ಇಂದೂ ತೈಲೋತ್ಪನ್ನಗಳ ಬೆಲೆ ಹೆಚ್ಚಳ: ಪೆಟ್ರೋಲ್ ದರದಲ್ಲಿ 25 ಪೈಸೆ ಏರಿಕೆ
ದೇಶದಲ್ಲಿ ಸತತ ಮೂರನೇ ದಿನ ತೈಲೋತ್ಪನ್ನಗಳ ದರ ಏರಿಕೆಯಾಗಿದ್ದು, ಇಂದು ಪೆಟ್ರೋಲ್ ದರದಲ್ಲಿ 25 ಪೈಸೆ ಮತ್ತು ಡೀಸೆಲ್ ದರದಲ್ಲಿ 27 ಪೈಸೆ ಏರಿಕೆಯಾಗಿದೆ.
ನವದೆಹಲಿ: ದೇಶದಲ್ಲಿ ಸತತ ಮೂರನೇ ದಿನ ತೈಲೋತ್ಪನ್ನಗಳ ದರ ಏರಿಕೆಯಾಗಿದ್ದು, ಇಂದು ಪೆಟ್ರೋಲ್ ದರದಲ್ಲಿ 25 ಪೈಸೆ ಮತ್ತು ಡೀಸೆಲ್ ದರದಲ್ಲಿ 27 ಪೈಸೆ ಏರಿಕೆಯಾಗಿದೆ.
ಬುಧವಾರ ಮತ್ತೆ ದೇಶದಲ್ಲಿ ತೈಲೋತ್ಪನ್ನಗಳ ದರ ಏರಿಕೆಯಾಗಿದ್ದು, ಪ್ರತೀ ಲೀಟರ್ ಪೆಟ್ರೋಲ್ 25 ಪೈಸೆ ಮತ್ತು ಡೀಸೆಲ್ ದರ 27 ಪೈಸೆಯಷ್ಟು ಏರಿಕೆಯಾಗಿದೆ. ಆ ಮೂಲಕ ರಾಜಧಾನಿ ದೆಹಲಿಯಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 92.05 ರೂಗೆ ಏರಿಕೆಯಾಗಿದ್ದು, ಡೀಸೆಲ್ ದರ 82.61ರೂಗೆ ಏರಿಕೆಯಾಗಿದೆ.
ಇನ್ನು ವಾಣಿಜ್ಯ ನಗರಿ ಮುಂಬೈನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 98.36ಕ್ಕೆ ಏರಿಕೆಯಾಗಿದ್ದು, ಡೀಸೆಲ್ ದರ 89.75ರೂ ಗೆ ಏರಿಕೆಯಾಗಿದೆ. ಮಧ್ಯ ಪ್ರದೇಶದ ರಾಜಧಾನಿ ಭೋಪಾಲ್ ನಲ್ಲಿ ಮೊದಲ ಬಾರಿಗೆ ಪೆಟ್ರೋಲ್ ದರ 100 ರೂ ಗಡಿ ದಾಟಿದ್ದು, ಇಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 100.08ರೂ ಗೆ ಏರಿಕೆಯಾಗಿದೆ. ಅಂತೆಯೇ ಡೀಸೆಲ್ ದರ 90.05ರೂ ಗೆ ಏರಿಕೆಯಾಗಿದೆ. ಆ ಮೂಲಕ ಪೆಟ್ರೋಲ್ ದರ 100ರೂ ಗಡಿ ದಾಟಿದ ದೇಶದ ರಾಜಧಾನಿ ಎಂಬ ಕುಖ್ಯಾತಿಗೆ ಭೋಪಾಲ್ ಪಾತ್ರವಾದಂತಾಗಿದೆ.
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರದಲ್ಲಿ 26 ಪೈಸೆ ಏರಿಕೆಯಾಗಿದ್ದು, ಆ ಮೂಲಕ ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 95.17ಕ್ಕೆ ಏರಿಕೆಯಾಗಿದ್ದು, ಡೀಸೆಲ್ ದರ ಕೂಡ 27 ಪೈಸೆ ಏರಿಕೆಯಾಗಿ ಪ್ರತೀ ಲೀಟರ್ ಡೀಸೆಲ್ ದರ 87.63 ರೂಗೆ ಏರಿಕೆಯಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.