ವಾಣಿಜ್ಯ

ಆರ್ಥಿಕತೆ, ಮೂಲಭೂತ ಸೌಕರ್ಯಗಳಲ್ಲಿ ಭಾರತ ಚೀನಾವನ್ನು ಹಿಂದಿಕ್ಕಲಿದೆ: ರಘುರಾಮ್ ರಾಜನ್

Srinivas Rao BV
ನವದೆಹಲಿ: ಭಾರತ ಮುಂದಿನ ದಿನಗಳಲ್ಲಿ ಆರ್ಥಿಕತೆ ಹಾಗೂ ಮೂಲಭೂತ ಸೌಕರ್ಯಗಳನ್ನು ಒದಗಿಸುವ ವಿಷಯದಲ್ಲಿ ಚೀನಾವನ್ನು ಹಿಂದಿಕ್ಕಲಿದೆ ಎಂದು ಆರ್ ಬಿಐ ಗೌರ್ನರ್ ರಘುರಾಮ್ ರಾಜನ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. 
ದಕ್ಷಿಣ ಏಷ್ಯಾಗೆ ಕಾರ್ಯತಂತ್ರದ ಮುನ್ನೋಟ ಎಂಬ ವಿಷಯದ ಕುರಿತು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿರುವ ರಘುರಾಮ್ ರಾಜನ್, ದಕ್ಷಿಣ ಏಷ್ಯಾದಲ್ಲಿ ಐತಿಹಾಸಿಕವಾಗಿ ಭಾರತ ದೊಡ್ಡ ಪಾತ್ರ ವಹಿಸಿತ್ತು. ಆದರೆ ಈಗ ಚೀನಾ ಭಾರತಕ್ಕಿಂತ ದೊಡ್ಡದಾಗಿ ಬೆಳೆದಿದ್ದು ದಕ್ಷಿಣ ಏಷ್ಯಾದಲ್ಲಿ ಭಾರತಕ್ಕೆ ಪರ್ಯಾಯ ಎಂಬಂತೆ ತನ್ನನ್ನು ತಾನು ಬಿಂಬಿಸಿಕೊಂಡಿದೆ. ಇತ್ತೀಚಿನ ದಿನಗಳಲ್ಲಿ ಚೀನ ಆರ್ಥಿಕ ಬೆಳವಣಿಗೆ ದರ ಕಡಿಮೆಯಾಗುತ್ತಿದೆ. ಭಾರತದ ಆರ್ಥಿಕ ಬೆಳವಣಿಗೆ ಏರುಗತಿಯಲ್ಲೇ  ಇದ್ದು ಭಾರತ ಆರ್ಥಿಕತೆ ಹಾಗೂ ಮೂಲಭೂತ ಸೌಕರ್ಯ  ವಿಷಯದಲ್ಲಿ ಚೀನಾವನ್ನು ಹಿಂದಿಕ್ಕಲಿದೆ ಎಂದು ಹೇಳಿದ್ದಾರೆ. 
ನೇಪಾಳ ಹಾಗೂ ಪಾಕಿಸ್ತಾನಗಳಲ್ಲಿ 2017 ರಲ್ಲಿ ಚೀನಾ ಹಲವು ಮೂಲಸೌಕರ್ಯ ಯೋಜನೆಗಳನ್ನು ಕೈಗೊಂಡಿದ್ದು ಈ ನಿಟ್ಟಿನಲ್ಲಿ ಕೆಲ್ಸ ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ನೆರೆ ರಾಷ್ಟ್ರಗಳಿಗೆ ಮೂಲಭೂತಸೌಕರ್ಯ ಯೋಜನೆಗಳಿಗೆ ಗೆ ಚೀನಾ ಸಹಾಯ ಮಾಡಿ ವಿದೇಶಾಂಗ ನೀತಿ  ಬೆಳೆಸುತ್ತಿರುವ ಹಿನ್ನೆಲೆಯಲ್ಲಿ ರಘುರಾಮ್ ರಾಜನ್ ಅವರ ಹೇಳಿಕೆ ಮಹತ್ವ ಪಡೆದುಕೊಂಡಿದೆ. 
SCROLL FOR NEXT