ಸಂಗ್ರಹ ಚಿತ್ರ 
ವಾಣಿಜ್ಯ

ಜಾಗತಿಕ ಹಸಿವು ಸೂಚ್ಯಂಕದಲ್ಲಿ ಭಾರತದ ಸ್ಥಾನ ಕುಸಿತ 'ಆಘಾತಕಾರಿ'; ಬಳಸಿದ ವಿಧಾನ ಅವೈಜ್ಞಾನಿಕ ಎಂದ ಕೇಂದ್ರ ಸರ್ಕಾರ

ಜಾಗತಿಕ ಹಸಿವು ಸೂಚ್ಯಂಕದಲ್ಲಿ ಭಾರತದ ಸ್ಥಾನ ಕುಸಿತ ಆಘಾತಕಾರಿ. ಆದರೆ ಇದಕ್ಕೆ ಬಳಸಿರುವ ವಿಧಾನ ಅವೈಜ್ಞಾನಿಕ ಎಂದು ಕೇಂದ್ರ ಸರ್ಕಾರ ಹೇಳಿದೆ. 

ನವದೆಹಲಿ: ಜಾಗತಿಕ ಹಸಿವು ಸೂಚ್ಯಂಕದಲ್ಲಿ ಭಾರತದ ಸ್ಥಾನ ಕುಸಿತ ಆಘಾತಕಾರಿ. ಆದರೆ ಇದಕ್ಕೆ ಬಳಸಿರುವ ವಿಧಾನ ಅವೈಜ್ಞಾನಿಕ ಎಂದು ಕೇಂದ್ರ ಸರ್ಕಾರ ಹೇಳಿದೆ. 

ವಾರ್ಷಿಕ ವರದಿ ತಯಾರಿಸಲು ಮತ್ತು ಲೆಕ್ಕಿಸಲು ಬಳಸಿರುವ ವಿಧಾನ ಅವೈಜ್ಞಾನಿಕವಾಗಿದೆ. ಇದು ಎಫ್​ಎಒ (ಯುಎನ್​ನ ಆಹಾರ ಮತ್ತು ಕೃಷಿ ಸಂಸ್ಥೆ) ವರದಿ ತಯಾರಿಸಲು ಬಳಸಿರುವ ವಿಧಾನ ಅವೈಜ್ಞಾನಿಕವಾಗಿದೆ. ಅವರು ನಾಲ್ಕು ಪ್ರಶ್ನೆಯ ಒಪಿನಿಯನ್ ಪೋಲ್ ಮೂಲಕ ಈ ವರದಿ ತಯಾರಿಸಿದ್ದಾರೆ ಎಂದು ಕೇಂದ್ರ ಸರ್ಕಾರ ಹೇಳಿದೆ. 

ಈ ವಿಧಾನದಲ್ಲಿ ಅಪೌಷ್ಠಿಕತೆಯನ್ನು, ಆಹಾರ ಪದಾರ್ಥಗಳ ಲಭ್ಯತೆಯನ್ನು ಅಳೆಯುವುದು ಅಸಾಧ್ಯ. ವೈಜ್ಞಾನಿಕವಾಗಿ ಅಪೌಷ್ಠಿಕತೆ ಮಟ್ಟ ಅಳತೆ ಮಾಡಲು ವ್ಯಕ್ತಿಯ ತೂಕ ಮತ್ತು ಎತ್ತರ ಇತ್ಯಾದಿ ವಿಧಾನ ಅಗತ್ಯ ಇರುತ್ತದೆ. ಟೆಲಿಫೋನ್ ಮೂಲಕ ನಡೆಸಿರುವ ಈ ಗಣತಿ ಸರಿಯಲ್ಲ ಎಂದು ಹೇಳಲಾಗಿದೆ.

116 ದೇಶಗಳ ಜಾಗತಿಕ ಹಸಿವು ಸೂಚ್ಯಂಕ(ಜಿಎಚ್‌ಐ) 2020ರಲ್ಲಿ 94ನೇ ಸ್ಥಾನದಲ್ಲಿದ್ದ ಭಾರತವು 2021ರಲ್ಲಿ 101ನೇ ಸ್ಥಾನಕ್ಕೆ ಕುಸಿದಿದೆ. ಇದು ಈಗ ತನ್ನ ನೆರೆ ರಾಷ್ಟ್ರಗಳಾದ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ನೇಪಾಳಕ್ಕಿಂತ ಹಿಂದಿದೆ.

ಕೋವಿಡ್ ಸಂಕಷ್ಟದ ಸಮಯದಲ್ಲಿ ಸಂಪೂರ್ಣ ಜನಸಂಖ್ಯೆಗೆ ಆಹಾರ ಭದ್ರತೆ ಒದಗಿಸಲು ಸರ್ಕಾರ ಕೈಗೊಂಡಿರುವ ಪ್ರಯತ್ನಗಳನ್ನು ಈ ವರದಿ ಸಂಪೂರ್ಣವಾಗಿ ಕಡೆಗಣಿಸಿದೆ ಎಂದು ಹೇಳಲಾಗಿದೆ. ಈ ಗಣತಿಯಲ್ಲಿ ಕೇಳಿದ ಪ್ರಶ್ನಾವಳಿಯಲ್ಲಿ ಆಹಾರ ಸಹಾಯವನ್ನು ಜನರು ಸರ್ಕಾರದಿಂದ ಅಥವಾ ಯಾವುದೇ ಮೂಲಗಳಿಂದ ಪಡೆದುಕೊಂಡಿದ್ದಾರೆಯೇ ಎಂಬ ಬಗ್ಗೆ ಕೇಳಿಲ್ಲ. ಈ ಪೋಲ್ ನಡೆಸಿರುವವರು ಭಾರತ ಹಾಗೂ ಇತರ ದೇಶಗಳ ಬಗ್ಗೆ ಅನುಮಾನಿತರಾಗೇ ಇದ್ದಾರೆ ಎಂದು ತಿಳಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

T20 World Cup 2026: ಅಭಿಷೇಕ್, ಹಾರ್ದಿಕ್ ಅಬ್ಬರ; ಜಿಂಬಾಬ್ವೆ ವಿರುದ್ಧ ಟೀಂ ಇಂಡಿಯಾ ಭರ್ಜರಿ ಗೆಲುವು

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT