ವಾಣಿಜ್ಯ

ಜಿಎಸ್‌ಟಿ ಪರಿಹಾರವಾಗಿ ರಾಜ್ಯಗಳಿಗೆ ಕೇಂದ್ರದಿಂದ 17,000 ಕೋಟಿ ರೂ. ಬಿಡುಗಡೆ

Lingaraj Badiger

ನವದೆಹಲಿ: ಆದಾಯ ಕೊರತೆಯನ್ನು ಸರಿದೂಗಿಸಲು ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಜಿಎಸ್ ಟಿ ಪರಿಹಾರವಾಗಿ ಬುಧವಾರ 17,000 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ.

ಇದರೊಂದಿಗೆ, 2021-22ನೇ ಸಾಲಿನಲ್ಲಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಇದುವರೆಗೆ ಒಟ್ಟು 60,000 ಕೋಟಿ ರೂಪಾಯಿ ಜಿಎಸ್ ಟಿ ಪರಿಹಾರ ಬಿಡುಗಡೆ ಮಾಡಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

ಜಿಎಸ್ ಟಿ ಕೌನ್ಸಿಲ್ ಸಭೆಯಲ್ಲಿ ತೆಗೆದುಕೊಂಡ ನಿರ್ಧಾರದಂತೆ ಪ್ರಸಕ್ತ ಹಣಕಾಸು ವರ್ಷದಲ್ಲಿ ಜಿಎಸ್‌ಟಿ ಪರಿಹಾರದ ಕೊರತೆಯ ಬದಲಾಗಿ 1.59 ಲಕ್ಷ ಕೋಟಿ ರೂಪಾಯಿಗಳ ಬ್ಯಾಕ್ ಟು ಬ್ಯಾಕ್ ಸಾಲವನ್ನು ಈಗಾಗಲೇ ಬಿಡುಗಡೆ ಮಾಡಲಾಗಿದೆ ಎಂದು ಸಚಿವಾಲಯ ತಿಳಿಸಿದೆ.

ಕೇಂದ್ರ ಸರ್ಕಾರ ಪ್ರಸಕ್ತ ಹಣಕಾಸು ವರ್ಷದಲ್ಲಿ ರಾಜ್ಯಗಳಿಗೆ ಪಾವತಿಸಬೇಕಾದ ಜಿಎಸ್‌ಟಿ ಪರಿಹಾರದ ಕೊರತೆಯನ್ನು 2.59 ಲಕ್ಷ ಕೋಟಿ ರೂಪಾಯಿ ಎಂದು ಅಂದಾಜಿಸಿದೆ. ಅದರಲ್ಲಿ ಈ ವರ್ಷ ಸುಮಾರು 1.59 ಲಕ್ಷ ಕೋಟಿ ಸಾಲವನ್ನು ಈಗಾಗಲೇ ಬಿಡುಗಡೆ ಮಾಡಿದೆ.

SCROLL FOR NEXT