ವಾಣಿಜ್ಯ

ಜನಧನ್ ಯೋಜನೆ ಖಾತೆ ಇರುವ ಮಹಿಳೆಯರಿಗೆ ಇಂದಿನಿಂದ ನೇರ ಹಣ ವರ್ಗಾವಣೆ

ಕೋವಿಡ್‌19 ಸಾಂಕ್ರಾಮಿಕ ರೋಗ ತೀವ್ರವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿಗಳು ಬಡವರ ಕಲ್ಯಾಣ ಯೋಜನೆಯಡಿ ಮಹಿಳೆಯರಿಗೆ 500 ರೂಪಾಯಿಗಳನ್ನು ಶುಕ್ರವಾರದಿಂದ ಜನಧನ್‌ ಖಾತೆಗಳಿಗೆ ನೇರ ವರ್ಗಾಯಿಸುವುದಾಗಿ ಹಣಕಾಸು ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

ನವದೆಹಲಿ: ಕೋವಿಡ್‌19 ಸಾಂಕ್ರಾಮಿಕ ರೋಗ ತೀವ್ರವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿಗಳ ಬಡವರ ಕಲ್ಯಾಣ ಯೋಜನೆಯಡಿ ಮಹಿಳೆಯರಿಗೆ 500 ರೂಪಾಯಿಗಳನ್ನು ಶುಕ್ರವಾರದಿಂದ ಜನಧನ್‌ ಖಾತೆಗಳಿಗೆ ನೇರ ವರ್ಗಾಯಿಸುವುದಾಗಿ ಹಣಕಾಸು ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

ಈ ಕುರಿತು ಗ್ರಾಮೀಣಾಭಿವೃದ್ಧಿ ಸಚಿವಾಲಯಕ್ಕೆ ಮಾಹಿತಿ ನೀಡಲಾಗಿದ್ದು ಪ್ರಧಾನಮಂತ್ರಿಗಳ ಜನಧನ್‌ ಯೋಜನೆಯ ಖಾತೆ ಇರುವ ಮಹಿಳೆಯರಿಗೆ ಏಪ್ರಿಲ್‌ 2020ರ ಅವಧಿಯ 500 ರೂಪಾಯಿಗಳನ್ನು ಇಂದಿನಿಂದ ಆಯಾ ಖಾತೆಗಳಿಗೆ ವರ್ಗಾಯಿಸಲಾಗುತ್ತದೆ ಎಂದು ಸಚಿವಾಲಯದ ಜಂಟಿ ಕಾರ್ಯದರ್ಶಿ ಸುಚಿಂದ್ರ ಮಿಶ್ರಾ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಅನಿವಾರ್ಯವಾಗಿದ್ದು, ಖಾತೆದಾರರು, ಬ್ಯಾಂಕ್‌ನಿಂದ ಹಣ ಪಡೆಯುವುದಕ್ಕೆ ಏಕಕಾಲಕ್ಕೆ ಧಾವಿಸುವಂತಾಗಬಾರದು ಎಂದು ಖಾತೆಗಳ ಸಂಖ್ಯೆಗಳ ಕಡೆಯ ಅಂಕಿಯ ಆಧಾರದ ಮೇಲೆ ದಿನಾಂಕಗಳನ್ನು ನಿಗದಿ ಮಾಡಿದ್ದು, ಖಾತೆದಾರರು ಅಂದರಂತೆ ಹಣವನ್ನು ಪಡೆದುಕೊಳ್ಳಬಹುದಾಗಿದೆ.

