ವಾಣಿಜ್ಯ

ಕೊರೋನಾ ವಿರುದ್ಧದ ಹೋರಾಟಕ್ಕಾಗಿ ಬರೋಬ್ಬರಿ 1500 ಕೋಟಿ ದೇಣಿಗೆ ನೀಡಿದ ಟಾಟಾ ಸಮೂಹ!

Vishwanath S

ಮುಂಬೈ: 21 ದಿನಗಳ ಕಾಲ ದೇಶವನ್ನೇ ಲಾಕ್ ಡೌನ್ ಮಾಡಿ ಕಠಿಣ ನಿರ್ಧಾರ ಕೈಗೊಳ್ಳಲಾಗಿದ್ದು ಇದರ ನಡುವೆ ಮಹಾಮಾರಿ ವಿರುದ್ಧ ಹೋರಾಟಕ್ಕೆ ದೇಶಾದ್ಯಂತ ನಿರೀಕ್ಷೆಗೂ ಮೀರಿದ ಬೆಂಬಲ ವ್ಯಕ್ತವಾಗುತ್ತಿದೆ.

ಕೊರೋನಾ ವೈರಸ್ ಸೋಂಕು ಹರಡುವುದನ್ನು ತಡೆಯಲು ಮತ್ತು ಸೋಂಕಿಗೆ ಒಳಗಾಗಿರುವವರ ರಕ್ಷಣೆಗಾಗಿ ಟಾಟಾ ಸನ್ಸ್ 1000 ಕೋಟಿ ಮತ್ತು ಟಾಟಾ ಟ್ರಸ್ಟ್ 500 ಕೋಟಿ ನೀಡಲಿದೆ.

ಈ ಬಗ್ಗೆ ಮಾತನಾಡಿರುವ ಟಾಟಾ ಟ್ರಸ್ಟ್ ಅಧ್ಯಕ್ಷ ರತನ್ ಟಾಟಾ ಅವರು, ಇಂತಹ ಕಠಿಣ ಸಂದರ್ಭದಲ್ಲಿ ಕೊರೋನಾ ವೈರಸ್ ವಿರುದ್ಧ ಹೋರಾಡಲು ಕೆಲವು ವೈದ್ಯಕೀಯ ಸಾಧನಗಳ ತುರ್ತು ಅಗತ್ಯವಿದೆ ಎಂದು ನಂಬಿದ್ದೇನೆ ಎಂದು ಹೇಳಿದ್ದಾರೆ. 

ಮಾನವಕುಲಕ್ಕೆ ಮಾರಕವಾಗಿರುವ ಕೊರೋನಾ ವೈರಸ್ ಭಾರತದಲ್ಲಿ ತನ್ನ ಮರಣ ಮೃದಂಗವನ್ನು ಮುಂದುವರೆಸಿದ್ದು, ವೈರಸ್'ಗೆ ಮತ್ತೆ ಇಬ್ಬರು ಬಲಿಯಾಗಿದ್ದಾರೆ. ಇದರಂತೆ ಈ ವರೆಗೂ ದೇಶದಲ್ಲಿ ಸಾವಿಗೀಡಾದವರ ಸಂಖ್ಯೆ 23ಕ್ಕೆ ಏರಿಕೆಯಾಗಿದ್ದು ಸೋಂಕಿತರ ಸಂಖ್ಯೆ 987ಕ್ಕೆ ಏರಿಕೆಯಾಗಿದೆ. 

SCROLL FOR NEXT