ಡಿವಿ ಸದಾನಂದಗೌಡ 
ವಾಣಿಜ್ಯ

ದೇಶಿಯ ಔಷಧಿ, ವೈದ್ಯಕೀಯ ಉಪಕರಣ ಉತ್ಪಾದನೆ ಹೆಚ್ಚಿಸುವ ಯೋಜನೆಗಳಿಗೆ ಮಾರ್ಗಸೂಚಿ ಬಿಡುಗಡೆ

ದೇಶೀಯ ಉತ್ಪಾದನೆಯನ್ನು ಉತ್ತೇಜಿಸಲು ದೇಶದಲ್ಲಿ ಬೃಹತ್ ಔಷಧಿಗಳು ಮತ್ತು ವೈದ್ಯಕೀಯ ಸಾಧನಗಳ ಅಭಿವೃದ್ಧಿಗೆ ಸಂಬಂಧಿಸಿದ ನಾಲ್ಕು ಯೋಜನೆಗಳ ಮಾರ್ಗಸೂಚಿಗಳನ್ನು ಕೇಂದ್ರ ಸರ್ಕಾರ ಸೋಮವಾರ ಬಿಡುಗಡೆ ಮಾಡಿದೆ.

ನವದೆಹಲಿ: ದೇಶೀಯ ಉತ್ಪಾದನೆಯನ್ನು ಉತ್ತೇಜಿಸಲು ದೇಶದಲ್ಲಿ ಬೃಹತ್ ಔಷಧಿಗಳು ಮತ್ತು ವೈದ್ಯಕೀಯ ಉಪಕರಣಗಳ ಅಭಿವೃದ್ಧಿಗೆ ಸಂಬಂಧಿಸಿದ ನಾಲ್ಕು ಯೋಜನೆಗಳ ಮಾರ್ಗಸೂಚಿಗಳನ್ನು ಕೇಂದ್ರ ಸರ್ಕಾರ ಸೋಮವಾರ ಬಿಡುಗಡೆ ಮಾಡಿದೆ.

"ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಟಿಗೆ ಅನುಗುಣವಾಗಿ, ಆತ್ಮಾ ನಿರ್ಭರ್ ಭಾರತಕ್ಕಾಗಿ ಫಾರ್ಮಾ ಕ್ಷೇತ್ರದಲ್ಲೂ ಯೋಜನೆಗಳನ್ನು ರೂಪಿಸಲಾಗಿದೆ" ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ ವಿ ಸದಾನಂದ ಗೌಡ ಅವರು ತಿಳಿಸಿದ್ದಾರೆ.

53 ನಿರ್ಣಾಯಕ ಸಕ್ರಿಯ ಔಷಧೀಯ ಪದಾರ್ಥಗಳು(ಎಪಿಐಗಳು) ಅಥವಾ ಕೀ ಸ್ಟಾರ್ಟ್ ಮೆಟೀರಿಯಲ್ಸ್ (ಕೆಎಸ್‌ಎಂ) ಉತ್ಪಾದನೆಯಲ್ಲಿ ಭಾರತವನ್ನು ಸ್ವಾವಲಂಬಿಯನ್ನಾಗಿ ಮಾಡುವುದು ಇದರ ಉದ್ದೇಶವಾಗಿದೆ. ವೈದ್ಯಕೀಯ ಸಾಧನಗಳ ಉತ್ಪಾದನೆಯಲ್ಲಿ ಭಾರತವು ಆಮದುಗಳ ಮೇಲೆ ಹೆಚ್ಚು ಅವಲಂಬಿತವಾಗಿದೆ. ಇದನ್ನು ಕಡಿಮೆ ಮಾಡುವುದು ಇದರ ಉದ್ದೇಶ ಎಂದು ಸದಾನಂದ ಗೌಡ ಅವರು ಹೇಳಿದ್ದಾರೆ.

