ವಾಣಿಜ್ಯ

ಸೆಪ್ಟೆಂಬರ್‌ನಿಂದ ಮಾರುತಿ ಸುಜುಕಿ ಕಾರುಗಳ ದರ ಹೆಚ್ಚಳ

Lingaraj Badiger

ನವದೆಹಲಿ: ದೇಶದ ಅತಿದೊಡ್ಡ ಕಾರು ತಯಾರಕ ಕಂಪನಿ ಮಾರುತಿ ಸುಜುಕಿ, ಸೆಪ್ಟೆಂಬರ್‌ನಿಂದ ತನ್ನ ವಿವಿಧ ಮಾದರಿಯ ಕಾರುಗಳ ಬೆಲೆಯನ್ನು ಹೆಚ್ಚಿಸಲಿದೆ.

ಕಂಪನಿಯು ಸೋಮವಾರ ಬಿಎಸ್‌ಇಗೆ ಸಲ್ಲಿಸಿದ ರೆಗ್ಯುಲೇಟರಿ ಫೈಲಿಂಗ್‌ನಲ್ಲಿ, ಕಚ್ಚಾ ವಸ್ತುಗಳು, ಬಿಡಿ ಭಾಗಗಳ ಬೆಲೆ ಹೆಚ್ಚಳದ ಪರಿಣಾಮವಾಗಿ ವಾಹನಗಳ ಬೆಲೆ ಏರಿಕೆ ಅನಿವಾರ್ಯವಾಗಿದೆ ಎಂದು ಹೇಳಿದೆ.

ಕಳೆದ ವರ್ಷದಲ್ಲಿ ವಿವಿಧ ಒಳಹರಿವಿನ ವೆಚ್ಚಗಳ ಹೆಚ್ಚಳದಿಂದಾಗಿ ವಾಹನಗಳ ಬೆಲೆಯ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗುತ್ತಿದೆ. ಆದ್ದರಿಂದ ಬೆಲೆ ಏರಿಕೆ ಮೂಲಕ ಗ್ರಾಹಕರಿಗೆ ಹೆಚ್ಚುವರಿ ಹೊರೆ ನೀಡುವುದು ಅನಿವಾರ್ಯವಾಗಿದೆ ಎಂದು ಕಂಪನಿ ಹೇಳಿದೆ.

ಸೆಪ್ಟೆಂಬರ್‌ನಿಂದ ಎಲ್ಲಾ ಮಾದರಿಯ ಕಾರುಗಳ ಬೆಲೆ ಏರಿಕೆಯಾಗಲಿದೆ. ವ್ಯಾಗನಾರ್‌ನಂತಹ ಹ್ಯಾಚ್‌ಬ್ಯಾಕ್‌ ಹಾಗೂ ಸಿಫ್ಟ್‌ ಡಿಜೈರ್ನಂತಹ ಸೆಡಾನ್‌ಗಳನ್ನು ಬಿಡುಗಡೆಗೊಳಿಸಿದೆ. ಜಾಗತಿಕ ಪ್ರವೃತ್ತಿಗಳು ಮತ್ತು ಹೆಚ್ಚಿನ ಬೇಡಿಕೆಯ ನಂತರ ಉಕ್ಕು, ತಾಮ್ರ ಮತ್ತು ಅಲ್ಯೂಮಿನಿಯಂನಂತಹ ವಿವಿಧ ಪ್ರಾಥಮಿಕ ಕಚ್ಚಾ ವಸ್ತುಗಳ ಬೆಲೆಗಳು ಏರಿಕೆಯಾಗುತ್ತಿವೆ.

SCROLL FOR NEXT