ವಾಣಿಜ್ಯ

ಕೇಂದ್ರ ಸರ್ಕಾರದ ಮಧ್ಯ ಪ್ರವೇಶ: ಬ್ಯಾಂಕ್ ಮುಷ್ಕರ ಅನಿರ್ಧಿಷ್ಠಾವಧಿಗೆ ಮುಂದೂಡಿಕೆ

Srinivasamurthy VN

ನವದೆಹಲಿ: ಬ್ಯಾಂಕ್‌ಗಳ ವಿಲೀನ ವೇತನ ಸಮಸ್ಯೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಕರೆ ನೀಡಲಾಗಿದ್ದ 48 ಗಂಟೆಗಳ ಬ್ಯಾಂಕ್ ನೌಕರರ ಮುಷ್ಕರವನ್ನು ಅನಿರ್ಧಿಷ್ಠಾವಧಿಗೆ ಮುಂದೂಡಿಕೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಬ್ಯಾಂಕ್‌ಗಳ ವಿಲೀನ ವಿರೋಧಿಸಿ, ಅಖಿಲ ಭಾರತ ಬ್ಯಾಂಕ್ ನೌಕರರ ಸಂಘ ಕರೆಕೊಟ್ಟಿದ್ದ 2 ದಿನ ಗಳ ಬ್ಯಾಂಕ್ ಮುಷ್ಕರವನ್ನು ಮುಂದೂಡಿದೆ. ಬ್ಯಾಂಕ್ ವಿಲೀನ ಸಂಬಂಧ ಉದ್ಭವಿಸಿರುವ  ಸಮಸ್ಯೆ ಪರಿಹರಿಸಲು ವಿಲೀನ ಗೊಳ್ಳುತ್ತಿರುವ ಬ್ಯಾಂಕ್‌ಗಳ ಅಧಿಕಾರಿಗಳನ್ನೊಳ ಗೊಂಡ ಸಮಿತಿ ರಚನೆ ಮಾಡಿ ಪರಿಹಾರ ಸೂಚಿಸಲಾಗುವುದು ಎಂದು ಕೇಂದ್ರ ಹಣಕಾಸು ಕಾರ್ಯದರ್ಶಿ ಭರವಸೆ ನೀಡಿದ್ದರಿಂದ ಸೆಪ್ಟೆಂಬರ್  26 ಹಾಗೂ 27 ರಂದು ನಡೆಸಲು ತೀರ್ಮಾನಿಸಲಾಗಿದ್ದ 48 ಗಂಟೆಗಳ ಮುಷ್ಕರ ಮುಂದೂಡಲಾಗಿದೆ ಎಂದು ಸಂಘ ತಿಳಿಸಿದೆ.

ಅತ್ತ ಬ್ಯಾಂಕ್ ನೌಕರರ ಒಕ್ಕೂಟ ಮುಷ್ಕರಕ್ಕೆ ಕರೆ ನೀಡಿದ ಹಿನ್ನಲೆಯಲ್ಲಿ ಇತ್ತೀಚೆಗೆ ವಿತ್ತ ಸಚಿವಾಲಯದ ಕಾರ್ಯದರ್ಶಿ ರಾಜೀವ್ ಕುಮಾರ್ ಸಂಧಾನಸಭೆ ನಡೆಸಿದ್ದರು. ಈ ವೇಳೆ ಸಿಬ್ಬಂದಿಗಳ ಸಮಸ್ಯೆಗಳ ಕುರಿತು ಒಂದು ಸಮಿತಿ ರಚನೆ ಮಾಡಲು ಒಪ್ಪಿಗೆ ಸೂಚಿಸಿದ್ದರಿಂದ ಒಕ್ಕೂಟ ಅನಿರ್ಧಿಷ್ಟಾವಧಿಗೆ ಮುಷ್ಕರ ಮುಂದೂಡಿದೆ.

ಬ್ಯಾಂಕ್ ಗಳ ವಿಲೀನ, ವೇತನ ಸಮಸ್ಯೆ ಪರಿಷ್ಕಾರ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದೇಶದ ನಾಲ್ಕು ಪ್ರಮುಖ ಬ್ಯಾಂಕಿಂಗ್ ಸಿಬ್ಬಂದಿಗಳ ಒಕ್ಕೂಟಗಳಾದ ಅಖಿಲ ಭಾರತ ಬ್ಯಾಂಕ್ ಅಧಿಕಾರಿಗಳ ಸಂಘ (ಎಐಬಿಒಎ), ಅಖಿಲ ಭಾರತ ಬ್ಯಾಂಕ್ ಅಧಿಕಾರಿಗಳ ಒಕ್ಕೂಟ (ಎಐಬಿಒಸಿ), ಬ್ಯಾಂಕ್ ಅಧಿಕಾರಿಗಳ ರಾಷ್ಟ್ರೀಯ ಸಂಸ್ಥೆ (ನೊಬೊ), ಮತ್ತು ಭಾರತೀಯ ರಾಷ್ಟ್ರೀಯ ಬ್ಯಾಂಕ್ ಅಧಿಕಾರಿಗಳ ಕಾಂಗ್ರೆಸ್ (ಐಎನ್‌ಬಿಒಸಿ) ಸೆಪ್ಟೆಂಬರ್  26 ಹಾಗೂ 27 ರಂದು 2 ದಿನಗಳ ಮುಷ್ಕರಕ್ಕೆ ಕರೆ ನೀಡಿತ್ತು

SCROLL FOR NEXT