ಸಾಂದರ್ಭಿಕ ಚಿತ್ರ 
ವಾಣಿಜ್ಯ

ಹೋಟೆಲ್, ರೆಸ್ಟೋರೆಂಟ್ ಗಳು ಬಿಲ್ ನಲ್ಲಿ ಸೇವಾ ಶುಲ್ಕ ಸೇರಿಸುವಂತಿಲ್ಲ: ಸಿಸಿಪಿಎ ಆದೇಶ

ಹೋಟೆಲ್, ರೆಸ್ಟೋರೆಂಟ್ ಗಳು ಬಿಲ್ ನಲ್ಲಿ ಸ್ವಯಂಚಾಲಿತವಾಗಿ ಸೇವಾ ಶುಲ್ಕ ವಿಧಿಸದಂತೆ ಕೇಂದ್ರೀಯ ಗ್ರಾಹಕರ ರಕ್ಷಣಾ ಪ್ರಾಧಿಕಾರ ಸೋಮವಾರ ಆದೇಶ ಹೊರಡಿಸಿದೆ. ಒಂದು ವೇಳೆ ಈ ಆದೇಶ ಉಲ್ಲಂಘನೆಯಾದಲ್ಲಿ ಗ್ರಾಹಕರು ದೂರು ದಾಖಲಿಸಲು ಅವಕಾಶ ನೀಡಿದೆ.

ನವದೆಹಲಿ: ಹೋಟೆಲ್, ರೆಸ್ಟೋರೆಂಟ್ ಗಳು ಬಿಲ್ ನಲ್ಲಿ ಸ್ವಯಂಚಾಲಿತವಾಗಿ ಸೇವಾ ಶುಲ್ಕ ವಿಧಿಸದಂತೆ ಕೇಂದ್ರೀಯ ಗ್ರಾಹಕರ ರಕ್ಷಣಾ ಪ್ರಾಧಿಕಾರ ಸೋಮವಾರ ಆದೇಶ ಹೊರಡಿಸಿದೆ. ಒಂದು ವೇಳೆ ಈ ಆದೇಶ ಉಲ್ಲಂಘನೆಯಾದಲ್ಲಿ ಗ್ರಾಹಕರು ದೂರು ದಾಖಲಿಸಲು ಅವಕಾಶ ನೀಡಿದೆ.

ದೂರುಗಳು ಹೆಚ್ಚುತ್ತಿರುವ ನಡುವೆ,  ಅನ್ಯಾಯಯುತ ವ್ಯಾಪಾರ ಪದ್ಧತಿ ತಡೆಗೆ ಪ್ರಾಧಿಕಾರ ಮಾರ್ಗಸೂಚಿಗಳನ್ನು ಹೊರಡಿಸಿದೆ. ಈ ಮಾರ್ಗಸೂಚಿಗಳ ಪ್ರಕಾರ, ಹೋಟೆಲ್, ರೆಸ್ಟೋರೆಂಟ್ ಗಳು ಸ್ವಯಂ ಚಾಲಿತವಾಗಿ ಸೇವಾ ಶುಲ್ಕ ವಿಧಿಸುವಂತಿಲ್ಲ ಅಥವಾ ಬಿಲ್ ನಲ್ಲಿಯೇ ಕಡಿತ ಮಾಡುವಂತಿಲ್ಲ. ಇತರ ಯಾವುದೇ ಹೆಸರಿನಲ್ಲಿ ಸೇವಾ ಶುಲ್ಕವನ್ನು ವಸೂಲಿ ಮಾಡಬಾರದು ಎಂದು ಹೇಳಲಾಗಿದೆ.

ಹೋಟೆಲ್, ರೆಸ್ಟೋರೆಂಟ್ ಗಳು ಸೇವಾ ಶುಲ್ಕ ನೀಡುವಂತೆ ಗ್ರಾಹಕರನ್ನು ಒತ್ತಾಯಿಸುವಂತಿಲ್ಲ. ಸ್ವಯಂ ಪ್ರೇರಿತರಾಗಿ ಗ್ರಾಹಕರು ಸೇವಾ ಶುಲ್ಕ ನೀಡಬಹುದು, ಅದು ಅವರಿಗೆ ಬಿಟ್ಟ ಆಯ್ಕೆಯಾಗಿದೆ ಎಂದು ಗ್ರಾಹಕರಿಗೆ ಸ್ಪಷ್ಟ ಮಾಹಿತಿ ನೀಡಲಾಗಿದೆ. ಸೇವಾ ಶುಲ್ಕ ಸಂಗ್ರಹ ಆಧಾರದ ಮೇಲೆ ಗ್ರಾಹಕರ ಪ್ರವೇಶಕ್ಕೆ ಯಾವುದೇ ನಿರ್ಬಂಧ ವಿಧಿಸುವಂತಿಲ್ಲ ಅಥವಾ ವಿನಾಯಿತಿ ನೀಡುವಂತಿಲ್ಲ ಎಂದು ತಿಳಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕದನ ವಿರಾಮ ಅಂತ್ಯ; ಹೊಸ ಮಾತುಕತೆಗೆ ಡೊನಾಲ್ಡ್ ಟ್ರಂಪ್ ಒಪ್ಪಿಗೆ – 'ಶರಣಾಗುವುದಿಲ್ಲ' ಎಂದ ಇರಾನ್

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!