ರತನ್ ಟಾಟಾ 
ವಾಣಿಜ್ಯ

ಇದು ಗೆಲುವು ಅಥವಾ ಸೋಲಿನ ವಿಷಯ ಅಲ್ಲ: ಸೈರಸ್ ಮಿಸ್ತ್ರಿ ಪ್ರಕರಣದಲ್ಲಿ ಸುಪ್ರೀಂ ತೀರ್ಪಿಗೆ ರತನ್ ಟಾಟಾ ಪ್ರತಿಕ್ರಿಯೆ

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನದಿಂದ ಸೈರಸ್ ಮಿಸ್ತ್ರಿ ಅವರನ್ನು ತೆಗೆದುಹಾಕುವ ನಿರ್ಧಾರ ಸರಿ ಎಂದ ಸುಪ್ರೀಂ ಕೋರ್ಟ್ ತೀರ್ಪಿಗೆ ರತನ್ ಟಾಟಾ ಪ್ರತಿಕ್ರಿಯಿಸಿದ್ದಾರೆ.

ನವದೆಹಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನದಿಂದ ಸೈರಸ್ ಮಿಸ್ತ್ರಿ ಅವರನ್ನು ತೆಗೆದುಹಾಕುವ ನಿರ್ಧಾರ ಸರಿ ಎಂದ ಸುಪ್ರೀಂ ಕೋರ್ಟ್ ತೀರ್ಪಿಗೆ ರತನ್ ಟಾಟಾ ಪ್ರತಿಕ್ರಿಯಿಸಿದ್ದಾರೆ.

ಟಾಟಾ ಸನ್ಸ್‌ನ ಮಾಜಿ ಅಧ್ಯಕ್ಷರಾಗಿರುವ ರತನ್ ಟಾಟಾ ಈ ಸಂಬಂಧ ಟ್ವೀಟ್ ಮಾಡಿದ್ದು  "ಗೌರವಾನ್ವಿತ ಸುಪ್ರೀಂ ಕೋರ್ಟ್ ಇಂದು ನೀಡಿದ ತೀರ್ಪನ್ನು ನಾನು ಪ್ರಶಂಸಿಸುತ್ತೇನೆ ಮತ್ತು ಅದಕ್ಕಾಗಿ ಕೃತಜ್ಞನಾಗಿದ್ದೇನೆ.

"ಇದು ಗೆಲುವು ಅಥವಾ ಸೋಲಿನ ವಿಷಯವಲ್ಲ. ಸಮಗ್ರತೆ ಮತ್ತು ಗುಂಪಿನ ನೈತಿಕ ನಡವಳಿಕೆಯ ಮೇಲೆನಡೆದ ದಾಳಿಯ ನಂತರ, ಟಾಟಾ ಸನ್ಸ್‌ನ ಎಲ್ಲಾ ಮೇಲ್ಮನವಿಗಳನ್ನು ಎತ್ತಿಹಿಡಿಯುವ ತೀರ್ಪು ಯಾವಾಗಲೂ ಸಮೂಹದ ಮಾರ್ಗದರ್ಶಿ ಸೂತ್ರಗಳಾಗಿರುವ ಮೌಲ್ಯಗಳು ಮತ್ತು ನೈತಿಕತೆಯ ಮೌಲ್ಯಮಾಪನವಾಗಿದೆ. ಇದು ನಮ್ಮ ನ್ಯಾಯಾಂಗ ವ್ಯವಸ್ಥೆಯ ಮೇಲಿನ ನಂಬಿಕೆಯನ್ನು ಬಲಪಡಿಸುತ್ತದೆ. " ಎಂದಿದ್ದಾರೆ.

ಸುಪ್ರೀಂ ಕೋರ್ಟ್ ಶುಕ್ರವಾರ ನೀಡಿರುವ ತೀರ್ಪಿನಲ್ಲಿ ಟಾಟಾ ಸನ್ಸ್‌ನ ಅಧ್ಯಕ್ಷರಾಗಿ ಸೈರಸ್ ಮಿಸ್ತ್ರಿ ಅವರನ್ನು ಪುನಃ ನೇಮಿಸಲು ಆದೇಶಿಸಿದ 2019 ರ ಡಿಸೆಂಬರ್ 17 ರ ರಾಷ್ಟ್ರೀಯ ಕಂಪನಿ ಕಾನೂನು ಮೇಲ್ಮನವಿ ನ್ಯಾಯಾಧಿಕರಣದ ಆದೇಶಕ್ಕೆ  ಅಸಮ್ಮತಿ ಸೂಚಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

IPL 2026 Eliminator: ವಿಶ್ವದಾಖಲೆಯ ಹೊಸ್ತಿಲಲ್ಲಿ ಎಡವಿದ Vaibhav Suryavanshi, ಮತ್ತೊಂದು ರೆಕಾರ್ಡ್ ಜಸ್ಟ್ ಮಿಸ್!

ಬೆಂಗಳೂರು: ಮಾಜಿ ಪ್ರೇಯಸಿ ಕರೆದಳೆಂದು ಮನೆಗೆ ಹೋದ ಪ್ರಿಯಕರ ದುರಂತ ಸಾವು: ಅಷ್ಟಕ್ಕೂ ಆಗಿದ್ದೇನು?

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ: ಕಣ್ಣೀರಿಟ್ಟ CM ಕಚೇರಿ ಸಿಬ್ಬಂದಿ; ಬೆಂಬಲಿಗರಿಂದ ಪ್ರತಿಭಟನೆ

SCROLL FOR NEXT