ಸ್ಪುಟ್ನಿಕ್ ವಿ ಲಸಿಕೆ 
ವಾಣಿಜ್ಯ

ಆರ್ ಡಿಐಎಫ್, ಪ್ಯಾನೇಶಿಯಾ ಬಯೋಟೆಕ್ ಸಹಭಾಗಿತ್ವದಲ್ಲಿ ದೇಶದಲ್ಲಿ ಸ್ಪುಟ್ನಿಕ್ ವಿ ಲಸಿಕೆ ಉತ್ಪಾದನೆ ಆರಂಭ!

ರಷ್ಯಾದ ಸಾರ್ವಭೌಮತ್ವ ಸಂಪತ್ತು ನಿಧಿ ಸಹಭಾಗಿತ್ವದಲ್ಲಿ ದೇಶದ ಪ್ರಮುಖ ಔಷಧೀಯ ಕಂಪನಿ ಪ್ಯಾನೇಶಿಯಾ ಬಯೋಟೆಕ್ ಭಾರತದಲ್ಲಿ ಸ್ಪುಟ್ನಿಕ್ ವಿ ಕೋವಿಡ್-19 ಲಸಿಕೆಯನ್ನು ಉತ್ಪಾದನೆಯನ್ನು ಆರಂಭಿಸಿದೆ ಎಂದು ಜಂಟಿ ಹೇಳಿಕೆಯೊಂದರಲ್ಲಿ ಸೋಮವಾರ ತಿಳಿಸಲಾಗಿದೆ.

ನವದೆಹಲಿ: ರಷ್ಯಾದ ಸಾರ್ವಭೌಮತ್ವ ಸಂಪತ್ತು ನಿಧಿ ಸಹಭಾಗಿತ್ವದಲ್ಲಿ ದೇಶದ ಪ್ರಮುಖ ಔಷಧೀಯ ಕಂಪನಿ ಪ್ಯಾನೇಶಿಯಾ ಬಯೋಟೆಕ್ ಭಾರತದಲ್ಲಿ ಸ್ಪುಟ್ನಿಕ್ ವಿ ಕೋವಿಡ್-19 ಲಸಿಕೆಯನ್ನು ಉತ್ಪಾದನೆಯನ್ನು ಆರಂಭಿಸಿದೆ ಎಂದು ಜಂಟಿ ಹೇಳಿಕೆಯೊಂದರಲ್ಲಿ ಸೋಮವಾರ ತಿಳಿಸಲಾಗಿದೆ.

ರಷ್ಯಾ ನೇರ ಹೂಡಿಕೆ ನಿಧಿ ( ಆರ್ ಡಿಐಎಫ್ ) ಲಸಿಕೆಯನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾರಾಟ ಮಾಡಲು ಮತ್ತು ಪ್ಯಾನೇಶಿಯಾ ಬಯೋಟೆಕ್ ಭಾರತದಲ್ಲಿ ಪ್ರತಿ ವರ್ಷ 100 ಮಿಲಿಯನ್ ಡೋಸ್ ಸ್ಪುಟ್ನಿಕ್ ವಿ ಲಸಿಕೆ ತಯಾರಿಸಲು ಒಪ್ಪಿಕೊಂಡಿರುವುದಾಗಿ ಏಪ್ರಿಲ್ ನಲ್ಲಿ ಘೋಷಿಸಲಾಗಿತ್ತು.

ಹಿಮಾಚಲ ಪ್ರದೇಶದ ಬಾಡ್ಡಿಯಲ್ಲಿ ಪ್ಯಾನೇಶಿಯಾ ಬಯೋಟೆಕ್ ಉತ್ಪಾದಿಸುವ ಮೊದಲ ಹಂತದ ಕೋವಿಡ್-19 ಲಸಿಕೆಯ ಗುಣಮಟ್ಟ ನಿಯಂತ್ರಣಕ್ಕಾಗಿ ರಷ್ಯಾದ ಗಾಮೆಲೆಯಾ ಸೆಂಟರ್ ಗೆ ಕಳುಹಿಸಲಾಗುವುದು, ಪೂರ್ಣ ಪ್ರಮಾಣದ ಲಸಿಕೆ ಉತ್ಪಾದನೆ ಈ ವರ್ಷದ ಬೇಸಿಗೆಯಲ್ಲಿ ಆರಂಭವಾಗುವ ಸಾಧ್ಯತೆಯಿರುವುದಾಗಿ ಜಂಟಿ ಹೇಳಿಕೆಯಲ್ಲಿ ತಿಳಿಸಲಾಗಿದೆ. 

ಪ್ಯಾನೇಶಿಯಾ ಬಯೋಟೆಕ್ ಸಹಭಾಗಿತ್ವದಲ್ಲಿ ಲಸಿಕೆ ಉತ್ಪಾದನೆ ಆರಂಭಿಸುತ್ತಿರುವುದು ಕೋವಿಡ್ ಸಾಂಕ್ರಾಮಿಕ ವಿರುದ್ಧದ ದೇಶದ
ಹೋರಾಟದಲ್ಲಿ ಮಹತ್ವದ ಹೆಜ್ಜೆಯಾಗಿದೆ ಎಂದು ಆರ್ ಡಿಐಎಫ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕಿರಿಲ್ ಡೆಮಿಟ್ರಿವ್ ಹೇಳಿದ್ದಾರೆ.

ಆರ್ ಡಿಐಎಫ್ ಸಹಭಾಗಿತ್ವದಲ್ಲಿ ಸ್ಪುಟ್ನಿಕ್ ವಿ ಲಸಿಕೆ ಆರಂಭಿಸುತ್ತಿರುವುದು ಮಹತ್ವದ ಹೆಜ್ಜೆಯಾಗಿದೆ. ದೇಶ ಹಾಗೂ ವಿಶ್ವದಾದ್ಯಂತ
 ಸಹಜ ಪರಿಸ್ಥಿತಿಯನ್ನು ಮರಳಿ ತರಲು ನೆರವಾಗಲಿದೆ ಎಂಬ ಭರವಸೆಯಿದೆ ಎಂದು ಪ್ಯಾನೇಶಿಯಾ ಬಯೋಟೆಕ್ ವ್ಯವಸ್ಥಾಪಕ
ನಿರ್ದೇಶಕ ರಾಜೇಶ್ ಜೈನ್ ಹೇಳಿದ್ದಾರೆ.

ಕೊರೋನಾ ವಿರುದ್ಧ ರಷ್ಯಾ ನಿರ್ಮಿತ ಸ್ಪುಟ್ನಿಕ್ ವಿ ಲಸಿಕೆಯನ್ನು ಮೇ 14ರಿಂದ ಬಳಸಲಾಗುತ್ತಿದ್ದು, ದೇಶದಲ್ಲಿ  ತುರ್ತು ಸಂದರ್ಭಗಳಲ್ಲಿ ಬಳಸಲು ಈ ಲಸಿಕೆ ನೋಂದಣಿಯಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT