ಸಾಂದರ್ಭಿಕ ಚಿತ್ರ 
ವಾಣಿಜ್ಯ

ಐಟಿ ರಿಟರ್ನ್ ಸಲ್ಲಿಕೆ ಗಡವು ನವೆಂಬರ್ 30ರ ವರೆಗೆ ವಿಸ್ತರಣೆ

ಆರ್ಥಿಕ ವರ್ಷ 2019-20ರ ಆದಾಯ ತೆರಿಗೆ ರಿಟರ್ನ್ (ಐಟಿಆರ್) ಸಲ್ಲಿಕೆಯ ಕೊನೆಯ ದಿನಾಂಕವನ್ನು ನವೆಂಬರ್ 30ರವರೆಗೆ ವಿಸ್ತರಿಸಲಾಗಿದೆ ಎಂದು ಆದಾಯ ತೆರಿಗೆ ಇಲಾಖೆ ಪ್ರಕಟಿಸಿದೆ.

ನವದೆಹಲಿ: ಆರ್ಥಿಕ ವರ್ಷ 2019-20ರ ಆದಾಯ ತೆರಿಗೆ ರಿಟರ್ನ್ (ಐಟಿಆರ್) ಸಲ್ಲಿಕೆಯ ಕೊನೆಯ ದಿನಾಂಕವನ್ನು ನವೆಂಬರ್ 30ರವರೆಗೆ ವಿಸ್ತರಿಸಲಾಗಿದೆ ಎಂದು ಆದಾಯ ತೆರಿಗೆ ಇಲಾಖೆ ಪ್ರಕಟಿಸಿದೆ.

ಸದ್ಯಕ್ಕಿರುವ ಪರಿಸ್ಥಿತಿಯನ್ನು ಮನಗಂಡು ಐಟಿಆರ್ ಸಲ್ಲಿಕೆ ಅವಧಿಯನ್ನು ನವೆಂಬರ್ 30ರವರೆಗೂ ವಿಸ್ತರಿಸಲಾಗಿದೆ ಎಂದು ಆದಾಯ ತೆರಿಗೆ ಇಲಾಖೆಯು ಟ್ವೀಟ್ ನಲ್ಲಿ ಹೇಳಿದೆ. 

ಎರಡು ದಿನಗಳ ಹಿಂದಷ್ಟೇ ಇದಕ್ಕೆ ಪೂರಕವಾದ ಕ್ರಮಗಳನ್ನ ಐಟಿ ಇಲಾಖೆ ಕೈಗೊಂಡಿತ್ತು. ತೆರಿಗೆ ಉಳಿತಾಯದ ಹೂಡಿಕೆಗಳಿಗೆ ಇದ್ದ ಗಡುವನ್ನು ಜುಲೈ 31ರವರೆಗೆ ವಿಸ್ತರಿಸಿತ್ತು. ಇದರಿಂದ ಹೂಡಿಕೆದಾರರ ತಮ್ಮ ಹಣವನ್ನ ಈ ಯೋಜನೆಗಳಿಗೆ ಹಾಕಿ ಆ ಮೂಲಕ ತೆರಿಗೆ ಕಡಿಮೆ ಮಾಡಿಕೊಳ್ಳಲು ಸಾಧ್ಯವಾಗುತ್ತದೆ. ಈ ಹೂಡಿಕೆಗಳನ್ನ ಐಟಿ ರಿಟರ್ನ್ ಸಲ್ಲಿಕೆ ವೇಳೆ ನಮೂದಿಸಿ ತೆರಿಗೆ ಹಣ ಕ್ಲೈಮ್ ಮಾಡಿಕೊಳ್ಳಲು ಸಾಧ್ಯವಾಗುತ್ತದೆ. ಹಾಗಾಗಿ, ಉಳಿತಾಯ ಯೋಜನೆಗೆ ಹೂಡಿಕೆ ಮಾಡುವ ಗಡುವು ಹಾಗೂ ಐಟಿ ರಿಟರ್ನ್ ಫೈಲ್ ಮಾಡುವ ಗಡುವು ಎರಡೂ ಪೂರಕವಾಗಿರುವಂತೆ ಐಟಿ ಇಲಾಖೆ ಎಚ್ಚರ ವಹಿಸಿದೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

ನೀವೇನ್ ಮುಚ್ಚೋದು.. ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ; ಇರಾನ್ ಗೆ ಟ್ರಂಪ್ ಶಾಕ್!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್; KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

SCROLL FOR NEXT