ಅನಿಲ್ ಅಂಬಾನಿ 
ವಾಣಿಜ್ಯ

ರಿಲಯನ್ಸ್‌ ಕಮ್ಯುನಿಕೇಷನ್ಸ್ ನಿರ್ದೇಶಕ ಹುದ್ದೆಗೆ ಅನಿಲ್ ಅಂಬಾನಿ ರಾಜೀನಾಮೆ

ರಿಲಯನ್ಸ್‌ ಕಮ್ಯುನಿಕೇಷನ್ಸ್ ಅಧ್ಯಕ್ಷ ಅನಿಲ್ ಧಿರೂಭಾಯಿ ಅಂಬಾನಿ ಅವರು ಕಂಪನಿಯ ನಿರ್ದೇಶಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಮುಂಬೈ: ರಿಲಯನ್ಸ್‌ ಕಮ್ಯುನಿಕೇಷನ್ಸ್ ಅಧ್ಯಕ್ಷ ಅನಿಲ್ ಧಿರೂಭಾಯಿ ಅಂಬಾನಿ ಅವರು ಕಂಪನಿಯ ನಿರ್ದೇಶಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ರಿಲಯನ್ಸ್‌ ಕಮ್ಯುನಿಕೇಷನ್ಸ್ ನೀಡಿರುವ ಪತ್ರಿಕಾ ಪ್ರಕಟಣೆಯ ಪ್ರಕಾರ, ಕಂಪನಿಯ ನಿರ್ದೇಶಕರಾಗಿದ್ದ ಛಾಯಾ ವಿರಾನಿ, ರ್‍ಯಾನಾ ಕರಾನಿ, ಮಂಜರಿ ಕಾಕೆರ್ ಮತ್ತು ಸುರೇಶ್ ರಂಗಾಚಾರ್ ಅವರು ಸಹ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದಾರೆ.

ಅಂಬಾನಿ, ಛಾಯಾ ವಿರಾನಿ, ಮಂಜರಿ ಕೇಕರ್ ಅವರು ನವೆಂಬರ್ 15ರಂದು, ರ್‍ಯಾನಾ ಕರಾನಿ ಅವರು ನವೆಂಬರ್ 14ರಂದು ಮತ್ತು ಸುರೇಶ್ ರಂಗಾಚಾರ್ ಅವರು ನವೆಂಬರ್ 13ರಂದು ರಾಜೀನಾಮೆ ನೀಡಿದ್ದಾರೆ. 

ಕಳೆದ ಅಕ್ಟೋಬರ್ 4ರಂದು ಮಣಿಕಂಠನ್ ವಿ. ಅವರು ಕಂಪನಿಯ ನಿರ್ದೇಶಕ ಹಾಗೂ ಮುಖ್ಯ ಹಣಕಾಸು ಅಧಿಕಾರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