ಸಂಗ್ರಹ ಚಿತ್ರ 
ವಾಣಿಜ್ಯ

ತೈಲ ಬೆಲೆ ಏರಿಕೆ ಮುಂದುವರಿಕೆ; ಬೆಂಗಳೂರಿನಲ್ಲಿ 105 ರೂ. ಗಡಿ ದಾಟಿದ ಪೆಟ್ರೋಲ್ ದರ!

ದೇಶಾದ್ಯಂತ ಪೆಟ್ರೋಲ್, ಡೀಸೆಲ್ ಬೆಲೆಗಳಲ್ಲಿ ಮತ್ತೆ ಏರಿಕೆಯಾಗಿದ್ದು, ಪೆಟ್ರೋಲ್ ದರ 36 ಪೈಸೆ ಮತ್ತು ಡೀಸೆಲ್ ದರ 17 ಪೈಸೆ ಏರಿಕೆಯಾಗಿದೆ. ಇದರೊಂದಿಗೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ ರೂ.105ರ ಗಡಿ ದಾಟಿದಂತಾಗಿದೆ.

ನವದೆಹಲಿ: ದೇಶಾದ್ಯಂತ ಪೆಟ್ರೋಲ್, ಡೀಸೆಲ್ ಬೆಲೆಗಳಲ್ಲಿ ಮತ್ತೆ ಏರಿಕೆಯಾಗಿದ್ದು, ಪೆಟ್ರೋಲ್ ದರ 36 ಪೈಸೆ ಮತ್ತು ಡೀಸೆಲ್ ದರ 17 ಪೈಸೆ ಏರಿಕೆಯಾಗಿದೆ. ಇದರೊಂದಿಗೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ ರೂ.105ರ ಗಡಿ ದಾಟಿದಂತಾಗಿದೆ.

ಸರ್ಕಾರಿ ಸ್ವಾಮ್ಯದ ತೈಲ ಸಂಸ್ಕರಣಾ ಕಂಪನಿಗಳು (ಒಎಂಸಿ) ಗುರುವಾರ ದೇಶಾದ್ಯಂತ ಇಂಧನ ದರವನ್ನು ಮತ್ತೊಮ್ಮೆ ಹೆಚ್ಚಿಸಿದ್ದು, ಈ ಮೂಲಕ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಹೊಸ ದಾಖಲೆಯ ಗರಿಷ್ಠ ಮಟ್ಟಕ್ಕೆ ತಲುಪಿದೆ. 

ಇಂಡಿಯನ್ ಆಯಿಲ್ ಕಾರ್ಪೊರೇಷನ್ ಮೂಲಗಳ ಪ್ರಕಾರ ಪ್ರತೀ ಲೀಟರ್ ಪೆಟ್ರೋಲ್ ದರದಲ್ಲಿ 36 ಪೈಸೆ ಮತ್ತು ಡೀಸೆಲ್ ದರ 17 ಪೈಸೆ ಏರಿಕೆಯಾಗಿದೆ. 

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 105ಕ್ಕೆ ಏರಿಕೆಯಾಗಿದ್ದು, ಪ್ರತೀ ಲೀಟರ್ ಡೀಸೆಲ್ ದರ 95.32 ರೂ ಗೆ ಏರಿಕೆಯಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 101.6ಕ್ಕೆ ಏರಿಕೆಯಾಗಿದ್ದು, ಪ್ರತೀ ಲೀಟರ್ ಡೀಸೆಲ್ ದರ 89.93ರೂ ಗೆ ಏರಿಕೆಯಾಗಿದೆ.

ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 107.6ಕ್ಕೆ ಏರಿಕೆಯಾಗಿದ್ದು, ಪ್ರತೀ ಲೀಟರ್ ಡೀಸೆಲ್ ದರ 97.51 ರೂ ಗೆ ಏರಿಕೆಯಾಗಿದೆ. ಕೋಲ್ಕತಾದಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 101.8ಕ್ಕೆ ಏರಿಕೆಯಾಗಿದ್ದು, ಪ್ರತೀ ಲೀಟರ್ ಡೀಸೆಲ್ ದರ 93.08 ರೂ ಗೆ ಏರಿಕೆಯಾಗಿದೆ. ಚೆನ್ನೈನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 102.28ಕ್ಕೆ ಏರಿಕೆಯಾಗಿದ್ದು, ಪ್ರತೀ ಲೀಟರ್ ಡೀಸೆಲ್ ದರ 94.44 ರೂ ಗೆ ಏರಿಕೆಯಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸರ್ಕಾರದ ಮೊದಲ ವಿಕೆಟ್ ಪತನ: ಕಣ್ಣೀರಿಡುತ್ತಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ನಾಗೇಂದ್ರ; BJP ಹೋರಾಟಕ್ಕೆ ಜಯ!

ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತೇನೆ; ಬನ್ನಿ ಅಖಾಡಕ್ಕೆ, ಬಳ್ಳಾರಿಯಲ್ಲಿ ನೀವು ರಿಜೆಕ್ಟ್ ಪೀಸ್‌ಗಳು: ರಾಮುಲು, ರೆಡ್ಡಿಗೆ ನಾಗೇಂದ್ರ ಸವಾಲು

ವಾಲ್ಮೀಕಿ ಹಗರಣದ 'ಕಿಂಗ್ ಪಿನ್' ನಾಗೇಂದ್ರ ಔಟ್: ಜನಾಕ್ರೋಶದ ಮುಂದೆ ಮಂಡಿಯೂರಿ ಶರಣಾದ ಭ್ರಷ್ಟ ಕಾಂಗ್ರೆಸ್ ಸರ್ಕಾರ! ಬಿಜೆಪಿ

ನೇಪಾಳದಲ್ಲಿ ದಿಢೀರ್ ಪ್ರವಾಹ: ಬಲಿಯಾದವರ ಸಂಖ್ಯೆ 538ಕ್ಕೆ ಏರಿಕೆ; 320 ಭಾರತೀಯ ಪ್ರವಾಸಿಗರು ನಾಪತ್ತೆ!

ಮೂಡ್ ಆಫ್ ದಿ ನೇಷನ್: ಪ್ರಧಾನಿ ರೇಸ್‌ನಲ್ಲಿ ಕೇಜ್ರಿವಾಲ್​ರನ್ನೇ ಹಿಂದಿಕ್ಕಿದ CJP ಸಂಸ್ಥಾಪಕ ಅಭಿಜೀತ್ ದೀಪ್ಕೆ!