0 ಅಥವಾ1 ಅಂಕೆಯಿಂದ ಕೊನೆಗೊಳ್ಳುವ ಖಾತೆ ಸಂಖ್ಯೆಯುಳ್ಳವರು ಇಂದು, 2 ಅಥವಾ 3 ಅಂಕೆಯಿಂದ ಕೊನೆಗೊಳ್ಳುವ ಸಂಖ್ಯೆಯುಳ್ಳವರು ನಾಳೆ ಅಂದರೆ ಏಪ್ರಿಲ್ 4, 4 ಅಥವಾ 5 ಅಂಕೆಯುಳ್ಳವರು ಏಪ್ರಿಲ್‌ 7ರಂದು, 6 ಅಥವಾ 7 ಅಂಕೆಯುಳ್ಳವರು ಏಪ್ರಿಲ್‌ 8ರಂದು ಹಾಗೂ 8 ಅಥವಾ 9 ಅಂಕೆಯುಳ್ಳ ಖಾತೆ ಸಂಖ್ಯೆಯುಳ್ಳವರು ಏಪ್ರಿಲ್‌9ರಂದು ಹಣವನ್ನು ಪಡೆದುಕೊಳ್ಳಬಹುದಾಗಿದೆ. 9ನೇ ತಾರೀಖಿ ನಂತರ ಯಾವುದೇ ಬ್ಯಾಂಕ್‌ ಅವಧಿಯಲ್ಲಿ ಶಾಖೆಗಳಿಗೆ ಭೇಟಿ ನೀಡಿ ಹಣ ಪಡೆದುಕೊಳ್ಳಬಹುದು.

ಅಲ್ಲದೆ ಬ್ಯಾಂಕ್‌ಗಳಿಗೆ, ಖಾತೆದಾರರಿಗೆ ಅವರ ಖಾತೆ ಸಂಖ್ಯೆಗಳನ್ನು ಆಧರಿಸಿ, ಹಣ ಜಮೆಯಾಗಿರುವ ಮಾಹಿತಿ ನೀಡುವ ಜೊತೆಗೆ ಯಾವ ಶಾಖೆಗೆ ಭೇಟಿಯಾಗಬೇಕು ಎಂಬುದನ್ನು ತಿಳಿಸುವಂತೆ ಸಚಿವಾಲಯದ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಈ ಸಂಬಂಧ ಎಸ್ಸೆಮ್ಮೆಸ್‌ ಜೊತೆಗೆ ಸ್ಥಳೀಯವಾಗಿ ಪತ್ರಿಕೆಗಳು, ಕೇಬಲ್‌ ನೆಟ್‌ವರ್ಕ್‌, ಸ್ಥಳೀಯ ವಾಹಿನಿಗಳು, ರೇಡಿಯೋ ಇತ್ಯಾದಿ ಮಾಧ್ಯಮಗಳ ಮೂಲಕ ಪ್ರಚಾರ ನೀಡುವಂತೆ ತಿಳಿಸಲಾಗಿದೆ.

ಎಸ್‌ಎಲ್‌ಬಿಸಿ ಸಮನ್ವಯಕಾರರು ಕೂಡಲೇ ರಾಜ್ಯ ಸರ್ಕಾರಗಳನ್ನು ಸಂಪರ್ಕಿಸಿ, ಖಾತೆದಾರರು ಏಕಕಾಲಕ್ಕೆ ಬ್ಯಾಂಕ್‌ ಶಾಖೆಗಳಿಗೆ ಎಡತಾಕದಂತೆ ಎಚ್ಚರವಹಿಸಲು ಸೂಚಿಸಲಾಗಿದೆ. ರಾಜ್ಯ ಸರ್ಕಾರಗಳು ಸ್ಥಳೀಯವಾಗಿ ಜಿಲ್ಲಾಡಳಿತಗಳಿಗೆ ಅಗತ್ಯ ಸೂಚನೆಗಳನ್ನು ನೀಡಿ, ಪೊಲೀಸ್‌ ಬೆಂಬಲದೊಂದಿಗೆ ಫಲಾನುಭವಿಗಳಿಗೆ ಯಾವುದೇ ಅನುನುಕೂಲವಾಗದಂತೆ ಹಣ ವಿತರಣೆಯಾಗುವಂತೆ ನೋಡಿಕೊಳ್ಳುವಂತೆ ಸಚಿವಾಲಯದ ಜಂಟಿ ಕಾರ್ಯದರ್ಶಿ ಸುಚಿಂದ್ರ ಮಿಶ್ರಾ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

SCROLL FOR NEXT