ಕೇಂದ್ರ ಸಚಿವ ನಿತಿನ್ ಗಡ್ಕರಿ 
ವಾಣಿಜ್ಯ

ಸಣ್ಣ ಕೈಗಾರಿಕೆಗಳಿಗೆ ನೆರವಾಗಲು ಹೊಸ ಸಾಲ ಒದಗಿಸುವ ಸಂಸ್ಥೆಗಳ ಸ್ಥಾಪನೆ ಬಗ್ಗೆ ಚಿಂತನೆ: ಕೇಂದ್ರ ಸಚಿವ ನಿತಿನ್ ಗಡ್ಕರಿ

ಸಣ್ಣ ಕೈಗಾರಿಕೆಗಳಿಗೆ ಆರ್ಥಿಕವಾಗಿ ನೆರವಾಗಲು ಹೊಸ ಸಾಲ ಒದಗಿಸುವ ಸಂಸ್ಥೆಗಳ ಸ್ಥಾಪನೆ ಬಗ್ಗೆ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಕೇಂದ್ರ ಸಣ್ಣ ಮತ್ತು ಮಧ್ಯಮ ಕೈಗಾರಿಕೆ ಖಾತೆ( ಎಂಎಸ್‌ಎಂಇ) ಸಚಿವ ನಿತಿನ್ ಗಡ್ಕರಿ ಸೋಮವಾರ ಹೇಳಿದ್ದಾರೆ.

ನವದೆಹಲಿ: ಸಣ್ಣ ಕೈಗಾರಿಕೆಗಳಿಗೆ ಆರ್ಥಿಕವಾಗಿ ನೆರವಾಗಲು ಹೊಸ ಸಾಲ ಒದಗಿಸುವ ಸಂಸ್ಥೆಗಳ ಸ್ಥಾಪನೆ ಬಗ್ಗೆ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಕೇಂದ್ರ ಸಣ್ಣ ಮತ್ತು ಮಧ್ಯಮ ಕೈಗಾರಿಕೆ ಖಾತೆ( ಎಂಎಸ್‌ಎಂಇ) ಸಚಿವ ನಿತಿನ್ ಗಡ್ಕರಿ ಸೋಮವಾರ ಹೇಳಿದ್ದಾರೆ.

ಬ್ಯಾಂಕೇತರ ಹಣಕಾಸು ಕಂಪನಿಗಳನ್ನು (ಎನ್‌ಬಿಎಫ್‌ಸಿ) ಬಲಪಡಿಸುವ ನಿಟ್ಟಿನಲ್ಲಿ ಸರ್ಕಾರ ಕೆಲಸ ಮಾಡುತ್ತಿದ್ದು, ಎನ್‍ಬಿಎಫ್‍ಸಿಗಳು ಸಣ್ಣ ಉದ್ಯಮಗಳಿಗೆ ಸಕಾಲದಲ್ಲಿ ಸುಲಭ ಸಾಲ ನೀಡಲು ಸಹಾಯ ಮಾಡುತ್ತಿವೆ ಎಂದು ಅವರು ಹೇಳಿದ್ದಾರೆ. 

'ಎಂಎಸ್ಎಂಇಗಳ ಮೇಲೆ ಕೊವಿಡ್‍ -19 ರ ಪರಿಣಾಮ ಮತ್ತು ಸವಾಲುಗಳನ್ನು ಎದುರಿಸಲು ತೆಗೆದುಕೊಂಡ ಕ್ರಮಗಳ ಕುರಿತು ಕೊಲ್ಕತಾ ವಾಣಿಜ್ಯ ಮತ್ತು ಕೈಗಾರಿಕಾ ಒಕ್ಕೂಟದ ಸದಸ್ಯರೊಂದಿಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಸಂವಾದ ನಡೆಸಿದ ಕೊವಿಡ್‍-19 ಸೋಂಕಿನ  ದಿನಗಳಲ್ಲಿ ಆರ್ಥಿಕ ಅಸ್ಥಿತರತೆ ಎದುರಿಸಲು ಪ್ರಯತ್ನಗಳು ಮುಂದುವರಿಸುತ್ತಲೇ ಸಾಗಬೇಕು. ಈ ನಿಟ್ಟಿನಲ್ಲಿ ಎಲ್ಲ ಭಾಗೀದಾರರು ಒಟ್ಟಾಗಿ ಕೆಲಸ ಮಾಡಬೇಕಾಗಿದೆ. ಬಿಕ್ಕಟ್ಟನ್ನು ಎದುರಿಸಲು ಉದ್ಯಮ ವಲಯದಲ್ಲಿ ಸಕಾರಾತ್ಮಕ ಮನೋಭಾವವನ್ನು ಕಾಪಾಡಿಕೊಳ್ಳಬೇಕಾಗಿದೆ' ಎಂದು  ಅವರು ಹೇಳಿದ್ದಾರೆ.

ಪಿಪಿಇ ,ಮುಖವಾಡಗಳು, ಸ್ಯಾನಿಟೈಸರ್ ಬಳಕೆಯ ಬಗ್ಗೆ ಪ್ರತಿಪಾದಿಸಿದ ಅವರು, ವೈಯಕ್ತಿಕ ಬದುಕಿನಲ್ಲಿ ಮತ್ತು ಕೆಲಸದ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

ಗಡಿಯಲ್ಲಿ ಕಟ್ಟುನಿಟ್ಟಿನ ಕ್ರಮ: 15 ಕಿ.ಮೀ. ಒಳಗಿನ ಅಕ್ರಮ ನಿರ್ಮಾಣ ಕೆಡವಲು ಅಮಿತ್ ಶಾ ಸೂಚನೆ

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ಸಿಎಂ ಸಿದ್ದರಾಮಯ್ಯ ಪದತ್ಯಾಗ; ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಹತ್ವದ ಸಭೆ

SCROLL FOR NEXT