ದೇಶದಲ್ಲಿ ಬೃಹತ್ ಪ್ರಮಾಣದಲ್ಲಿ ಔಷಧಗಳು ಹಾಗೂ ವೈದ್ಯಕೀಯ ಉಪಕರಣಗಳನ್ನು ತಯಾರಿಸುವ ನಾಲ್ಕು ಔಷಧ ಪಾರ್ಕ್ ಗಳ ಯೋಜನೆಗಳ ಕುರಿತ ಮಾರ್ಗಸೂಚಿ ಬಿಡುಗಡೆ ಮಾಡಿ ಮಾತನಾಡಿದ ಅವರು, ಕೊರೋನಾ ಬಿಕ್ಕಟ್ಟು ಯಾವರೀತಿ ದೇಶದ ಆರೋಗ್ಯ ವ್ವಯಸ್ಥೆಯನ್ನು ಬುಡಮೇಲುಮಾಡಬಹುದು ಎಂಬುದನ್ನು ತೋರಿಸಿಕೊಟ್ಟಿದೆ. ಆದರೆ ನಮ್ಮ ಔಷಧ ಇಲಾಖೆಯು ತ್ವರಿತವಾಗಿ ಹಲವು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡ ಪರಿಣಾಮ ಲಾಕ್ ಡೌನ್ ಅವಧಿಯಲ್ಲಿ ಕೂಡಾ ಔಷಧಗಳ ಪೂರೈಕೆಯಲ್ಲಿ ಯಾವುದೇ ವ್ಯತ್ಯಾಸವಾಗದಂತೆ ನೋಡಿಕೊಳ್ಳಲಾಯಿತು ಎಂದರು.

ಔಷಧೋದ್ಯಮದಲ್ಲಿ ಭಾರತವು ಸ್ವಾವಲಂಬಿಯಾಗಲು ಕೊರೋನಾ ಸಂಕಷ್ಟ ಎಸೆದ ಸವಾಲು ನಮ್ಮ ಸಂಕಲ್ಪವನ್ನು ಇನ್ನಷ್ಟು ಗಟ್ಟಿಗೊಳಿಸಿತು. ಫಾರ್ಮಾ ವಲಯಕ್ಕೆ ಸಂಬಂಧಿಸಿದಂತೆ ಭಾರತ ವಿಶ್ವಸಮುದಾಯದ ವಿಶ್ವಾಸಾರ್ಹ ಪಾಲುದಾರನಾಗಿ ಹೊರಹೊಮ್ಮಿದೆ. ಕೊರೋನಾ ಬಿಕ್ಕಟ್ಟಿನ ವೇಳೆಯಲ್ಲಿಯೂ ಜಗತ್ತಿನ ಬಹುತೇಕ ದೇಶಗಳಿಗೆ ಹೈಡ್ರೋಕ್ಸಿಕ್ಲೋರೋಕ್ವಿನ್, ಪ್ಯಾರಾಸಿಟಮಾಲ್ ನಂತಹ ಪ್ರಮುಖ ಔಷಧಗಳನ್ನು ಭಾರತದ ಪೂರೈಸಿದೆ. ಇದರಿಂದ ವಿಶ್ವದಾದ್ಯಂತ ಭಾರತದ ಬಗ್ಗೆ ಇರುವ ಸದ್ಭಾವನೆ ಇನ್ನಷ್ಟು ವೃದ್ಧಿಯಾಗಿದೆ. ಇದರ ಸದುಪಯೋಗಪಡಿಸಿಕೊಂಡು ದೇಶದ ಔಷಧೋದ್ಯಮವನ್ನು ಬೆಳೆಸುವ ಜವಾಬ್ಧಾರಿ ನಮ್ಮ ಮೇಲಿದೆ ಎಂದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

CJP protest: ಮಮತಾ ಬ್ಯಾನರ್ಜಿ, ನೇಹಾ ಬೋರಾ, ಯೋಗೇಂದ್ರ ಯಾದವ್ ವಶಕ್ಕೆ ಪಡೆದ ಪೊಲೀಸರು