ಜಿಯೋ ಪ್ಲಾಟ್‌ಫಾರ್ಮ್ಸ್‌ನಲ್ಲಿ 1,894.50 ಕೋಟಿ ರೂ. ಹೂಡಿಕೆ ಮಾಡಲಿರುವ ಎಲ್ ಕ್ಯಾಟರ್‌ಟನ್ 
ವಾಣಿಜ್ಯ

ಜಿಯೋ ಪ್ಲಾಟ್‌ಫಾರ್ಮ್ಸ್‌ನಲ್ಲಿ 1,894.50 ಕೋಟಿ ರೂ. ಹೂಡಿಕೆ ಮಾಡಲಿರುವ ಎಲ್ ಕ್ಯಾಟರ್‌ಟನ್

ಪ್ರಪಂಚದ ಅತಿದೊಡ್ಡ ಗ್ರಾಹಕ ಕೇಂದ್ರಿತ ಪ್ರೈವೇಟ್ ಈಕ್ವಿಟಿ ಸಂಸ್ಥೆಗಳಲ್ಲೊಂದಾದ ಎಲ್ ಕ್ಯಾಟರ್‌ಟನ್‌ನಿಂದ 1894.50 ಕೋಟಿ ರೂ.ಗಳ ಹೂಡಿಕೆಯನ್ನು ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ("ರಿಲಯನ್ಸ್ ಇಂಡಸ್ಟ್ರೀಸ್") ಹಾಗೂ ಭಾರತದ ಮುಂಚೂಣಿ ಡಿಜಿಟಲ್ ಸೇವೆಗಳ ವೇದಿಕೆ ಜಿಯೋ ಪ್ಲಾಟ್‌ಫಾರ್ಮ್ಸ್ ಲಿಮಿಟೆಡ್ ("ಜಿಯೋ ಪ್ಲಾಟ್‌ಫಾರ್ಮ್ಸ್") ಘೋಷಿಸಿವೆ. 

ಮುಂಬಯಿ: ಪ್ರಪಂಚದ ಅತಿದೊಡ್ಡ ಗ್ರಾಹಕ ಕೇಂದ್ರಿತ ಪ್ರೈವೇಟ್ ಈಕ್ವಿಟಿ ಸಂಸ್ಥೆಗಳಲ್ಲೊಂದಾದ ಎಲ್ ಕ್ಯಾಟರ್‌ಟನ್‌ನಿಂದ 1894.50 ಕೋಟಿ ರೂ.ಗಳ ಹೂಡಿಕೆಯನ್ನು ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ("ರಿಲಯನ್ಸ್ ಇಂಡಸ್ಟ್ರೀಸ್") ಹಾಗೂ ಭಾರತದ ಮುಂಚೂಣಿ ಡಿಜಿಟಲ್ ಸೇವೆಗಳ ವೇದಿಕೆ ಜಿಯೋ ಪ್ಲಾಟ್‌ಫಾರ್ಮ್ಸ್ ಲಿಮಿಟೆಡ್ ("ಜಿಯೋ ಪ್ಲಾಟ್‌ಫಾರ್ಮ್ಸ್") ಘೋಷಿಸಿವೆ. 

