ವಾಣಿಜ್ಯ

ಎನ್ಎಸ್ಇ ಅಧ್ಯಕ್ಷ ಸ್ಥಾನಕ್ಕೆ ಅಶೋಕ್ ಚಾವ್ಲಾ ರಾಜೀನಾಮೆ

Lingaraj Badiger
ನವದೆಹಲಿ: ಏರ್ ಸೆಲ್ - ಮ್ಯಾಕ್ಸಿಸ್ ಪ್ರಕರಣದಲ್ಲಿ ತಮ್ಮ ವಿರುದ್ಧ ಕಾನೂನು ಕ್ರಮ ಜರುಗಿಸಲು ಸಿಬಿಐಗೆ ಕೇಂದ್ರ ಸರ್ಕಾರ ಅನುಮತಿ ನೀಡಿದ ಕೆಲವೇ ಗಂಟೆಗಳಲ್ಲಿ ರಾಷ್ಟ್ರೀಯ ಷೇರು ವಿನಿಮಯ ಕೇಂದ್ರ(ಎನ್ಎಸ್ಇ)ದ ಅಧ್ಯಕ್ಷ ಅಶೋಕ್ ಚಾವ್ಲಾ ಅವರನ್ನು ಶುಕ್ರವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಮಾಜಿ ಹಣಕಾಸು ಕಾರ್ಯದರ್ಶಿಯಾಗಿರುವ ಅಶೋಕ್ ಚಾವ್ಲಾ ಅವರು ತಕ್ಷಣದಿಂದ ಜಾರಿಗೆ ಬರುವಂತೆ ಎನ್ಎಸ್ ಇ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಚಾವ್ಲಾ ಅವರು 2016, ಮಾರ್ಚ್ 28ರಂದು ಎನ್ಎಸ್ಇ ಅಧ್ಯಕ್ಷರಾಗಿ ಅಧಿಕಾರವನ್ನು ವಹಿಸಿಕೊಂಡಿದ್ದರು.
ಏರ್ ಸೆಲ್ - ಮ್ಯಾಕ್ಸಿಸ್ ಪ್ರಕರಣದಲ್ಲಿ ಆರೋಪಿಗಳಾಗಿರುವ ಚಾವ್ಲಾ ಸೇರಿದಂತೆ ಐವರು ಹಾಲಿ ಮತ್ತು ಮಾಜಿ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ ಎಂದು ಸಿಬಿಐ ಇಂದು ವಿಶೇಷ ನ್ಯಾಯಾಲಯಕ್ಕೆ ತಿಳಿಸಿತ್ತು.
SCROLL FOR NEXT