ವಾಣಿಜ್ಯ

ಬಿಲ್ ಗೇಟ್ಸ್ ಹಿಂದಿಕ್ಕಿದ ಗೌತಮ್ ಅದಾನಿ ವಿಶ್ವದ ನಾಲ್ಕನೇ ಶ್ರೀಮಂತ

Lingaraj Badiger

ನವದೆಹಲಿ: ಅದಾನಿ ಗ್ರೂಪ್‌ ಅಧ್ಯಕ್ಷ ಗೌತಮ್ ಅದಾನಿ ಅವರು ವಿಶ್ವದ ನಾಲ್ಕನೇ ಶ್ರೀಮಂತ ವ್ಯಕ್ತಿಯಾಗಿ ಹೊರಹೊಮ್ಮಿದ್ದಾರೆ.

ಗುರುವಾರ 115.5 ಶತಕೋಟಿ ಡಾಲರ್‌ಗಳ ಅಂದಾಜು ಆಸ್ತಿಯೊಂದಿಗೆ ಮೈಕ್ರೋಸಾಫ್ಟ್ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ಅವರನ್ನು ಗೌತಮ್ ಅದಾನಿ ಅವರು ಹಿಂದಿಕ್ಕಿ ವಿಶ್ವದ ನಾಲ್ಕನೇ ಶ್ರೀಮಂತ ವ್ಯಕ್ತಿ ಸ್ಥಾನ ಪಡೆದುಕೊಂಡಿದ್ದಾರೆ.

ಫೋರ್ಬ್ಸ್‌ನ ರಿಯಲ್-ಟೈಮ್ ಬಿಲಿಯನೇರ್‌ಗಳ ಪಟ್ಟಿಯ ಪ್ರಕಾರ, ಬಿಲ್ ಗೇಟ್ಸ್ ಅವರ ನಿವ್ವಳ ಮೌಲ್ಯವು $104.6 ಶತಕೋಟಿಯಷ್ಟಿದೆ. ಬಿಲ್ ಗೇಟ್ಸ್ ತನ್ನ ಸಂಪತ್ತಿನಿಂದ 20 ಶತಕೋಟಿ ಡಾಲರ್ ಅನ್ನು ತನ್ನ ಲಾಭರಹಿತ ಸಂಸ್ಥೆಗೆ ದೇಣಿಗೆ ನೀಡುವುದಾಗಿ ಘೋಷಿಸಿದ ನಂತರ ಶ್ರೇಯಾಂಕದಲ್ಲಿ ಕುಸಿತ ಕಂಡಿದ್ದಾರೆ.

ರಿಲಯನ್ಸ್ ಇಂಡಸ್ಟ್ರೀಸ್ ಚೇರ್ಮನ್ ಮುಖೇಶ್ ಅಂಬಾನಿ ಜಾಗತಿಕ ಶ್ರೀಮಂತ ಶ್ರೇಯಾಂಕದಲ್ಲಿ 10 ನೇ ಸ್ಥಾನಕ್ಕೆ ಇಳಿಯುವುದರೊಂದಿಗೆ ಅವರು ಈಗ ಏಷ್ಯಾದ ಅತ್ಯಂತ ಶ್ರೀಮಂತರಾಗಿದ್ದಾರೆ.

ಟೆಸ್ಲಾ ಮುಖ್ಯಸ್ಥ ಎಲೋನ್ ಮಸ್ಕ್ ಅವರ ಒಟ್ಟು ನಿವ್ವಳ ಮೌಲ್ಯ $234.4 ಬಿಲಿಯನ್, ಲೂಯಿಸ್ ವಿಟಾನ್ ಸಿಇಒ ಬರ್ನಾರ್ಡ್ ಅರ್ನಾಲ್ಟ್ ಅವರ ಆಸ್ತಿ ಮೌಲ್ಯ $155.7 ಬಿಲಿಯನ್ ಮತ್ತು ಅಮೆಜಾನ್ ಸಂಸ್ಥಾಪಕ ಜೆಫ್ ಬೆಜೋಸ್ ಅವರು ವಿಶ್ವದ ಶ್ರೀಮಂತರ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ.

SCROLL FOR NEXT