ಈ ಹೂಡಿಕೆಯು ಜಿಯೋ ಪ್ಲಾಟ್‌ಫಾರ್ಮ್ಸ್‌ನ ಈಕ್ವಿಟಿ ಮೌಲ್ಯವನ್ನು 4.91 ಲಕ್ಷ ಕೋಟಿ ರೂ.ಗಳಿಗೆ ಹಾಗೂ ಎಂಟರ್‌ಪ್ರೈಸ್ ಮೌಲ್ಯವನ್ನು 5.16 ಲಕ್ಷ ಕೋಟಿ ರೂ.ಗಳಿಗೆ ಕೊಂಡೊಯ್ಯಲಿದೆ. ಎಲ್ ಕ್ಯಾಟರ್‌ಟನ್‌ನ ಹೂಡಿಕೆಯು ಫುಲ್ಲಿ ಡೈಲ್ಯೂಟೆಡ್ ಬೇಸಿಸ್‌ನಲ್ಲಿ ಜಿಯೋ ಪ್ಲಾಟ್‌ಫಾರ್ಮ್ಸ್‌ನ ಶೇ.0.39ರಷ್ಟು ಈಕ್ವಿಟಿ ಪಾಲುದಾರಿಕೆಗೆ ಸಮಾನವಾಗಿರಲಿದೆ. ಈ ಹೂಡಿಕೆಯೊಂದಿಗೆ, ಏಪ್ರಿಲ್ 22, 2020ರಿಂದ ಇಲ್ಲಿಯವರೆಗಿನ ಅವಧಿಯಲ್ಲಿ ಫೇಸ್‌ಬುಕ್, ಸಿಲ್ವರ್ ಲೇಕ್, ವಿಸ್ತಾ ಈಕ್ವಿಟಿ ಪಾರ್ಟ್‌ನರ್ಸ್, ಜನರಲ್ ಅಟ್ಲಾಂಟಿಕ್, ಕೆಕೆಆರ್, ಮುಬಾದಲ, ಎಡಿಐಎ, ಟಿಪಿಜಿ ಹಾಗೂ ಎಲ್ ಕ್ಯಾಟರ್‌ಟನ್ ಸೇರಿದಂತೆ ಮುಂಚೂಣಿ ಜಾಗತಿಕ ಹೂಡಿಕೆದಾರರಿಂದ ಜಿಯೋ ಪ್ಲಾಟ್‌ಫಾರ್ಮ್ಸ್ 104,326.95 ಕೋಟಿ ರೂ.ಗಳ ಹೂಡಿಕೆ ಪಡೆದುಕೊಂಡಂತಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸುಡಾನ್‌ನಲ್ಲಿ ಭೀಕರ ನರಮೇಧ: ಜನನಿಬಿಡ ಮಾರುಕಟ್ಟೆ ಮೇಲೆ ಸೇನೆಯಿಂದ ಡ್ರೋನ್ ದಾಳಿ, 100ಕ್ಕೂ ಹೆಚ್ಚು ಸಾವು!

Cyclone Arnab: ಆಂಧ್ರಪ್ರದೇಶ ಕರಾವಳಿಗೆ ಅಪ್ಪಳಿಸಿದ 'ಅರ್ನಬ್' ಚಂಡಮಾರುತ; ಗಂಟೆಗೆ 150 ಕಿಮೀ ವೇಗದಲ್ಲಿ ಬಿರುಗಾಳಿ; Video

ಭೀಕರ ಬರಕ್ಕೆ ನಲುಗಿದ ಗದಗ: ಹೊಂಬಾಳ ಗ್ರಾಮದಲ್ಲಿ ರೈತರ ಆಕ್ರಂದನ, ಬದುಕಿಗಾಗಿ ನಗರಗಳತ್ತ ಮುಖ ಮಾಡಿದ ಅನ್ನದಾತ..!

"ಮೋದಿ ಕಾ ಬಾಪ್ ಭಿ ಜಾಯೇಗಾ" ಹೇಳಿಕೆ ವಿವಾದ: ನಿಂದಿಸಿಲ್ಲ, ಪ್ರಚೋದನೆಗೆ ಉತ್ತರಿಸಿದ್ದಾರೆ: ಖರ್ಗೆ ಬೆನ್ನಿಗೆ ನಿಂತ 'ಕೈ' ಪಡೆ..!

ಬೆಂಗಳೂರು ಅಭಿವೃದ್ಧಿಗೆ 10 ವರ್ಷಗಳ ಮೆಗಾ ಪ್ಲ್ಯಾನ್‌; ₹1 ಲಕ್ಷ ಕೋಟಿ ವೆಚ್ಚದ ಯೋಜನೆಗಳ ಘೋಷಣೆ..!