ಅನಂತ್ ಅಂಬಾನಿ - ರಾಧಿಕಾ ಮರ್ಚೆಂಟ್ 
ವಾಣಿಜ್ಯ

ದೇವಸ್ಥಾನದಲ್ಲಿ ರಾಧಿಕಾ ಮರ್ಚೆಂಟ್ ಜತೆ ಅನಂತ್ ಅಂಬಾನಿ ನಿಶ್ಚಿತಾರ್ಥ

ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿಯವರ ಕಿರಿಯ ಪುತ್ರ ಅನಂತ್ ಅಂಬಾನಿ ಅವರು, ಕೈಗಾರಿಕೋದ್ಯಮಿ ವಿರೇನ್ ಮರ್ಚೆಂಟ್ ಅವರ ಪುತ್ರಿ ರಾಧಿಕಾ ಮರ್ಚೆಂಟ್ ಅವರನ್ನು ವಿವಾಹವಾಗಲಿದ್ದಾರೆ...

ನವದೆಹಲಿ: ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿಯವರ ಕಿರಿಯ ಪುತ್ರ ಅನಂತ್ ಅಂಬಾನಿ ಅವರು, ಕೈಗಾರಿಕೋದ್ಯಮಿ ವಿರೇನ್ ಮರ್ಚೆಂಟ್ ಅವರ ಪುತ್ರಿ ರಾಧಿಕಾ ಮರ್ಚೆಂಟ್ ಅವರನ್ನು ವಿವಾಹವಾಗಲಿದ್ದಾರೆ ಎಂದು ಬಿಲಿಯನೇರ್ ಕುಟುಂಬ ಗುರುವಾರ ಪ್ರಕಟಿಸಿದೆ.

ಶೈಲಾ ಮತ್ತು ವಿರೇನ್ ಮರ್ಚೆಂಟ್ ಅವರ ಪುತ್ರಿ ರಾಧಿಕಾ ಅವರೊಂದಿಗೆ ಅನಂತ್ ಅಂಬಾನಿ ಅವರು ಇಂದು ರಾಜಸ್ಥಾನದ ನಾಥದ್ವಾರದಲ್ಲಿರುವ ಶ್ರೀನಾಥ್‌ಜಿ ದೇವಸ್ಥಾನದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. 

ಎರಡೂ ಕುಟುಂಬಗಳ ಸದಸ್ಯರು ಮತ್ತು ಸ್ನೇಹಿತರ ಸಮ್ಮುಖದಲ್ಲಿ ರಾಧಿಕಾ - ಅನಂತ್ ನಿಶ್ಚಿತಾರ್ಥ ನೆರವೇರಿಸಲಾಯಿತು.

ನಿಶ್ಚಿತಾರ್ಥದ ನಂತರ ಯುವ ದಂಪತಿಗಳು ಭಗವಾನ್ ಶ್ರೀನಾಥಜಿಯ ಆಶೀರ್ವಾದವನ್ನು ಪಡೆದರು ಎಂದು ಅಂಬಾನಿ ಕುಟುಂಬ ಹೊರಡಿಸಿದ ಪ್ರಕಟಣೆಯಲ್ಲಿ ತಿಳಿಸಿದೆ.

ಆದರೆ ಮದುವೆ ಯಾವಾಗ ನಡೆಯಲಿದೆ ಎಂಬುದನ್ನು ತಿಳಿಸಿಲ್ಲ. ಇವರಿಬ್ಬರು ಕೆಲ ದಿನಗಳಿಂದ ಸ್ನೇಹಿತರಾಗಿದ್ದರು.

ಈ ನಿಶ್ಚಿತಾರ್ಥ ಸಮಾರಂಭದಲ್ಲಿ ಅನಂತ ಅವರು ನೀಲಿ ಬಣ್ಣದ ಸಂಪ್ರದಾಯಿಕ ಕುರ್ತಾ ಧರಿಸಿ ಮಿಂಚಿದರೆ ಇತ್ತ ರಾಧಿಕಾ ಮರ್ಚೆಂಟ್ ಅವರು ಪೀಚ್ ಬಣ್ಣದ ಲೆಹೆಂಗಾ ಧರಿಸಿದ್ದರು. 

ಮುಕೇಶ್ ಅಂಬಾನಿ ಮತ್ತು ಅವರ ಪತ್ನಿ ನೀತಾ ಈ ವರ್ಷದ ಜೂನ್‌ನಲ್ಲಿ ಮುಂಬೈನ ಜಿಯೋ ವರ್ಲ್ಡ್ ಸೆಂಟರ್‌ನಲ್ಲಿ ರಾಧಿಕಾಗಾಗಿ ಅದ್ದೂರಿ 'ಅರಂಗೇಟ್ರಂ' ಸಮಾರಂಭವನ್ನು ಆಯೋಜಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel