ಸಂಗ್ರಹ ಚಿತ್ರ 
ವಾಣಿಜ್ಯ

ಮತ್ತೆ ಪೆಟ್ರೋಲ್, ಡೀಸೆಲ್ ದರ ಇಳಿಕೆ

ತೈಲ ಉತ್ಪನ್ನಗಳ ಮೇಲೆ ಅಬಕಾರಿ ಸುಂಕ ಹೆಚ್ಚಳ ಮಾಡಿ ತೀವ್ರ ಟೀಕೆ ವ್ಯಕ್ತವಾಗಿದ್ದ ಬೆನ್ನಲ್ಲೇ ತೈಲ ಕಂಪನಿಗಳು ಭಾನುವಾರ ಪೆಟ್ರೋಲ್, ಡೀಸೆಲ್ ಪ್ರತಿ ಲೀಟರ್ ಗೆ ಕ್ರಮವಾಗಿ 12 ಹಾಗೂ 14 ಪೈಸೆ ಇಳಿಸಿವೆ.

ನವದೆಹಲಿ: ತೈಲ ಉತ್ಪನ್ನಗಳ ಮೇಲೆ ಅಬಕಾರಿ ಸುಂಕ ಹೆಚ್ಚಳ ಮಾಡಿ ತೀವ್ರ ಟೀಕೆ ವ್ಯಕ್ತವಾಗಿದ್ದ ಬೆನ್ನಲ್ಲೇ ತೈಲ ಕಂಪನಿಗಳು ಭಾನುವಾರ ಪೆಟ್ರೋಲ್, ಡೀಸೆಲ್ ಪ್ರತಿ ಲೀಟರ್ ಗೆ ಕ್ರಮವಾಗಿ 12 ಹಾಗೂ 14 ಪೈಸೆ ಇಳಿಸಿವೆ.

ಇದರಿಂದಾಗಿ ಪ್ರತಿ ಲೀಟರ್ ಪೆಟ್ರೋಲ್ ನವದೆಹಲಿಯಲ್ಲಿ 69.75 ರೂ., ಪ್ರತಿ ಲೀಟರ್ ಡೀಸೆಲ್ 62.44 ರೂ. ಆಗಿದೆ. ಶನಿವಾರವಷ್ಟರ ಕೇಂದ್ರ ಸರ್ಕಾರ ತೈಲದ ಮೇಲಿನ ಅಬಕಾರಿ ಸುಂಕವನ್ನು 3 ರೂ. ಹೆಚ್ಚಳ ಮಾಡಿತ್ತು ಇದರಿಂದಾಗಿ ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲ ಶೇ.30ರ ವರೆಗೆ ಇಳಿಕೆಯಾಗಿದ್ದರೂ, ಗ್ರಾಹಕರಿಗೆ ಅದರ ಲಾಭ ಸಿಕ್ಕಿಲ್ಲ ಎಂಬ ಟೀಕೆ , ಕೊರಗಿನ ನಡುವೆ ತೈಲ ಕಂಪನಿಗಳು ದರ ಇಳಿಕೆ ಮಾಡಿವೆ. ತೈಲೋತ್ಪನ್ನಗಳ ಮೇಲಿನ ಅಬಕಾರಿ ಸುಂಕ ಹೆಚ್ಚಳ ಮಾಡಿದ್ದರಿಂದ ಬೆಳೆ ಇಳಿಕೆ ಮಾಡಲಾಗಿದೆ ಎಂದೂ ತೈಲ ಕಂಪನಿಗಳು ಸ್ಪಷ್ಟಪಡಿಸಿವೆ. 

ಇನ್ನು ಸಿಲಿಕಾನ್ ಸಿಟಿ ಬೆಂಗಳೂರಿನಲ್ಲೂ ಪ್ರತೀ ಲೀಟರ್ ಪೆಟ್ರೋಲ್ ದರದಲ್ಲಿ 14 ಪೈಸೆಯಷ್ಟು ಕಡಿತವಾಗಿದ್ದು, ನಿನ್ನೆ  72.52 ರೂ ಇದ್ದ ಪೆಟ್ರೋಲ್ ದರ ಇಂದು 72.38 ರೂಗೆ ಇಳಿಕೆಯಾಗಿದೆ. 

ಶನಿವಾರವಷ್ಟೇ ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಸೆಸ್ ನಲ್ಲಿ ತಲಾ 3 ರೂ ಏರಿಕೆ ಮಾಡಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭಾರತ–ನ್ಯೂಜಿಲ್ಯಾಂಡ್ ಸಂಬಂಧ ಕಾರ್ಯತಂತ್ರ ಪಾಲುದಾರಿಕೆಗೆ ಉನ್ನತಿ; 5 ವರ್ಷಗಳಲ್ಲಿ 35,000 ಕೋಟಿ ರೂ. ವ್ಯಾಪಾರದ ಗುರಿ

ಕದನ ವಿರಾಮ ಅಂತ್ಯ; ಹೊಸ ಮಾತುಕತೆಗೆ ಡೊನಾಲ್ಡ್ ಟ್ರಂಪ್ ಒಪ್ಪಿಗೆ – 'ಶರಣಾಗುವುದಿಲ್ಲ' ಎಂದ ಇರಾನ್

ಪ್ರಿಯಾಂಕ್ ಖರ್ಗೆ RSS ಸಚಿವರು- ಪರಮೇಶ್ವರ್ 'ಗೊತ್ತಿಲ್ಲ' ಸಚಿವರು: ಶೋಭಾ ಕರಂದ್ಲಾಜೆ

ಪೋಕ್ಸೋ ಕೇಸ್​ ಆರೋಪಿಯ ಭೀಭತ್ಸ ಕೃತ್ಯ: ಜಾಮೀನಿನ ಮೇಲೆ ಬಿಡುಗಡೆಯಾದ ಕೂಡಲೇ ಸಂತ್ರಸ್ತೆ ಸೇರಿ 6 ಮಂದಿಯ ಭೀಕರ ಹತ್ಯೆ!

ನಮ್ಮ ಆಚರಣೆಯ ನಡುವೆ ಬೇರೆಯದನ್ನು ಯಾಕೆ ತರುತ್ತೀರಾ: ದಸರಾದಲ್ಲಿ ಕಂಬಳ ಆಯೋಜನೆಗೆ ಯದುವೀರ್- ಪ್ರತಾಪ್ ಸಿಂಹ ವಿರೋಧ!