ಸಂಗ್ರಹ ಚಿತ್ರ 
ವಾಣಿಜ್ಯ

'ಹೈಸ್ಪೀಡ್ ಇಂಟರ್ನೆಟ್'; ಜೂನ್‍ ತಿಂಗಳಲ್ಲಿ ಜಿಯೋಗೆ ಅಭೂತಪೂರ್ವ ಪ್ರತಿಕ್ರಿಯೆ: ಟ್ರಾಯ್ ವರದಿ

ಕಳೆದ ಜೂನ್ ತಿಂಗಳಲ್ಲಿ ಜಿಯೋ ಸಂಸ್ಥೆ ಒದಗಿಸುತ್ತಿರುವ ಸೇವೆಗಳಿಗೆ ಅಭೂತಪೂರ್ವ ಪ್ರತಿತಕ್ರಿಯೆ ವ್ಯಕ್ತವಾಗಿದ್ದು, ಹೈಸ್ಪೀಡ್ ಇಂಟರ್ನೆಟ್ ಸೇವೆ ನೀಡಿಕೆಯಲ್ಲಿ ಜಿಯೋ ಅಗ್ರ ಸ್ಥಾನ ಪಡೆದಿದೆ.

ನವದೆಹಲಿ: ಕಳೆದ ಜೂನ್ ತಿಂಗಳಲ್ಲಿ ಜಿಯೋ ಸಂಸ್ಥೆ ಒದಗಿಸುತ್ತಿರುವ ಸೇವೆಗಳಿಗೆ ಅಭೂತಪೂರ್ವ ಪ್ರತಿತಕ್ರಿಯೆ ವ್ಯಕ್ತವಾಗಿದ್ದು, ಹೈಸ್ಪೀಡ್ ಇಂಟರ್ನೆಟ್ ಸೇವೆ ನೀಡಿಕೆಯಲ್ಲಿ ಜಿಯೋ ಅಗ್ರ ಸ್ಥಾನ ಪಡೆದಿದೆ.

ಪ್ರತಿ ಸೆಕೆಂಡ್‌ಗೆ ಸರಾಸರಿ 21.9 ಮೆಗಾಬೈಟ್ ಡೌನ್‌ಲೋಡ್ ವೇಗ ಕಾಯ್ದುಕೊಳ್ಳುವ ಮೂಲಕ 4ಜಿ ವಿಭಾಗದಲ್ಲಿ ಜೂನ್ ತಿಂಗಳಲ್ಲಿಯೂ ರಿಲಯನ್ಸ್ ಜಿಯೋ ತನ್ನ ಪಾರಮ್ಯ ಮೆರೆದಿದೆ. ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ (ಟ್ರಾಯ್) ಬಿಡುಗಡೆ ಮಾಡಿರುವ ಇತ್ತೀಚಿನ ವರದಿಯಲ್ಲಿ, 4ಜಿ  ವಿಭಾಗದಲ್ಲಿ ಜಿಯೋ ತನ್ನ ನಾಯಕತ್ವವನ್ನು ಮುಂದುವರಿಸಿದೆ. ಇನ್ನು 6.2 ಎಂಬಿಪಿಎಸ್ ಡೇಟಾ ವೇಗ ಹೊಂದಿರುವ ವೊಡಾಫೋನ್ ಐಡಿಯಾ ಅಪ್‌ಲೋಡ್ ವಿಭಾಗದಲ್ಲಿ ಮೊದಲ ಸ್ಥಾನವನ್ನು ಕಾಯ್ದುಕೊಂಡಿದೆ.

