ವಾಣಿಜ್ಯ

ಸಬ್ಸಿಡಿ ರಹಿತ ಅಡುಗೆ ಅನಿಲ ದರ 100 ರೂ. ಇಳಿಕೆ

Srinivasamurthy VN
ನವದೆಹಲಿ: ಸಬ್ಸಿಡಿ ರಹಿತ ಅಡುಗೆ ಅನಿಲ (ಎಲ್ ಪಿಜಿ) ದರಗಳಲ್ಲಿ 100 ಇಳಿಕೆ ಮಾಡಲಾಗಿದೆ.
ಹೌದು..ಸಬ್ಸಿಡಿ ರಹಿತ ಅಡುಗೆ ಅನಿಲ (ಎಲ್ ಪಿಜಿ)ದರಗಳಲ್ಲಿ 100.50 ಇಳಿಕೆ ಮಾಡಲಾಗಿದ್ದು, ನೂತನ ದರಗಳು ಇಂದಿನಿಂದಲೇ ಜಾರಿಗೆ ಬರಲಿವೆ.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅನಿಲ ದರಗಳು ಗಣನೀಯವಾಗಿ ಇಳಿಕೆಯಾಗಿರುವುದರಿಂದ ಈ ಕ್ರಮ ಕೈಗೊಳ್ಳಲಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವ ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಸಂಸ್ಥೆ ಇಂಡಿಯನ್‌ ಆಯಿಲ್‌ ಕಾರ್ಪೊರೇಷನ್‌ (ಐಒಸಿ), ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಅನಿಲ ದರಗಳು ಅಗ್ಗವಾಗಿರುವುದರಿಂದ  ಬೆಲೆ ಕಡಿತ ಮಾಡಲಾಗಿದೆ ಎಂದು ತಿಳಿಸಿದೆ. 
ಹೀಗಾಗಿ ಪ್ರತೀ ಸಬ್ಸಿಡಿ ರಹಿತ ಅನಿಲ ಸಿಲಿಂಡರ್ ಬೆಲೆಯಲ್ಲಿ 100.50 ರೂಕಡಿತವಾಗಲಿದೆ. ದೆಹಲಿಯಲ್ಲಿ ಪ್ರತಿ ಸಿಲಿಂಡರ್‌ ಬೆಲೆ ರೂ 737.50 ರಿಂದ ರೂ 637ಕ್ಕೆ ಇಳಿದಿದೆ.
ಇನ್ನು ಸಬ್ಸಿಡಿ ಸಹಿತ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲಾಗಿದೆ.
SCROLL FOR NEXT