ಕಳೆದ 10 ದಿನಗಳಿಂದ ಪೆಟ್ರೋಲ್, ಡೀಸೆಲ್ ಬೆಲೆ ಸ್ಥಿರ
ಜಾಗತಿಕ ಮಾರುಕಟ್ಟೆಯಲ್ಲಿ ತೈಲ ಬೆಲೆ ಸ್ಥಿರವಾಗಿರುವುದರಿಂದ ಕಳೆದ 10 ದಿನಗಳಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.
ನವದೆಹಲಿ: ಜಾಗತಿಕ ಮಾರುಕಟ್ಟೆಯಲ್ಲಿ ತೈಲ ಬೆಲೆ ಸ್ಥಿರವಾಗಿರುವುದರಿಂದ ಕಳೆದ 10 ದಿನಗಳಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.
ಸರ್ಕಾರಿ ಸ್ವಾಮ್ಯದ ಐಒಸಿ, ಎಚ್ ಪಿ ಹಾಗೂ ಬಿಪಿ ಕಂಪನಿಯ ಬಂಕ್ ಗಳಲ್ಲಿ ಸತತ 10ನೇ ದಿನವೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಏರಿಕೆಯಾಗಲಿ, ಇಳಿಕೆಯಾಗಲಿ ಕಂಡುಬಂದಿಲ್ಲ.
ಸಿಲಿಕಾನ್ ಸಿಟಿ ಬೆಂಗಳೂರು ಸೇರಿ ದೇಶದ ಮಹಾನಗರಗಳಲ್ಲಿ ಪೆಟ್ರೋಲ್, ಡೀಸೆಲ್ ದರದಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ. ಎಲ್ಲಾ ನಗರಗಳಲ್ಲಿಯೂ ಇಂಧನ ದರ ಸ್ಥಿರವಾಗಿದೆ.
ಅಕ್ಟೋಬರ್ 3ರಿಂದ ಸತತ 11ನೇ ದಿನವೂ ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಇನ್ನು ಪೆಟ್ರೋಲ್ ಬೆಲೆ ಕಳೆದ 21 ದಿನಗಳಿಂದ ಸ್ಥಿರವಾಗಿದೆ.
ದೇಶದ ಮಹಾನಗರಗಳಲ್ಲಿ ಇಂದಿನ ತೈಲ ದರ
ಬೆಂಗಳೂರಿನಲ್ಲಿ ಪೆಟ್ರೋಲ್ 83.69 ರೂ. ಹಾಗೂ ಡೀಸೆಲ್ 74.63 ರೂ.
ದೆಹಲಿಯಲ್ಲಿ ಪೆಟ್ರೋಲ್ 81.06 ರೂ. ಹಾಗೂ ಡೀಸೆಲ್ 70.46 ರೂ.
ಮುಂಬೈಯಲ್ಲಿ ಪೆಟ್ರೋಲ್ 87.74 ರೂ. ಹಾಗೂ ಡೀಸೆಲ್ 76.86 ರೂ.
ಚೆನ್ನೈನಲ್ಲಿ ಪೆಟ್ರೋಲ್ 84.14 ರೂ. ಹಾಗೂ ಡೀಸೆಲ್ 75.95 ರೂ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.