ರಿಲಯನ್ಸ್ ಜಿಯೋದ 4ಜಿ ನೆಟ್‌ವರ್ಕ್ ವೇಗ ಅಲ್ಪಮಟ್ಟದಲ್ಲಿ ಹೆಚ್ಚಳ ಕಂಡಿದೆ. ಇದು ತನ್ನ ಅತಿ ಸಮೀಪದ ಪ್ರತಿಸ್ಪರ್ಧಿ ವೊಡಾಫೋನ್ ಐಡಿಯಾಕ್ಕಿಂತ ಮೂರು ಪಟ್ಟು ಅಧಿಕವಾಗಿದೆ. ವೊಡಾಫೋನ್ ಐಡಿಯಾ ಜೂನ್ ತಿಂಗಳಲ್ಲಿ ಸರಾಸರಿ 6.5 ಎಂಬಿಪಿಎಸ್ ಡೌನ್‌ಲೋಡ್ ವೇಗ ಪ್ರದರ್ಶಿಸಿದೆ. ಏರ್ಟೆಲ್ 4ಜಿಯ  ವೇಗ ಕೊಂಚಮಟ್ಟಿಗೆ ಸುಧಾರಣೆಯಾಗಿದೆ. ಆದರೆ ಅದು 5 ಎಂಬಿಪಿಎಸ್ ವೇಗದೊಂದಿಗೆ ಅತ್ಯಂತ ಕೆಳಗಿನ ಸ್ಥಾನದಲ್ಲಿಯೇ ಉಳಿದುಕೊಂಡಿದೆ ಎಂದು ಟ್ರಾಯ್ ಗುರುವಾರ ಬಿಡುಗಡೆ ಮಾಡಿರುವ ವರದಿ ತಿಳಿಸಿದೆ.

ಡೌನ್‌ಲೋಡ್ ವೇಗವು ಗ್ರಾಹಕರು ಅಂತರ್ಜಾಲದಿಂದ ಮಾಹಿತಿಗಳನ್ನು ಪಡೆದುಕೊಳ್ಳಲು ನೆರವಾಗುತ್ತದೆ. ಅಪ್‌ಲೋಡ್ ವೇಗವು ತಮ್ಮ ಸಂಪರ್ಕದಲ್ಲಿರುವವರಿಗೆ ಚಿತ್ರಗಳು ಮತ್ತು ವಿಡಿಯೋಗಳನ್ನು ತ್ವರಿತವಾಗಿ ರವಾನಿಸಲು ನೆರವಾಗುತ್ತದೆ.

ಟ್ರಾಯ್ ಪ್ರಕಾರ, ವೊಡಾಫೋನ್ ಐಡಿಯಾ 6.2 ಎಂಬಿಪಿಎಸ್ ಸರಾಸರಿ ಅಪ್‌ಲೋಡ್ ವೇಗ ಹೊಂದಿತ್ತು. 4.8 ಎಂಬಿಪಿಎಸ್ ವೇಗ ಇರುವ ರಿಲಯನ್ಸ್ ಜಿಯೋ ನಂತರದ ಸ್ಥಾನದಲ್ಲಿದ್ದರೆ, ಭಾರ್ತಿ ಏರ್‌ಟೆಲ್ 3.9 ಎಂಬಿಪಿಎಸ್ ವೇಗದೊಂದಿಗೆ ಕೊನೆಯ ಸ್ಥಾನದಲ್ಲಿದೆ. ಸರ್ಕಾರಿ ಸ್ವಾಮ್ಯದ ದೂರಸಂರ್ಪಕ ಸಂಸ್ಥೆ  ಬಿಎಸ್‌ಎನ್‌ಎಲ್, ಆಯ್ದ ಪ್ರದೇಶಗಳಲ್ಲಿ 4ಜಿ ಸಂಪರ್ಕವನ್ನು ಕಲ್ಪಿಸಿದೆ. ಆದರೆ, ಅದರ ನೆಟ್‌ವರ್ಕ್ ವೇಗವನ್ನು ಟ್ರಾಯ್ ಚಾರ್ಟ್‌ನಲ್ಲಿ ನಮೂದಿಸಿಲ್ಲ. ಮೈಸ್ಪೀಡ್ ಆಪ್‌ನ ಸಹಾಯದೊಂದಿಗೆ ದೇಶಾದ್ಯಂತ ರಿಯಲ್ ಟೈಮ್ ಆಧಾರದಲ್ಲಿ ದತ್ತಾಂಶಗಳನ್ನು ಸಂಗ್ರಹಿಸುವ ಟ್ರಾಯ್, ಅದರ ಮೂಲಕ ಸರಾಸರಿ ವೇಗವನ್ನು ಲೆಕ್ಕ ಹಾಕುತ್ತದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT