ಸಾಂದರ್ಭಿಕ ಚಿತ್ರ 
ವಾಣಿಜ್ಯ

ಸಂಧಾನ ಸಭೆ ವಿಫಲ: ಜ. 31 ರಿಂದ ಎರಡು ದಿನ ಅಖಿಲ ಭಾರತ ಬ್ಯಾಂಕ್ ಮುಷ್ಕರ

ಬ್ಯಾಂಕ್ ನೌಕರರು ಮತ್ತು ಅಧಿಕಾರಿಗಳ ಕಾರ್ಮಿಕ ಸಂಘಗಳ ವೇದಿಕೆಯಾದ ಬ್ಯಾಂಕ್ ನೌಕರರ ಸಂಘಗಳ ಸಂಯುಕ್ತ ಒಕ್ಕೂಟ(ಯುಎಫ್ ಬಿಯು)  ಜನವರಿ 31 ರಿಂದ ಎರಡು ದಿನಗಳ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿದೆ.

ಹೈದರಾಬಾದ್/ನವದೆಹಲಿ: ಬ್ಯಾಂಕ್ ನೌಕರರು ಮತ್ತು ಅಧಿಕಾರಿಗಳ ಕಾರ್ಮಿಕ ಸಂಘಗಳ ವೇದಿಕೆಯಾದ ಬ್ಯಾಂಕ್ ನೌಕರರ ಸಂಘಗಳ ಸಂಯುಕ್ತ ಒಕ್ಕೂಟ(ಯುಎಫ್ ಬಿಯು)  ಜನವರಿ 31 ರಿಂದ ಎರಡು ದಿನಗಳ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿದೆ.

ಇಂದು ಕೇಂದ್ರ ಕಾರ್ಮಿಕ ಸಚಿವಾಲಯದ ಮುಖ್ಯ ಕಾರ್ಮಿಕ ಆಯುಕ್ತ ರಾಜನ್ ವರ್ಮಾ ಅವರ ದೆಹಲಿಯ ನಿವಾಸದಲ್ಲಿ ನಡೆದ ಸಂಧಾನ ಸಭೆಯಲ್ಲಿ ಸರ್ಕಾರದಿಂದ ಯಾವುದೇ ಸಕಾರಾತ್ಮಕ ಪ್ರತಿಕ್ರಿಯೆ ದೊರೆಯದಿರುವುದರಿಂದ ಸಭೆ ವಿಫಲವಾಗಿದೆ. 

ಸಭೆಯಲ್ಲಿ ಭಾರತೀಯ ಬ್ಯಾಂಕ್ ಗಳ ಸಂಘ (ಐಬಿಎ) ಮತ್ತು ಹಣಕಾಸು ಸಚಿವಾಲಯದ ಹಣಕಾಸು ಸೇವೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು. 

ಯುಎಫ್ ಬಿಯು ಕಡೆಯಿಂದ ಬ್ಯಾಂಕ್ ನೌಕರರ ಸಂಘಗಳ ಪ್ರತಿನಿಧಿಗಳು ಭಾಗವಹಿಸಿದ್ದರು ಎಂದು ಸಭೆಯಲ್ಲಿ ಭಾಗವಹಿಸಿದ್ದ ಅಖಿಲ ಭಾರತ ಬ್ಯಾಂಕ್ ನೌಕರರ ಸಂಘ(ಎಐಬಿಇಎ)ದ ಪ್ರಧಾನ ಕಾರ್ಯದರ್ಶಿ ವೆಂಕಟಾಚಲಂ ಯುಎನ್ಐಗೆ ತಿಳಿಸಿದ್ದಾರೆ.
  
ಶೇ. 20ರಷ್ಟು ಏರಿಕೆಯೊಂದಿಗೆ ವೇತನ ಪರಿಷ್ಕರಣೆ ಇತ್ಯರ್ಥ ಮತ್ತು ಇತರ ಬೇಡಿಕೆಗಳಿಗೆ ಒತ್ತಾಯಿಸಿ ಕರೆ ನೀಡಲಾಗಿರುವ  ಎರಡು ದಿನಗಳ ಮುಷ್ಕರದಲ್ಲಿ ಸುಮಾರು 10 ಲಕ್ಷ ನೌಕರರು ಮತ್ತು ಅಧಿಕಾರಿಗಳು ಭಾಗವಹಿಸಲಿದ್ದಾರೆ.  
  
ಮುಷ್ಕರದಲ್ಲಿ ಎಐಬಿಇಎ, ಎಐಬಿಒಸಿ, ಎನ್‌ಸಿಬಿಇ, ಎಐಬಿಒಎ, ಬಿಎಫ್‌ಐ, ಐಎನ್‌ಬಿಇಎಫ್, ಐಎನ್‌ಬಿಒಸಿ, ಎನ್‌ಒಬಿಡಬ್ಲ್ಯೂ ಮತ್ತು ಎನ್ ಒಬಿಒ ಸೇರಿದಂತೆ ಒಂಬತ್ತು ಬ್ಯಾಂಕ್ ಒಕ್ಕೂಟಗಳು ಪಾಲ್ಗೊಳ್ಳಲಿವೆ. 
  
ಮುಂದಿನ ಮಾರ್ಚ್ 11 ರಿಂದ ದೇಶಾದ್ಯಂತ ಮೂರು ದಿನಗಳ ಮುಷ್ಕರ ಮತ್ತು ಬರುವ ಏಪ್ರಿಲ್ 1 ರಿಂದ ಅನಿರ್ದಿಷ್ಟ ಮುಷ್ಕರ ನಡೆಸಲು ಯುಎಫ್‌ಬಿಯು ತೀರ್ಮಾನಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?