ಸಂಗ್ರಹ ಚಿತ್ರ 
ವಾಣಿಜ್ಯ

ಸತತ ಮೂರನೇ ದಿನವೂ ತೈಲೋತ್ಪನ್ನಗಳ ದರ ಏರಿಕೆ: ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ಪೆಟ್ರೋಲಿಯಂ ಉತ್ಪನ್ನಗಳು

ಸತತ ಮೂರನೇ ದಿನವೂ ದೇಶಾದ್ಯಂತ ಮತ್ತೆ ತೈಲೋತ್ಪನ್ನಗಳ ದರ ಏರಿಕೆಯಾಗಿದ್ದು, ಶನಿವಾರ ಪೆಟ್ರೋಲಿಯಂ ಉತ್ಪನ್ನಗಳು ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ತಲುಪಿವೆ.

ಮುಂಬೈ: ಸತತ ಮೂರನೇ ದಿನವೂ ದೇಶಾದ್ಯಂತ ಮತ್ತೆ ತೈಲೋತ್ಪನ್ನಗಳ ದರ ಏರಿಕೆಯಾಗಿದ್ದು, ಶನಿವಾರ ಪೆಟ್ರೋಲಿಯಂ ಉತ್ಪನ್ನಗಳು ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ತಲುಪಿವೆ.

ಹೌದು..  ದೇಶದಲ್ಲಿ ಶನಿವಾರ ಪೆಟ್ರೋಲ್ ದರದಲ್ಲಿ 25 ಪೈಸೆ ಮತ್ತು ಡೀಸೆಲ್ ದರದಲ್ಲಿ 30 ಪೈಸೆ ಹೆಚ್ಚಳವಾಗಿದೆ. ಕಳೆದ ಸೆ.5ರಂದು ಪೆಟ್ರೋಲ್ , ಡೀಸೆಲ್ ಬೆಲೆಯಲ್ಲಿ ಸರಾಸರಿ 15 ರಿಂದ 19 ಪೈಸೆಯಷ್ಟು ಇಳಿಕೆಯಾಗಿತ್ತು.  ಆ ಬಳಿಕ ನಿಯಮಿತವಾಗಿ ತೈಲೋತ್ಪನ್ನಗಳ ದರ ಏರಿಕೆಯಾಗುತ್ತಿದೆ.

ಸರ್ಕಾರಿ ತೈಲ ಕಂಪನಿಗಳ ಇಂದು (ಅಕ್ಟೋಬರ್ 2, ಶನಿವಾರ) ಪೆಟ್ರೋಲ್, ಡೀಸೆಲ್ ಬೆಲೆಯನ್ನು ಏರಿಕೆ ಮಾಡಿದ್ದು, ಇಂದು ಲೀಟರ್ ಪೆಟ್ರೋಲ್ ದರ 25 ರಿಂದ 30 ಪೈಸೆ ಹೆಚ್ಚಳವಾಗಿದ್ದರೆ, ಪ್ರತೀ ಲೀಟರ್ ಡೀಸೆಲ್ ದರ 28 ರಿಂದ 30 ಪೈಸೆ ಹೆಚ್ಚಳವಾಗಿದೆ. 

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 102.14 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 90.47 ರೂಪಾಯಿ ಇದೆ. ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 108.19 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 98.16 ರೂಪಾಯಿ ಆಗಿದೆ. ಅದೇ ರೀತಿ ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ದರ 102.74 ರೂಪಾಯಿ ಹಾಗೂ ಲೀಟರ್ ಡಿಸೆಲ್ ದರ 93.54 ರೂಪಾಯಿದೆ ಏರಿಕೆಯಾಗಿದೆ. ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 99.76 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.99 ರೂಪಾಯಿಗೆ ಏರಿಕೆ ಆಗಿದೆ.

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 105.65 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 95.98 ರೂಪಾಯಿಗೆ ಏರಿಕೆ ಆಗಿದೆ. 

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ
ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

ದರ ನಿಗದಿ ಹೇಗೆ?
ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel