ವಾಣಿಜ್ಯ

ಕೋವಿಡ್-19: ಪಿಪಿಎಫ್, ಸುಕನ್ಯಾ ಸಮೃದ್ಧಿ ಕನಿಷ್ಠ ಠೇವಣಿ ಅವಧಿ ವಿಸ್ತರಣೆ

Sumana Upadhyaya

ನವದೆಹಲಿ: ಕೊರೋನಾ ವೈರಸ್ ಲಾಕ್ ಡೌನ್ ನಿಂದಾಗಿ ಆರ್ಥಿಕ ಚಟುವಟಿಕೆಗಳು ಸ್ಥಗಿತಗೊಂಡಿರುವುದರಿಂದ ಸಾರ್ವಜನಿಕ ಭವಿಷ್ಯ ನಿಧಿ(ಪಿಪಿಎಫ್) ಮತ್ತು ಸುಕನ್ಯಾ ಸಮೃದ್ಧಿ ಯೋಜನೆಯಡಿ ಯಲ್ಲಿ ಕಡ್ಡಾಯವಾಗಿ ಇಡಬೇಕಾದ ಕನಿಷ್ಠ ಠೇವಣಿ ಮೊತ್ತದ ಅವಧಿಯನ್ನು ಜೂನ್ 30ರವರೆಗೆ ವಿಸ್ತರಿಸಿ ಕೇಂದ್ರ ಹಣಕಾಸು ಸಚಿವಾಲಯ ಆದೇಶ ಹೊರಡಿಸಿದೆ.

ಪಿಪಿಎಫ್, ಸುಕನ್ಯಾ ಸಮೃದ್ಧಿ ಯೋಜನೆ ಮತ್ತು ಆರ್ ಡಿಗಳಲ್ಲಿ 2019-20ನೇ ಸಾಲಿನ ಕನಿಷ್ಠ ಠೇವಣಿ ಮೊತ್ತದ ಅವಧಿಯನ್ನು ವಿಸ್ತರಿಸಲಾಗಿದೆ. ಸಣ್ಣ ಉಳಿತಾಯ ಖಾತೆದಾರರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ಈ ನಿರ್ಧಾರ ಕೈಗೊಂಡಿದೆ ಎಂದು ಸಚಿವಾಲಯ ಟ್ವೀಟ್ ಮೂಲಕ ತಿಳಿಸಿದೆ.
 

SCROLL FOR NEXT