ವಾಣಿಜ್ಯ

ವಾಣಿಜ್ಯ ಬಳಕೆ ಎಲ್ ಪಿಜಿ ಸಿಲಿಂಡರ್ ಬೆಲೆ 198 ರೂಪಾಯಿ ಇಳಿಕೆ

Lingaraj Badiger

ನವದೆಹಲಿ: ಹೋಟೆಲ್‌ಗಳು, ರೆಸ್ಟೊರೆಂಟ್‌ಗಳು ಮತ್ತು ಇತರ ವ್ಯಾಪಾರ ಸಂಸ್ಥೆಗಳು ಬಳಸುವ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು ಶುಕ್ರವಾರ 198 ರೂಪಾಯಿ ಕಡಿತಗೊಳಿಸಲಾಗಿದೆ.

 ಈ ಬೆಲೆ ಇಳಿಕೆಯೊಂದಿಗೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 19 ಕೆಜಿ ತೂಕದ ವಾಣಿಜ್ಯ ಬಳಕೆಯ ದ್ರವೀಕೃತ ಪೆಟ್ರೋಲಿಯಂ ಅನಿಲ(ಎಲ್‌ಪಿಜಿ) ಸಿಲಿಂಡರ್ ಬೆಲೆ 2021 ರೂಪಾಯಿಗೆ ಇಳಿದಿದೆ.

ಕಳೆದ ಒಂದು ತಿಂಗಳ ಅವಧಿಯಲ್ಲಿ ಇದು ಎರಡನೇ ಬಾರಿ ವಾಣಿಜ್ಯ ಬಳಕೆ ಎಲ್ ಪಿಜಿ ಸಿಲಿಂಡರ್ ಬೆಲೆ ಇಳಿಕೆಯಾಗಿದೆ. ಜೂನ್‌ನಲ್ಲಿ 19 ಕೆಜಿ ಸಿಲಿಂಡರ್ ಗೆ 135 ರೂಪಾಯಿ ಕಡಿಮೆಯಾಗಿತ್ತು. ಆದಾಗ್ಯೂ, ಏವಿಯೇಷನ್ ಟರ್ಬೈನ್ ಇಂಧನ (ಎಟಿಎಫ್) ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.

ಎಲ್‌ಪಿಜಿ ಸಿಲಿಂಡರ್ ದರವನ್ನು ಭಾರತದ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಅನ್ವಯವಾಗುವಂತೆ ಪ್ರತಿ ತಿಂಗಳು ಪರಿಷ್ಕರಿಸಲಾಗುತ್ತದೆ.

SCROLL FOR NEXT