ಸಾಂದರ್ಭಿಕ ಚಿತ್ರ 
ವಾಣಿಜ್ಯ

ಜಿಎಸ್ ಟಿ ಆದಾಯ ಶೇ. 11 ರಷ್ಟು ಹೆಚ್ಚಳ, ನವೆಂಬರ್ ನಲ್ಲಿ 1.46 ಲಕ್ಷ ಕೋಟಿ ರೂ. ಸಂಗ್ರಹ

ಕಳೆದ ನವೆಂಬರ್ ತಿಂಗಳಲ್ಲಿ ಸರಕು ಮತ್ತು ಸೇವಾ ತೆರಿಗೆ(ಜಿಎಸ್ ಟಿ) ಸಂಗ್ರಹದಲ್ಲಿ ಶೇಕಡಾ 11 ರಷ್ಟು ಏರಿಕೆಯಾಗಿದ್ದು, 1.46 ಲಕ್ಷ ಕೋಟಿ ರೂಪಾಯಿ ಜಿಎಸ್ ಟಿ ಸಂಗ್ರಹವಾಗಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯ ಗುರುವಾರ ತಿಳಿಸಿದೆ.

ನವದೆಹಲಿ: ಕಳೆದ ನವೆಂಬರ್ ತಿಂಗಳಲ್ಲಿ ಸರಕು ಮತ್ತು ಸೇವಾ ತೆರಿಗೆ(ಜಿಎಸ್ ಟಿ) ಸಂಗ್ರಹದಲ್ಲಿ ಶೇಕಡಾ 11 ರಷ್ಟು ಏರಿಕೆಯಾಗಿದ್ದು, 1.46 ಲಕ್ಷ ಕೋಟಿ ರೂಪಾಯಿ ಜಿಎಸ್ ಟಿ ಸಂಗ್ರಹವಾಗಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯ ಗುರುವಾರ ತಿಳಿಸಿದೆ.

ತೆರಿಗೆ ಸಂಗ್ರಹ ಹೆಚ್ಚಳ ಪ್ರವೃತ್ತಿ ಮುಂದುವರೆದಿದ್ದು, ಸತತ ಒಂಬತ್ತನೇ ತಿಂಗಳು ಜಿಎಸ್ ಟಿ ಸಂಗ್ರಹ 1.40 ಲಕ್ಷ ಕೋಟಿ ರೂಪಾಯಿಗಿಂತ ಹೆಚ್ಚಾಗಿದೆ.

ಕಳೆದ ನವೆಂಬರ್ ನಲ್ಲಿ 1,45,867 ಕೋಟಿ ರೂ. ಜಿಎಸ್​ಟಿ ಸಂಗ್ರಹವಾಗಿದೆ. ಇದರಲ್ಲಿ ಕೇಂದ್ರ ಜಿಎಸ್​ಟಿ 25,681 ಕೋಟಿ ರೂ. ಹಾಗೂ ರಾಜ್ಯ ಜಿಎಸ್​ಟಿ 32,651 ಕೋಟಿ ರೂ. ಸಂಗ್ರಹವಾಗಿದೆ.

ನವೆಂಬರ್ 2022 ರಲ್ಲಿ ಸಂಗ್ರಹಿಸಲಾದ ಒಟ್ಟು ಜಿಎಸ್​​ಟಿ ಆದಾಯ ಕಳೆದ ವರ್ಷದ ನವೆಂಬರ್ ಗಿಂತ ಶೇ. 11 ರಷ್ಟು ಹೆಚ್ಚಳವಾಗಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯ ತಿಳಿಸಿದೆ.

ಈ ಹಿಂದೆ ಏಪ್ರಿಲ್‌ನಲ್ಲಿ ದಾಖಲೆಯ ಗರಿಷ್ಠ 1.68 ಲಕ್ಷ ಕೋಟಿ ರೂ. ಜಿಎಸ್​ಟಿ ಸಂಗ್ರಹವಾಗಿತ್ತು. ಅದು ಬಿಟ್ಟರೆ ಕಳೆದ ಅಕ್ಟೋಬರ್​ನಲ್ಲಿ ಆಗಿರುವ 1.51 ಲಕ್ಷ ಕೋಟಿ ರೂ. ಸಂಗ್ರಹ ಎರಡನೇ ಅತಿಹೆಚ್ಚಿನ ಸಂಗ್ರಹವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

‘ಕಾನೂನು ಸುವ್ಯವಸ್ಥೆಗೆ ಗಂಭೀರ ಅಪಾಯವಿದೆ’: ಸಿಜೆಪಿ ಪ್ರತಿಭಟನೆಗೆ ಕೆಲವೇ ಗಂಟೆ ಮೊದಲು ರಾಜ್ಯಗಳಿಗೆ ಪತ್ರ ಬರೆದು MHA ಹೇಳಿದ್ದೇನು?

ಬಾಕಿ ಸಾಲ ವಸೂಲಿಗೆ 'ಗೃಹಲಕ್ಷ್ಮಿ' ಯೋಜನೆಯ ಹಣ ಕಡಿತಗೊಳಿಸದಂತೆ ಬ್ಯಾಂಕುಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಸರ್ಕಾರ!

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ನಿರಾಳ; ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸುವ ನಿರ್ಧಾರ ರದ್ದು!

'ನ್ಯಾಯಾಂಗ ತನಿಖೆಗೆ ಒಪ್ಪಿಸಿ, ₹1 ಕೋಟಿ ಪರಿಹಾರ ನೀಡಿ': ಹನೂರು ಶೂಟೌಟ್ ಪ್ರಕರಣದ ಮಹಿಮಾ ದಾಸ್ ಸೇರಿ ಸಂತ್ರಸ್ತರ ಆಗ್ರಹ