ಸಾಂದರ್ಭಿಕ ಚಿತ್ರ 
ವಾಣಿಜ್ಯ

10,000 ಕೋಟಿ ರೂ. ದಾಟಿದ ತಿಂಗಳ ಎಸ್ ಐ ಪಿ ಹೂಡಿಕೆ: ಮ್ಯೂಚುವಲ್ ಫಂಡ್ ಹೂಡಿಕೆಯತ್ತ ನಾಗರಿಕರ ಒಲವು

ಹೆಚ್ಚಿನ ಬ್ಯಾಂಕ್ ಗ್ರಾಹಕರು ಸಾಂಪ್ರದಾಯಿಕ ಹೂಡಿಕೆ ವಿಧಾನಗಳಾದ ಎಫ್ ಡಿ, ಚಿನ್ನ, ರಿಯಲ್ ಎಸ್ಟೇಟ್ ಗಳಿಗಿಂತ ಹೆಚ್ಚಾಗಿ ಮ್ಯೂಚುವಲ್ ಫಂಡ್ ಗಳಲ್ಲಿ ಹಣ ಹೂಡಲು ಬಯಸುತ್ತಿದ್ದಾರೆ.

ನವದೆಹಲಿ: ಹೂಡಿಕೆ ಮಾರುಕಟ್ಟೆಯಲ್ಲಿ ಚಿಲ್ಲರೆ(ರೀಟೇಲ್) ಹೂಡಿಕೆದಾರರಲ್ಲಿ ಹೆಚ್ಚಿನ ಮಂದಿ ಮ್ಯೂಚುವಲ್ ಫಂಡ್ ಗಳತ್ತ ಹೆಚ್ಚಿನ ಒಲವು ತೋರುತ್ತಿರುವುದಾಗಿ ನೂತನ ವರದಿ ಬಹಿರಂಗಪಡಿಸಿದೆ. 

ಅಸೋಸಿಯೇಷನ್ ಆಫ್ ಮ್ಯೂಚುವಲ್ ಫಂಡ್ಸ್ ಇನ್ ಇಂಡಿಯಾ ಬಿಡುಗಡೆಗೊಳಿಸಿರುವ ವರದಿಯಲ್ಲಿ ಸೆಪ್ಟೆಂಬರ್ ತಿಂಗಳೊಂದರಲ್ಲಿ ಎಸ್ ಐ ಪಿ(Systematic Investment Plan) ಮೂಲಕ ಮ್ಯೂಚುವಲ್ ಫಂಡ್ ಗಳಲ್ಲಿ ಹೂಡಿಕೆಯಾಗಿರುವ ಹಣ 10,000 ಕೋಟಿ ರೂ. ದಾಟಿದೆ ಎಂದು ಹೇಳಲಾಗಿದೆ. 

ತಿಂಗಳ ಎಸ್ ಐ ಪಿ ಸಂಗ್ರಹ 10,351 ಕೋಟಿ ರೂ. ದಾಖಲಾಗಿದ್ದು, 10,000 ಕೋಟಿ ದಾಟಿದ್ದು ಇದೇ ಮೊದಲು ಎನ್ನಲಾಗಿದೆ. ಸೆಪ್ಟೆಂಬರ್ ತಿಂಗಳೊಂದರಲ್ಲೇ 26.80 ಲಕ್ಷ ಮಂದಿ ಎಸ್ ಐ ಪಿ ಹೂಡಿಕೆಗಾಗಿ ಹೆಸರು ನೊಂದಾಯಿಸಿದ್ದಾರೆ ಎನ್ನುವುದು ವಿಶೇಷ.

ಹೆಚ್ಚಿನ ಬ್ಯಾಂಕ್ ಗ್ರಾಹಕರು ಸಾಂಪ್ರದಾಯಿಕ ಹೂಡಿಕೆ ವಿಧಾನಗಳಾದ ಎಫ್ ಡಿ, ಚಿನ್ನ, ರಿಯಲ್ ಎಸ್ಟೇಟ್ ಗಳಿಗಿಂತ ಹೆಚ್ಚಾಗಿ ಮ್ಯೂಚುವಲ್ ಫಂಡ್ ಗಳಲ್ಲಿ ಹಣ ಹೂಡಲು ಬಯಸುತ್ತಿದ್ದಾರೆ ಎನ್ನುವ ಸಂಗತಿಯನ್ನು ವರದಿ ಹೊರಹಾಕಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್