ವಾಣಿಜ್ಯ

2019ರ ಅಕ್ಟೋಬರ್-ಡಿಸೆಂಬರ್ ತ್ರೈಮಾಸಿಕ ಭಾರತದ ಜಿಡಿಪಿ ಶೇ. 4.7!

Vishwanath S

2019ರ ಅಕ್ಟೋಬರ್-ಡಿಸೆಂಬರ್ ತ್ರೈಮಾಸಿಕದಲ್ಲಿ ದೇಶೀಯ ಉತ್ಪನ್ನ(ಜಿಡಿಪಿ) 4.7ರಷ್ಟಿದೆ ಎಂದು ಅಂಕಿ-ಅಂಶಗಳು ತಿಳಿಸಿವೆ.

ಕಳೆದ ವರ್ಷ ಜುಲೈ ಹಾಗೂ ಸೆಪ್ಟೆಂಬರ್ ಮಧ್ಯದ 2ನೇ ತ್ರೈಮಾಸಿಕ ಜಿಡಿಪಿ ದರ 4.5ಕ್ಕೆ ಕುಸಿತ ಕಂಡಿತ್ತು. ಇದು ಕಳೆದ ಆರು ವರ್ಷಗಳಲ್ಲಿ ದಾಖಲಾದ ಅತೀ ಕಡಿಮೆ ಬೆಳವಣಿಗೆಯ ದರವಾಗಿತ್ತು. 

ಅಕ್ಟೋಬರ್-ಡಿಸೆಂಬರ್ ತ್ರೈಮಾಸಿಕದಲ್ಲಿ ಜಿಡಿಪಿ 4.7ರಷ್ಟೀದೆ ಎಂದು ಅಧಿಕೃತ ಅಂಕಿ ಅಂಶಗಳು ತಿಳಿಸಿವೆ. ಇನ್ನು 2019ರ ಜುಲೈ-ಸೆಪ್ಟೆಂಬರ್ ತ್ರೈಮಾಸಿಕ ಜಿಡಿಪಿ ಶೇ. 4.5ರಿಂದ ಶೇ. 5.1ಕ್ಕೆ ಪರಿಷ್ಕರಿಸಲಾಗಿದೆ.

ಮಾರ್ಚ್ ಅಂತ್ಯದ ಹಣಕಾಸು ವರ್ಷದಲ್ಲಿ ಒಟ್ಟಾರೆ ಜಿಡಿಪಿ ಬೆಳವಣಿಗೆಯನ್ನು ಕೇಂದ್ರ ಸರ್ಕಾರವು ಶೇಕಡಾ 5ರಷ್ಟನ್ನು ನಿಗದಿಪಡಿಸಿರುವ ಸಮಯದಲ್ಲಿ ದೇಶದ ಆರ್ಥಿಕ ಬೆಳವಣಿಗೆಯ ಕುರಿತು ರಾಷ್ಟ್ರೀಯ ಸಂಖ್ಯಾಶಾಸ್ತ್ರೀಯ ಕಚೇರಿಯ ಅಂದಾಜುಗಳು ಬಂದಿವೆ. 

ಭಾರತವನ್ನು 5 ಟ್ರಿಲಿಯನ್ ಡಾಲರ್ ಆರ್ಥಿಕತೆಯನ್ನಾಗಿ ಮಾಡುವ ಸರ್ಕಾರದ ಗುರಿಯನ್ನು ಸಾಧಿಸಲು ಬಜೆಟ್ ಚಾಲನಾ ಬಳಕೆ ಮತ್ತು ಮೂಲಸೌಕರ್ಯಗಳನ್ನು ಬಲಪಡಿಸಲು ಅಡಿಪಾಯ ಹಾಕಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಈ ಹಿಂದೆ ಹೇಳಿದ್ದರು.

SCROLL FOR NEXT