ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆ ಗಡುವು ಡಿಸೆಂಬರ್ 31 ರವರೆಗೆ ವಿಸ್ತರಣೆ
2020-21ನೇ ಸಾಲಿನ ಹಣಕಾಸು ವರ್ಷದ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸುವ ಗಡುವನ್ನು ಕೇಂದ್ರ ಸರ್ಕಾರ ಡಿಸೆಂಬರ್ 31 ರವರೆಗೆ ವಿಸ್ತರಿಸಿದೆ.
ನವದೆಹಲಿ: 2020-21ನೇ ಸಾಲಿನ ಹಣಕಾಸು ವರ್ಷದ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸುವ ಗಡುವನ್ನು ಕೇಂದ್ರ ಸರ್ಕಾರ ಡಿಸೆಂಬರ್ 31 ರವರೆಗೆ ವಿಸ್ತರಿಸಿದೆ.
ಈ ಹಿಂದೆ ಐಟಿ ರಿಟರ್ನ್ಸ್ ಸಲ್ಲಿಕೆಗೆ ಸೆಪ್ಟೆಂಬರ್ 30 ಕೊನೆಯ ದಿನವಾಗಿತ್ತು. ಈಗ ಅದನ್ನು ಡಿಸೆಂಬರ್ 31 ರವರೆಗೆ ವಿಸ್ತರಿಸಲಾಗಿದೆ.
"ತೆರಿಗೆದಾರರ ಸಂಕಷ್ಟಗಳನ್ನು ಪರಿಗಣಿಸಿ ಕೇಂದ್ರೀಯ ನೇರ ತೆರಿಗೆಗಳ ಮಂಡಳಿ(CBDT) 2021-22 ಮೌಲ್ಯಮಾಪನ ವರ್ಷಕ್ಕೆ ಆದಾಯ ತೆರಿಗೆ ರಿಟರ್ನ್ಸ್ ಮತ್ತು ವಿವಿಧ ಲೆಕ್ಕಪರಿಶೋಧನೆಯ ವರದಿಗಳನ್ನು ಸಲ್ಲಿಸುವ ಅಂತಿಮ ದಿನಾಂಕಗಳನ್ನು ಮತ್ತಷ್ಟು ವಿಸ್ತರಿಸಲು ನಿರ್ಧರಿಸಿದೆ "ಎಂದು ಹಣಕಾಸು ಸಚಿವಾಲಯ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ಆದಾಯ ತೆರಿಗೆ ಇಲಾಖೆ 1961 ರ ಕಾಯ್ದೆ ಅಡಿಯಲ್ಲಿ( AY 2021-22) ಆದಾಯ ತೆರಿಗೆ ರಿಟರ್ನ್ಸ್ (ITRs) ಮತ್ತು ಆಡಿಟ್ ವರದಿಗಳನ್ನು ಸಲ್ಲಿಸುವ ದಿನಾಂಕ ವಿಸ್ತರಿಸಲಾಗಿದೆ. ತೆರಿಗೆದಾರರು ಸೂಚಿಸಿದ ಸಮಸ್ಯೆಗಳನ್ನು ಪರಿಗಣಿಸಿ, CBDT ಯು AY 21-22 ಗೆ ITR ಗಳು ಮತ್ತು ಆಡಿಟ್ ವರದಿಗಳನ್ನು ಸಲ್ಲಿಸಲು ಅಂತಿಮ ದಿನಾಂಕಗಳನ್ನು ವಿಸ್ತರಿಸುತ್ತದೆ ಎಂದು ಆದಾಯ ತೆರಿಗೆ ಇಲಾಖೆ ತಿಳಿಸಿದೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.