ವಾಣಿಜ್ಯ

ರಿಲಯನ್ಸ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೋವಿಡ್ ಲಸಿಕೆ ಅಭಿಯಾನ 'ಆರ್-ಸುರಕ್ಷಾ' ಮೇ 1ಕ್ಕೆ ಆರಂಭ

Sumana Upadhyaya

ಮುಂಬೈ: ಕೊರೋನಾ ಎರಡನೇ ಅಲೆ ದೇಶದಲ್ಲಿ ತೀವ್ರವಾಗಿ ಹಬ್ಬುತ್ತಿರುವ ಸಂದರ್ಭದಲ್ಲಿ ಲಸಿಕೆ ಅಭಿಯಾನವನ್ನು ಕ್ಷಿಪ್ರಗತಿಯಲ್ಲಿ ಹೆಚ್ಚಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಮೇ1ರಿಂದ 18 ವರ್ಷ ಮೇಲ್ಪಟ್ಟವರಿಗೆಲ್ಲಾ ಲಸಿಕೆ ನೀಡಲಾಗುತ್ತಿದ್ದು, ಖಾಸಗಿ ಆಸ್ಪತ್ರೆಗಳಿಗೆ ನೇರವಾಗಿ ಲಸಿಕೆ ಉತ್ಪಾದಕರಿಂದ ಕೊರೋನಾ ಖರೀದಿಸಲು ಕೇಂದ್ರ ಸರ್ಕಾರ ಅವಕಾಶ ನೀಡುತ್ತಿದೆ.

ಈ ಮಧ್ಯೆ ರಿಲಯನ್ಸ್ ಇಂಡಸ್ಟ್ರೀಸ್ ಸಂಸ್ಥೆ ದೇಶದ ಎಲ್ಲಾ ಭಾಗಗಳಲ್ಲಿರುವ ತನ್ನ ಉದ್ಯೋಗಿಗಳಿಗೆ ಮತ್ತು ಉದ್ಯೋಗಿಗಳ 18 ವರ್ಷ ಮೇಲ್ಪಟ್ಟ ಕುಟುಂಬ ಸದಸ್ಯರಿಗೆ ಮೇ 1ರಿಂದ ಲಸಿಕೆ ಹಾಕಿಸುವ ಆರ್-ಸುರಕ್ಷಾ ಅಭಿಯಾನ ಆರಂಭಿಸಲಿದೆ.

ಈ ಮೂಲಕ ಸಂಸ್ಥೆಯ ಪ್ರತಿಯೊಬ್ಬ ಉದ್ಯೋಗಿಯೂ ಮತ್ತು ಅವರ ಕುಟುಂಬದ 18 ವರ್ಷ ಮೇಲ್ಪಟ್ಟವರು ಲಸಿಕೆ ಹಾಕಿಸಿಕೊಂಡು ಕೋವಿಡ್ ಸೋಂಕಿನಿಂದ ರಕ್ಷಿಸಿಕೊಳ್ಳಬೇಕು ಎಂಬ ಉದ್ದೇಶವನ್ನು ರಿಲಯನ್ಸ್ ಇಂಡಸ್ಟ್ರೀಸ್  ಹೊಂದಿದೆ. 

SCROLL FOR NEXT