ಸಾಂದರ್ಭಿಕ ಚಿತ್ರ 
ವಾಣಿಜ್ಯ

ಸ್ಟಾಕ್ ಎಕ್ಸ್ ಚೇಂಜ್ ಗೆ ಮುಂದಿನ ವರ್ಷ ಭಾರತೀಯ ಜೀವ ವಿಮಾ ನಿಗಮ ಪ್ರವೇಶ: ಕೇಂದ್ರ ಸಚಿವ ಸಂಪುಟ ಒಪ್ಪಿಗೆ 

ಸ್ಟಾಕ್ ಎಕ್ಸೇಂಜ್ ವಹಿವಾಟಿನಲ್ಲಿ ಪಟ್ಟಿಯಲ್ಲಿ ಭಾರತೀಯ ಜೀವ ವಿಮಾ ನಿಗಮವನ್ನು ಸೇರಿಸಲು ಕೇಂದ್ರ ಆರ್ಥಿಕ ವ್ಯವಹಾರಗಳ ಸಚಿವ ಸಂಪುಟ ತಾತ್ವಿಕ ಒಪ್ಪಿಗೆ ನೀಡಿದೆ ಎಂದು ಹಣಕಾಸು ಸಚಿವಾಲಯದ ಹಣಕಾಸು ಸೇವೆಗಳ ಇಲಾಖೆ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಗೆ ತಿಳಿಸಿದೆ.

ನವದೆಹಲಿ: ಸ್ಟಾಕ್ ಎಕ್ಸೇಂಜ್ ವಹಿವಾಟಿನಲ್ಲಿ ಪಟ್ಟಿಯಲ್ಲಿ ಭಾರತೀಯ ಜೀವ ವಿಮಾ ನಿಗಮವನ್ನು ಸೇರಿಸಲು ಕೇಂದ್ರ ಆರ್ಥಿಕ ವ್ಯವಹಾರಗಳ ಸಚಿವ ಸಂಪುಟ ತಾತ್ವಿಕ ಒಪ್ಪಿಗೆ ನೀಡಿದೆ ಎಂದು ಹಣಕಾಸು ಸಚಿವಾಲಯದ ಹಣಕಾಸು ಸೇವೆಗಳ ಇಲಾಖೆ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಗೆ ತಿಳಿಸಿದೆ.

ಸರ್ಕಾರಿ ಸ್ವಾಮ್ಯದ ಜೀವ ವಿಮಾದಾರರ ಆರಂಭಿಕ ಸಾರ್ವಜನಿಕ ಕೊಡುಗೆ (ಐಪಿಒ) ಪ್ರಸಕ್ತ ಹಣಕಾಸು ವರ್ಷದಲ್ಲಿ ಹೂಡಿಕೆ ಮಾಡುವ ಮೂಲಕ 1.75 ಲಕ್ಷ ಕೋಟಿ ರೂಪಾಯಿಗಳನ್ನು ಸಂಗ್ರಹಿಸುವ ಸರ್ಕಾರದ ಪ್ರಯತ್ನಗಳ ಒಂದು ಭಾಗವಾಗಿದೆ. ಮಾರ್ಚ್ 2022 ರಲ್ಲಿ ಕೊನೆಗೊಳ್ಳುವ ಪ್ರಸಕ್ತ ಹಣಕಾಸು ವರ್ಷದೊಳಗೆ ಎಲ್‌ಐಸಿ ಐಪಿಒ ಖಚಿತಪಡಿಸಿಕೊಳ್ಳಲು ಎಲ್ಲಾ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ಕೇಂದ್ರ ಸರ್ಕಾರ ಎಲ್ ಐಸಿಯಲ್ಲಿ ಶೇಕಡಾ 100ರಷ್ಟು ಷೇರುಗಳನ್ನು ಹೊಂದಿದ್ದು ಅದರ ಒಂದು ಭಾಗವನ್ನು ಪ್ರಕ್ರಿಯೆಗೆ ಮಾರಾಟ ಮಾಡಲು ಯೋಜಿಸಿದೆ. ಕಳೆದ ಬಜೆಟ್ ಅಧಿವೇಶನದಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಎಲ್‌ಐಸಿ ಐಪಿಒಗೆ ದಾರಿ ಮಾಡಿಕೊಡಲು ಜೀವ ವಿಮಾ ಕಾಯ್ದೆಯಲ್ಲಿ ಅಗತ್ಯ ತಿದ್ದುಪಡಿಗಳನ್ನು ತಂದಿದ್ದರು.

ಡೆಲಾಯ್ಟ್ ಮತ್ತು ಎಸ್‌ಬಿಐ ಕ್ಯಾಪಿಟಲ್ ಅನ್ನು ಐಪಿಒ ಪೂರ್ವ ಸಲಹೆಗಾರರಾಗಿ ನೇಮಿಸಲಾಗಿದೆ. ಮೂಲಗಳ ಪ್ರಕಾರ, ಎಲ್ ಐಸಿಯ ಸಂಪೂರ್ಣ ಚಟುವಟಿಕೆಯ ಪಟ್ಟಿಯನ್ನು ಸಿದ್ದಮಾಡಲಾಗಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್, ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

ಲೆಬನಾನ್ ನಲ್ಲಿ ಇಸ್ರೇಲ್ ಆರ್ಭಟ: ಮನೆಗಳ ಮೇಲೆ ಸ್ಫೋಟಕಗಳಿಂದ ದಾಳಿ; ಹಲವು ಹಳ್ಳಿಗಳು ನಾಮಾವಶೇಷ!

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

SCROLL FOR NEXT