ಆರ್ ಬಿ ಐ ಗವರ್ನರ್ ಶಕ್ತಿಕಾಂತ್ ದಾಸ್ 
ವಾಣಿಜ್ಯ

ಆರ್ ಬಿಐ ವಿತ್ತೀಯ ನೀತಿ ಪ್ರಕಟ: ಬಡ್ಡಿ ದರ ಯಥಾಸ್ಥಿತಿ ಮುಂದುವರಿಕೆ, ಆರ್ಥಿಕ ಬೆಳವಣಿಗೆ ದರ ಶೇ.9.5 ಅಂದಾಜು

ಕೋವಿಡ್-19 ಅನಿಶ್ಚಿತತೆ, ಹಣದುಬ್ಬರದ ಏರಿಳಿತದ ನಡುವೆ ಆರ್ ಬಿಐ ವಿತ್ತೀಯ ನೀತಿ ಸಮಿತಿ ಶುಕ್ರವಾರ ಬಡ್ಡಿ ದರವನ್ನು ಬದಲಾಯಿಸದೆ ಯಥಾಸ್ಥಿತಿ ಮುಂದುವರಿಸಿದೆ. ಆರ್ ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಇಂದು ತ್ರೈಮಾಸಿಕ ವಿತ್ತೀಯ ನೀತಿಯನ್ನು ಪ್ರಕಟಿಸಿದರು.

ಮುಂಬೈ: ಕೋವಿಡ್-19 ಅನಿಶ್ಚಿತತೆ, ಹಣದುಬ್ಬರದ ಏರಿಳಿತದ ನಡುವೆ ಆರ್ ಬಿಐ ವಿತ್ತೀಯ ನೀತಿ ಸಮಿತಿ ಶುಕ್ರವಾರ ಬಡ್ಡಿ ದರವನ್ನು ಬದಲಾಯಿಸದೆ ಯಥಾಸ್ಥಿತಿ ಮುಂದುವರಿಸಿದೆ. ಆರ್ ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಇಂದು ತ್ರೈಮಾಸಿಕ ವಿತ್ತೀಯ ನೀತಿಯನ್ನು ಪ್ರಕಟಿಸಿದರು.

ಕಳೆದ ವರ್ಷದ ತ್ರೈಮಾಸಿಕದ ಅವಧಿಯಲ್ಲಿದ್ದಂತೆ ರೆಪೊ ದರವನ್ನು ಶೇಕಡಾ 4ರಷ್ಟು ಮತ್ತು ರಿವರ್ಸ್ ರೆಪೊ ದರವನ್ನು ಶೇಕಡಾ 3.35ರಷ್ಟು ಮುಂದುವರಿಸಲಾಗಿದೆ. ಈ ಬಾರಿಯ ಹಣಕಾಸು ವರ್ಷದ ಆರಂಭದಲ್ಲಿ ನಡೆಸಲಾದ ವಿತ್ತೀಯ ನೀತಿ ಸಮಿತಿ ಸಭೆಯಲ್ಲಿ ಕೂಡ ರೆಪೊ ಮತ್ತು ರಿವರ್ಸ್ ರೆಪೊ ದರವನ್ನು ಬದಲಾಯಿಸದೆ ಯಥಾಸ್ಥಿತಿ ಮುಂದುವರಿಸಲಾಗಿತ್ತು.

ಕಳೆದ ವರ್ಷ ಕೋವಿಡ್ ಸೋಂಕು ಉಂಟಾದ ನಂತರ ವಿತ್ತೀಯ ನೀತಿಯ ದರವನ್ನು ಆರ್ ಬಿಐ ಬದಲಾಯಿಸದೆ ಯಥಾಸ್ಥಿತಿ ಮುಂದುವರಿಸುತ್ತಿರುವುದು ಇದು ಆರನೇ ಬಾರಿ. ಈ ಬಾರಿ ಕೂಡ ವಾಹನ, ಗೃಹ ಸಾಲದ ಬಡ್ಡಿದರವನ್ನು ಬದಲಾಯಿಸದೆ ಯಥಾಸ್ಥಿತಿ ಕಾಪಾಡಲಾಗಿದೆ. 

ಕೋವಿಡ್ ಆರ್ಥಿಕ ಸಂಕಷ್ಟದ ಈ ಸಮಯದಲ್ಲಿ ಮುಂದಿನ ವರ್ಷ ಮಾರ್ಚ್ 31ರವರೆಗೆ ಸೂಕ್ಷ್ಮ ವಲಯಗಳಿಗೆ 15 ಸಾವಿರ ಕೋಟಿ ರೂಪಾಯಿಗಳ ಪ್ರತ್ಯೇಕ ದ್ರವ್ಯತೆ ಹರಿವಿನ ಕೇಂದ್ರವನ್ನು ತೆರೆಯಲಾಗುವುದು. ಆರ್ ಬಿಐ ಸರ್ಕಾರದ ಭದ್ರತೆಗೆ ಜೂನ್ 17ರ ಹೊತ್ತಿಗೆ 40 ಸಾವಿರ ಕೋಟಿ ರೂಪಾಯಿಗಳನ್ನು ಪಡೆಯಲಿದ್ದು, ಎರಡನೇ ಹಣಕಾಸು ತ್ರೈಮಾಸಿಕದಲ್ಲಿ 1.20 ಲಕ್ಷ ಕೋಟಿ ರೂಪಾಯಿಗಳನ್ನು ಜಿ ವಲಯಕ್ಕೆ ತೆಗೆದುಕೊಳ್ಳಲಿದೆ ಎಂದು ಶಕ್ತಿಕಾಂತ್ ದಾಸ್ ತಿಳಿಸಿದ್ದಾರೆ. 

