ಮುಖ ಮಾಡಿರುವ ತೈಲೋತ್ಪನ್ನಗಳ ಬೆಲೆ ಮತ್ತೆ ಏರಿಕೆಯಾಗಿದ್ದು, ದೆಹಲಿಯಲ್ಲಿ ಇಂದು ಪ್ರತೀ ಲೀಟರ್ ಪೆಟ್ರೋಲ್ ದರ 82.86ಕ್ಕೆ ಏರಿಕೆಯಾಗಿದೆ.
ಪ್ರತೀ ಲೀಟರ್ ಪೆಟ್ರೋಲ್ ದರದಲ್ಲಿ 14 ಪೈಸೆಯಷ್ಟು ಏರಿಕೆಯಾಗಿದ್ದು, ಡೀಸೆಲ್ ದರ 10 ಪೈಸೆಯಷ್ಟು ಏರಿಕೆಯಾಗಿದೆ. ಆ ಮೂಲಕ ದೆಹಲಿಯಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 82.86ಕ್ಕೆ ಏರಿಕೆಯಾಗಿದ್ದು, ಡೀಸೆಲ್ ದರ 74.12ಕ್ಕೆ ಏರಿಕೆಯಾಗಿದೆ. ಇನ್ನು ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ಪ್ರತೀ ಲೀಟರ್ ಪೆಟ್ರೋಲ್ 90 ರೂ ಗಡಿ ದಾಟಿದ್ದು, ಪ್ರತೀ ಲೀಟರ್ ಪೆಟ್ರೋಲ್ ದರ ಮುಂಬೈನಲ್ಲಿ 90.22ಕ್ಕೆ ಏರಿಕೆಯಾಗಿದ್ದು, ಡೀಸೆಲ್ ದರ 78.69ಕ್ಕೆ ಏರಿಕೆಯಾಗಿದೆ.
ಇನ್ನು ಬೆಂಗಳೂರಿನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 83.57 ರೂ ಗೆ ಏರಿಕೆಯಾಗಿದೆ.