ಸಾಂದರ್ಭಿಕ ಚಿತ್ರ 
ವಾಣಿಜ್ಯ

ಗ್ರಾಹಕರ ಜೇಬಿಗೆ ಕತ್ತರಿ: ಪೆಟ್ರೋಲ್-ಡೀಸೆಲ್ ಬೆಲೆ ಸತತ ಏರಿಕೆ, ಇಂದಿನ ದರ ವಿವರ ಹೀಗಿದೆ

ಪೆಟ್ರೋಲ್-ಡೀಸೆಲ್ ಬೆಲೆ ಮತ್ತೆ ಬುಧವಾರ 35 ಪೈಸೆ ಏರಿಕೆಯಾಗಿದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

ನವದೆಹಲಿ: ಪೆಟ್ರೋಲ್-ಡೀಸೆಲ್ ಬೆಲೆ ಮತ್ತೆ ಬುಧವಾರ 35 ಪೈಸೆ ಏರಿಕೆಯಾಗಿದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

ಇಂದಿನ ದರವೆಷ್ಟು?: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ ಮತ್ತು ಲೀಟರ್ ಡೀಸೆಲ್ ದರದಲ್ಲಿ ಕ್ರಮವಾಗಿ 35 ಪೈಸೆ ಹೆಚ್ಚಳವಾಗಿದೆ. ಇದರಂತೆ ದೆಹಲಿಯಲ್ಲಿ ಲೀಟರ್​ ಪೆಟ್ರೋಲ್​ ದರ 110 ರೂಪಾಯಿ 04 ಪೈಸೆಗೆ ಏರಿಕೆಯಾಗಿದ್ದು,  ಡೀಸೆಲ್​ ದರ ಸಹ 100ರ ಗಡಿ ತಲುಪಿ 98 ರೂಪಾಯಿ 42 ಪೈಸೆಯಾಗಿದೆ. ಇಂಧನ ದರ ಗರಿಷ್ಠ ಮಟ್ಟ ತಲುಪಿದೆ.

ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 115 ರೂಪಾಯಿ 85 ಪೈಸೆಯಾಗಿದ್ದು, ಡೀಸೆಲ್ ದರ 106 ರೂಪಾಯಿ 62 ಪೈಸೆಯಾಗಿದೆ. ಅದೇ ರೀತಿ ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ದರ 110 ರೂಪಾಯಿ 49 ಪೈಸೆಯಾಗಿದ್ದು, ಡೀಸೆಲ್ ದರ 101 ರೂಪಾಯಿ 56 ಪೈಸೆಯಾಗಿದೆ. ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ಬೆಲೆ 106 ರೂಪಾಯಿ 66 ಪೈಸೆಯಾಗಿದ್ದು, ಡೀಸೆಲ್ ಬೆಲೆ 102 ರೂಪಾಯಿ 59 ಪೈಸೆಯಾಗಿದೆ.

ಇನ್ನು ಕರ್ನಾಟಕ ರಾಜಧಾನಿ ಬೆಂಗಳೂರಿನಲ್ಲಿ ಪೆಟ್ರೋಲ್ ದರ ಲೀಟರ್ ಗೆ 113ರೂಪಾಯಿ 93 ಪೈಸೆಯಾಗಿದ್ದು, ಡೀಸೆಲ್ ಬೆಲೆ 104 ರೂಪಾಯಿ 50 ಪೈಸೆಯಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT