ವಾಣಿಜ್ಯ

ಆಧಾರ್-ಪ್ಯಾನ್ ಲಿಂಕ್ ಮಾಡದಿದ್ದರೆ 17 ಕೋಟಿಗೂ ಹೆಚ್ಚು ಪ್ಯಾನ್ ಕಾರ್ಡ್‌ಗಳು ನಿಷ್ಕ್ರಿಯ!

ಮುಂದಿನ  ಮಾರ್ಚ್ ಅಂತ್ಯದ ವೇಳೆಗೆ ಆಧಾರ್‌ನೊಂದಿಗೆ ಪ್ಯಾನ್ ಲಿಂಕ್ ಮಾಡದಿದ್ದರೆ  ದೇಶದಲ್ಲಿ  17 ಕೋಟಿಗೂ ಹೆಚ್ಚು ಪ್ಯಾನ್ ಕಾರ್ಡ್‌ಗಳು ನಿಷ್ಕ್ರಿಯವಾಗಲಿದೆ.

ನವದೆಹಲಿ: ಮುಂದಿನ  ಮಾರ್ಚ್ ಅಂತ್ಯದ ವೇಳೆಗೆ ಆಧಾರ್‌ನೊಂದಿಗೆ ಪ್ಯಾನ್ ಲಿಂಕ್ ಮಾಡದಿದ್ದರೆ  ದೇಶದಲ್ಲಿ  17 ಕೋಟಿಗೂ ಹೆಚ್ಚು ಪ್ಯಾನ್ ಕಾರ್ಡ್‌ಗಳು ನಿಷ್ಕ್ರಿಯವಾಗಲಿದೆ.


2020ರ ಮಾರ್ಚ್ 31ರೊಳಗೆ ಆಧಾರ್‌ನೊಂದಿಗೆ ಲಿಂಕ್ ಮಾಡದಿದ್ದರೆ  ಶಾಶ್ವತ ಖಾತೆ ಸಂಖ್ಯೆ (ಪ್ಯಾನ್) ನಿಷ್ಕ್ರಿಯಗೊಂಡು ಪ್ರಯೋಜನಕ್ಕೆ ಬಾರದಂತೆ ಆಗಲಿದೆ ಎಂದು ಆದಾಯ ತೆರಿಗೆ ಇಲಾಖೆ ಎಚ್ಚರಿಕೆ ನೀಡಿದೆ. 


ಪ್ಯಾನ್ ಮತ್ತು ಆಧಾರ್ ಸಂಪರ್ಕಿಸುವ ಗಡುವನ್ನು ಈಗಾಗಲೇ ಹಲವು ಭಾರಿ ವಿಸ್ತರಿಸಲಾಗಿದೆ ಮತ್ತು ಇತ್ತೀಚಿನ ಗಡುವು ಬರುವ ಮಾರ್ಚ್ 31, 2020ಕ್ಕೆ ಕೊನೆಯಾಗಲಿದೆ ಎಂದೂ ಇಲಾಖೆ ಹೇಳಿದೆ. 


ಇತ್ತೀಚಿನ ಅಂಕಿಅಂಶಗಳ ಪ್ರಕಾರ, ಈಗಾಗಲೇ 30.75 ಕೋಟಿಗೂ ಹೆಚ್ಚು ಪ್ಯಾನ್‌ಗಳನ್ನು ಆಧಾರ್‌ಗೆ ಜೋಡಿಸಲಾಗಿದ್ದು  17.58 ಕೋಟಿ ಪ್ಯಾನ್‌ಗಳನ್ನು ಇನ್ನೂ 12-ಅಂಕಿಯ ಬಯೋಮೆಟ್ರಿಕ್ ಐಡಿಯೊಂದಿಗೆ ಜೋಡಿಸಲಾಗಿಲ್ಲ.


ಸುಪ್ರೀಂ ಕೋರ್ಟ್ 2018ರ ಸೆಪ್ಟೆಂಬರ್‌ನಲ್ಲಿ ಆಧಾರ್ ಅನ್ನು ಸಾಂವಿಧಾನಿಕವಾಗಿ ಮಾನ್ಯ ಎಂದು ಘೋಷಿಸಿ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸಲು ಮತ್ತು ಪ್ಯಾನ್ ಕಾರ್ಡ್‌ಗಳ ಹಂಚಿಕೆಗೆ ಬಯೋಮೆಟ್ರಿಕ್ ಐಡಿ ಕಡ್ಡಾಯ ಎಂದೂ   ಅಭಿಪ್ರಾಯಪಟ್ಟಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಇನ್ನೂ ನನಸಾಗಿಲ್ಲ ದಶಕಗಳ ಕನಸು: ಹಾಸನ ವಿಮಾನ ನಿಲ್ದಾಣಕ್ಕೆ ಸಿಗದ ರೆಕ್ಕೆ, ಯೋಜನೆಗೆ ಅಡ್ಡಿಯಾಗಿದೆ ಸಂಪನ್ಮೂಲ-ರಾಜಕೀಯ ಇಚ್ಛಾಶಕ್ತಿ ಕೊರತೆ..!

SCROLL FOR NEXT