ದೇಶದಲ್ಲಿ ಮತ್ತೆ ತೈಲೋತ್ಪನ್ನಗಳ ಬೆಲೆ ಏರಿಕೆ: ಪೆಟ್ರೋಲ್ 36 ಪೈಸೆ, ಡೀಸೆಲ್ 38 ಪೈಸೆ ಹೆಚ್ಚಳ!
ದೇಶಾದ್ಯಂತ ಪೆಟ್ರೋಲ್, ಡೀಸೆಲ್ ಬೆಲೆಗಳಲ್ಲಿ ಮತ್ತೆ ಏರಿಕೆಯಾಗಿದ್ದು, ಪೆಟ್ರೋಲ್ 34 ರಿಂದ 36 ಪೈಸೆಗಳಷ್ಟು ಮತ್ತು ಡೀಸೆಲ್ ದರ 35 ರಿಂದ 38 ಪೈಸೆ ಏರಿಕೆಯಾಗಿದೆ.
ನವದೆಹಲಿ: ದೇಶಾದ್ಯಂತ ಪೆಟ್ರೋಲ್, ಡೀಸೆಲ್ ಬೆಲೆಗಳಲ್ಲಿ ಮತ್ತೆ ಏರಿಕೆಯಾಗಿದ್ದು, ಪೆಟ್ರೋಲ್ 34 ರಿಂದ 36 ಪೈಸೆಗಳಷ್ಟು ಮತ್ತು ಡೀಸೆಲ್ ದರ 35 ರಿಂದ 38 ಪೈಸೆ ಏರಿಕೆಯಾಗಿದೆ.
ಸರ್ಕಾರಿ ಸ್ವಾಮ್ಯದ ತೈಲ ಸಂಸ್ಕರಣಾ ಕಂಪನಿಗಳು (ಒಎಂಸಿ) ಗುರುವಾರ ದೇಶಾದ್ಯಂತ ಇಂಧನ ದರವನ್ನು ಮತ್ತೊಮ್ಮೆ ಹೆಚ್ಚಿಸಿದ್ದು, ಈ ಮೂಲಕ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಹೊಸ ದಾಖಲೆಯ ಗರಿಷ್ಠ ಮಟ್ಟಕ್ಕೆ ತಲುಪಿದೆ.
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 108.40ಕ್ಕೆ ಏರಿಕೆಯಾಗಿದ್ದು, ಪ್ರತೀ ಲೀಟರ್ ಡೀಸೆಲ್ ದರ 99.22 ರೂ ಗೆ ಏರಿಕೆಯಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 104.79 ಕ್ಕೆ ಏರಿಕೆಯಾಗಿದ್ದು, ಪ್ರತೀ ಲೀಟರ್ ಡೀಸೆಲ್ ದರ 93.53 ರೂ ಗೆ ಏರಿಕೆಯಾಗಿದೆ.
ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 110.71ಕ್ಕೆ ಏರಿಕೆಯಾಗಿದ್ದು, ಪ್ರತೀ ಲೀಟರ್ ಡೀಸೆಲ್ ದರ 101.37 ರೂ ಗೆ ಏರಿಕೆಯಾಗಿದೆ. ಕೋಲ್ಕತಾದಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 105.39ಕ್ಕೆ ಏರಿಕೆಯಾಗಿದ್ದು, ಪ್ರತೀ ಲೀಟರ್ ಡೀಸೆಲ್ ದರ 96.59 ರೂ ಗೆ ಏರಿಕೆಯಾಗಿದೆ. ಚೆನ್ನೈನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 102.06ಕ್ಕೆ ಏರಿಕೆಯಾಗಿದ್ದು, ಪ್ರತೀ ಲೀಟರ್ ಡೀಸೆಲ್ ದರ 97.89 ರೂ ಗೆ ಏರಿಕೆಯಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.