ಗೂಗಲ್ 
ವಾಣಿಜ್ಯ

ಜುಲೈ 2021ರವರೆಗೂ ಮನೆಯಿಂದಲೇ ಕೆಲಸ ಮಾಡಿ: ಉದ್ಯೋಗಿಗಳಿಗೆ ಗೂಗಲ್ ನಿರ್ದೇಶನ

ವಿಶ್ವದ ಅತ್ಯಂತ ವಿಶ್ವಾಸಾರ್ಹ ಇಂಟರ್ನೆಟ್ ಸರ್ಚ್ ಎಂಜಿನ್ ಸಂಸ್ಥೆ  ಗೂಗಲ್ ತನ್ನ 200,000 ಉದ್ಯೋಗಿಗಳು ಮತ್ತು ಗುತ್ತಿಗೆದಾರರು 2021 ಜೂನ್ ವರೆವಿಗೂ  ಮನೆಯಿಂದ ಕೆಲಸ ಮಾಡಬೇಕೆಂದು ನಿರ್ದೇಶಿಸಿದೆ. ಕೊರೋನಾ ಸಾಂಕ್ರಾಮಿಕ ರೋಗದಿಂದ ತಮ್ಮ ಸಂಸ್ಥೆಯ ಉದ್ಯೋಗಿಗಳನ್ನು ರಕ್ಷಿಸುವ ನಿಟ್ಟಿನಲ್ಲಿ ಸಂಸ್ಥೆ ಈ ಮಹತ್ವದ ತೀರ್ಮಾನಕ್ಕೆ ಬಂದಿದೆ. 

ವಿಶ್ವದ ಅತ್ಯಂತ ವಿಶ್ವಾಸಾರ್ಹ ಇಂಟರ್ನೆಟ್ ಸರ್ಚ್ ಎಂಜಿನ್ ಸಂಸ್ಥೆ  ಗೂಗಲ್ ತನ್ನ 200,000 ಉದ್ಯೋಗಿಗಳು ಮತ್ತು ಗುತ್ತಿಗೆದಾರರು 2021 ಜೂನ್ ವರೆವಿಗೂ  ಮನೆಯಿಂದ ಕೆಲಸ ಮಾಡಬೇಕೆಂದು ನಿರ್ದೇಶಿಸಿದೆ. ಕೊರೋನಾ ಸಾಂಕ್ರಾಮಿಕ ರೋಗದಿಂದ ತಮ್ಮ ಸಂಸ್ಥೆಯ ಉದ್ಯೋಗಿಗಳನ್ನು ರಕ್ಷಿಸುವ ನಿಟ್ಟಿನಲ್ಲಿ ಸಂಸ್ಥೆ ಈ ಮಹತ್ವದ ತೀರ್ಮಾನಕ್ಕೆ ಬಂದಿದೆ.

ಗೂಗಲ್ ಸಿಇಒ ಸುಂದರ್ ಪಿಚೈ ಸೋಮವಾರ  ಹೊರಡಿಸಿದ ರಿಮೋಟ್-ವರ್ಕ್ ಆದೇಶವು ಗೂಗಲ್‌ನ ಕಾರ್ಪೊರೇಟ್ ಪೋಷಕ ಆಲ್ಫಾಬೆಟ್ ಇಂಕ್ ಒಡೆತನದ ಇತರ ಕಂಪನಿಗಳಿಗೂ ಅನ್ವಯಿಸಲಿದೆ. ಈ ವರ್ಷಉಳಿದ ದಿನಗಳಲ್ಲಿ ತನ್ನ ಹೆಚ್ಚಿನ ಕಚೇರಿಗಳನ್ನು ಮುಚ್ಚುವ ಗೂಗಲ್‌ನ ಹಿಂದಿನ ಯೋಜನೆಗೆ ಆರು ತಿಂಗಳ ವಿಸ್ತರಣೆ ಮಾಡಲಾಗಿದೆ.

"ಈ ವಿಸ್ತೃತ ಟೈಮ್‌ಲೈನ್ ಗೆ ಮಿಶ್ರ ಪ್ರತಿಕ್ರಿಯೆಯನ್ನು ನಿರೀಕ್ಷಿಸಲಾಗಿದೆ.  ಆದರೆ  ನೀವು ನಿಮ್ಮ ಬಗ್ಗೆ ಕಾಳಜಿ ವಹಿಸುತ್ತಿದ್ದೀರಿ ಎಂದು ಖಚಿತಪಡಿಸಿಕೊಳ್ಳಲು ನಾನು ಬಯಸುತ್ತೇನೆ"ಆಲ್ಫಾಬೆಟ್‌ನ ಸಿಇಒ ಆಗಿರುವ ಪಿಚೈ ಉದ್ಯೋಗಿಗಳಿಗೆ ಬರೆದ ಈ ಮೇಲ್ ನಲ್ಲಿ ಹೇಳಿದ್ದಾರೆ.  ದಿ ವಾಲ್ ಸ್ಟ್ರೀಟ್ ಜರ್ನಲ್. ಪಿಚೈ  ಅವರ ಈ ನಿರ್ಧಾರವನ್ನು ಮೊದಲು ಪ್ರಕಟ ಮಾಡಿದೆ.

ಗೂಗಲ್‌ನ ಕಚೇರಿಗಳ ದೀರ್ಘಕಾಲದ ಲಾಕ್‌ಡೌನ್ ಇತರ ಪ್ರಮುಖ ಸಂಸ್ಥೆಗಳ ಮುಖ್ಯಸ್ಥರಿಗೂ ದೇ ರೀತಿಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಲು ಪ್ರೇರೇಪಿಸಬಹುದು. ಕೊರೋನಾವೈರಸ್ ಹರಡುವಿಕೆಯಿಂದ ಪ್ರಚೋದಿಸಲ್ಪಟ್ಟ ವರ್ಕ್ ಫ್ರಂ ಜೋಮ್ ಕೆಲಸದಲ್ಲಿ ಐಟಿ ಉದ್ಯಮ(ತಂತ್ರಜ್ಞಾನ ಉದ್ಯಮ) ಮುಂಚೂಣಿಯಲ್ಲಿದೆ. ಮಾರ್ಚ್ 11 ರಂದು ವಿಶ್ವ ಆರೋಗ್ಯ ಸಂಸ್ಥೆ ಸಾಂಕ್ರಾಮಿಕ ರೋಗವನ್ನು ಘೋಷಿಸುವ ಮೊದಲೇ ಗೂಗಲ್ ಮತ್ತು ಇತರ ಹಲವು ಪ್ರಮುಖ ತಾಂತ್ರಿಕ ಸಂಸ್ಥೆಗಳು ತಮ್ಮ ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡಲು ಆದೇಶಿಸಲು ತೀರ್ಮಾನಿಸಿದ್ದವು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT