ಜಗತ್ತಿನ ಶ್ರೀಮಂತರ ಪಟ್ಟಿಯಲ್ಲಿ 5ನೇ ಸ್ಥಾನದಿಂದ 9ನೇ ಸ್ಥಾನಕ್ಕೆ ಕುಸಿದ ಮುಕೇಶ್ ಅಂಬಾನಿ!
ಉದ್ಯಮಿ ಮುಕೇಶ್ ಅಂಬಾನಿ ಅವರು ಜಗತ್ತಿನ ಅತೀ ಶ್ರೀಮಂತರ ಪಟ್ಟಿಯಲ್ಲಿ 5ನೇ ಸ್ಥಾನದಿಂದ 9ನೇ ಸ್ಥಾನಕ್ಕೆ ಕುಸಿದಿದ್ದಾರೆ.
ನವದೆಹಲಿ: ಉದ್ಯಮಿ ಮುಕೇಶ್ ಅಂಬಾನಿ ಅವರು ಜಗತ್ತಿನ ಅತೀ ಶ್ರೀಮಂತರ ಪಟ್ಟಿಯಲ್ಲಿ 5ನೇ ಸ್ಥಾನದಿಂದ 9ನೇ ಸ್ಥಾನಕ್ಕೆ ಕುಸಿದಿದ್ದಾರೆ.
ಏಷ್ಯಾದ ಅತೀ ಶ್ರೀಮಂತ ಎಂಬ ಖ್ಯಾತಿಗೆ ಭಾಜನರಾಗಿದ್ದ ಮುಕೇಶ್ ಅಂಬಾನಿ ಒಡೆತನದ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಗೆ 2ನೇ ತ್ರೈಮಾಸಿಕದಲ್ಲಿ ಲಾಭದಲ್ಲಿ ಭಾರಿ ಇಳಿಕೆಯಾಗಿದೆ.
ಕೊರೋನಾ ಪ್ರಭಾವದ ಹಿನ್ನೆಲೆಯಲ್ಲಿ ಮುಕೇಶ್ ಅಂಬಾನಿ ಅವರ ಸಂಪತ್ತಿನಲ್ಲಿ 5 ಬಿಲಿಯನ್ ಡಾಲರ್ ನಷ್ಟು(37 ಸಾವಿರ ಕೋಟಿ ರೂ.) ನಷ್ಟ ಉಂಟಾಗಿದ್ದು ಹೀಗಾಗಿ ಫೋರ್ಬ್ಸ್ ಶ್ರೀಮಂತರ ಪಟ್ಟಿಯಲ್ಲಿ 9ನೇ ಸ್ಥಾನಕ್ಕೆ ಕುಸಿದಿದ್ದಾರೆ.
ರಿಲಯನ್ಸ್ ಇಂಡಸ್ಟ್ರೀಸ್ ಷೇರುಗಳ ಬೆಲೆ ನಿನ್ನೆಗೆ ಶೇಖಡ 8ಕ್ಕೂ ಹೆಚ್ಚು ಇಳಿಕೆಯಾಗಿದೆ. ಮೇ 12ರಂ ನಂತರ ಇದೇ ಮೊದಲ ಬಾರಿಗೆ ಸಂಸ್ಥೆಯ ಷೇರು ಬೆಲೆಯಲ್ಲಿ ತೀವ್ರ ಕುಸಿತ ಕಂಡಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.