ಜಿಡಿಪಿ: 2021-22ನೇ ವರ್ಷದ ದೇಶದ ಜಿಡಿಪಿಯನ್ನು ಶೇಕಡಾ 9.5ರಷ್ಟು ಅಂದಾಜಿಸಲಾಗಿದೆ, ಈ ಹಿಂದೆ 10.5ರಷ್ಟು ಆರ್ ಬಿಐ ಆರ್ಥಿಕ ಅಭಿವೃದ್ಧಿಯನ್ನು ಅಂದಾಜಿಸಿತ್ತು. ಆದರೆ ಕೊರೋನಾ ಎರಡನೇ ಅಲೆ ದೇಶದ ಆರ್ಥಿಕ ಬೆಳವಣಿಗೆಯನ್ನು ಮತ್ತಷ್ಟು ಕುಂಠಿತಗೊಳಿಸಿದೆ. ಮಾರ್ಜಿನಲ್ ಸ್ಟ್ಯಾಂಡಿಂಗ್ ಫೆಸಿಲಿಟಿ (ಎಂಎಸ್ಎಫ್) ದರ ಮತ್ತು ಬ್ಯಾಂಕ್ ದರಗಳನ್ನು ಬದಲಾಯಿಸದೆ ಶೇಕಡಾ 4.25ರಷ್ಟು ನಿಗದಿಪಡಿಸಿದೆ.

ಹಿಂದಿನ ವರ್ಷಕ್ಕಿಂತ ಜನವರಿ-ಮಾರ್ಚ್ ತ್ರೈಮಾಸಿಕದಲ್ಲಿ ಭಾರತೀಯ ಆರ್ಥಿಕತೆಯು 1.6% ರಷ್ಟು ಏರಿಕೆಯಾಗಿದೆ ಆದರೆ ಇಡೀ ಹಣಕಾಸು ವರ್ಷದಲ್ಲಿ 7.3% ನಷ್ಟು ಕುಸಿತ ಕಂಡಿದೆ.

ರೆಪೊ ದರ: ಬ್ಯಾಂಕುಗಳಲ್ಲಿ ಹಣದ ಕೊರತೆಯಾದರೆ ಅಥವಾ ಹಣದ ಅವಶ್ಯಕತೆಯಿದ್ದರೆ ಆರ್ ಬಿಐ ಬ್ಯಾಂಕುಗಳಿಗೆ ಕೊಡುವ ಸಾಲದ ಹಣದ ಮೇಲೆ ವಿಧಿಸುವ ನಿಶ್ಚಿತ ಬಡ್ಡಿ ದರ ರೆಪೊ ದರವಾಗಿದೆ. ಹಣದುಬ್ಬರವನ್ನು ನಿಯಂತ್ರಿಸಲು ವಿತ್ತೀಯ ಅಧಿಕಾರಿಗಳು ರೆಪೊ ದರವನ್ನು ಬಳಸುತ್ತಾರೆ.

ಹಣದುಬ್ಬರದ ಸಂದರ್ಭದಲ್ಲಿ, ಕೇಂದ್ರ ಬ್ಯಾಂಕು ಆರ್ ಬಿಐ ರೆಪೊ ದರವನ್ನು ಹೆಚ್ಚಿಸುತ್ತವೆ, ಸಾಧ್ಯವಾದಷ್ಟು ಬ್ಯಾಂಕುಗಳು ಆರ್ ಬಿಐಯಿಂದ ಸಾಲ ಪಡೆಯುವುದನ್ನು ತಡೆಯುತ್ತದೆ. ಇದು ಅಂತಿಮವಾಗಿ ಆರ್ಥಿಕತೆಯಲ್ಲಿ ಹಣ ಪೂರೈಕೆಯನ್ನು ಕಡಿಮೆ ಮಾಡಿ ಹಣದುಬ್ಬರ ನಿಯಂತ್ರಿಸಲು ಸಹಾಯ ಮಾಡುತ್ತದೆ.

ರಿವರ್ಸ್ ರೆಪೊ ದರ: ಇದಕ್ಕೆ ಪ್ರತಿಯಾಗಿ ಆರ್‌ಬಿಐ ಅಲ್ಪಾವಧಿಗೆ ಬ್ಯಾಂಕುಗಳಿಂದ ಹಣವನ್ನು ಸಾಲ ಪಡೆದು ಆ ಹಣದ ಮೇಲೆ ನೀಡುವ ಬಡ್ಡಿದರವನ್ನು ರಿವರ್ಸ್ ರೆಪೊ ದರ ಎಂದು ಕರೆಯುತ್ತಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಉತ್ತರ ಪ್ರದೇಶ: "ಆಕ್ಷೇಪಾರ್ಹ" ಸ್ಥಿತಿಯಲ್ಲಿದ್ದ ಪ್ರೇಮಿಗಳನ್ನು ಹೊಡೆದು ಕೊಂದ ಕುಟುಂಬಸ್ಥರು!

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

SCROLL FOR NEXT