ಪ್ರಾತಿನಿಧಿಕ ಚಿತ್ರ 
ವಾಣಿಜ್ಯ

ಚಿನ್ನ-ಬೆಳ್ಳಿ ಬೆಲೆಯಲ್ಲಿ ಏರಿಕೆ; ಇಂದಿನ ದರ ಎಷ್ಟಿದೆ ನೋಡಿ

ಜಾಗತಿಕ ಮಾರುಕಟ್ಟೆಯಲ್ಲಾಗುವ ಬದಲಾವಣೆಗಳಿಗೆ ಅನುಗುಣವಾಗಿ ಚಿನ್ನ ಮತ್ತು ಬೆಳ್ಳೆ ಬೆಲೆಯಲ್ಲಿ ಏರಿಕೆಯಾಗಿದೆ. ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್ ಪ್ರಕಾರ, ರಾಷ್ಟ್ರ ರಾಜಧಾನಿಯಲ್ಲಿ 10 ಗ್ರಾಂ ಚಿನ್ನಕ್ಕೆ ₹ 255 ಗಳಷ್ಟು ಏರಿಕೆಯಾಗಿ ₹ 51,783 ಕ್ಕೆ ಮಾರಾಟವಾಗುತ್ತಿದೆ.

ನವದೆಹಲಿ: ಜಾಗತಿಕ ಮಾರುಕಟ್ಟೆಯಲ್ಲಾಗುವ ಬದಲಾವಣೆಗಳಿಗೆ ಅನುಗುಣವಾಗಿ ಚಿನ್ನ ಮತ್ತು ಬೆಳ್ಳೆ ಬೆಲೆಯಲ್ಲಿ ಏರಿಕೆಯಾಗಿದೆ. ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್ ಪ್ರಕಾರ, ರಾಷ್ಟ್ರ ರಾಜಧಾನಿಯಲ್ಲಿ 10 ಗ್ರಾಂ ಚಿನ್ನಕ್ಕೆ ₹ 255 ಗಳಷ್ಟು ಏರಿಕೆಯಾಗಿ ₹ 51,783 ಕ್ಕೆ ಮಾರಾಟವಾಗುತ್ತಿದೆ.

ಹಿಂದಿನ ಟ್ರೇಡ್ ಪ್ರಕಾರ 10 ಗ್ರಾಂ ಚಿನ್ನದ ಬೆಲೆಯು ₹ 51,528 ಆಗಿತ್ತು. ಬೆಳ್ಳಿ ಕೂಡ ಏರಿಕೆಯಾಗಿದ್ದು, ಒಂದು ಕೆ.ಜಿಗೆ ₹ 1,610 ಯಷ್ಟು ಏರಿಕೆಯಾಗುವ ಮೂಲಕ ₹ 56,777 ಕ್ಕೆ ಮಾರಾಟವಾಗುತ್ತಿದೆ. ಇದಕ್ಕೂ ಮುನ್ನ ಒಂದು ಕೆ.ಜಿ ಬೆಳ್ಳಿಗೆ ₹ 56,777 ಆಗಿತ್ತು.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಪ್ರತಿ ಔನ್ಸ್ (28.35 ಗ್ರಾಂ) ಚಿನ್ನವು 1,762 ಡಾಲರ್‌ನಲ್ಲಿ ವಹಿವಾಟು ನಡೆಸುತ್ತಿದೆ ಮತ್ತು ಬೆಳ್ಳಿ ಪ್ರತಿ ಔನ್ಸ್‌ಗೆ 20.10 ಡಾಲರ್‌ನಲ್ಲಿ ಸ್ಥಿರವಾಗಿದೆ.

ಅಮೆರಿಕದ ಅರ್ಥ ವ್ಯವಸ್ಥೆಯು ಜೂನ್‌ ತ್ರೈಮಾಸಿಕದಲ್ಲಿ ಶೇಕಡ (–) 0.9ರಷ್ಟು ಕುಸಿದಿದೆ. ಇದರಿಂದಾಗಿ ಸತತ ಎರಡು ತ್ರೈಮಾಸಿಕಗಳಲ್ಲಿ ಅರ್ಥ ವ್ಯವಸ್ಥೆ ಕುಸಿತ ಕಂಡಂತೆ ಆಗಿದೆ. ಅಮೆರಿಕದಲ್ಲಿ ಆರ್ಥಿಕ ಹಿಂಜರಿತ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಚಿನ್ನದ ಬೆಲೆಯಲ್ಲಿ ಏರಿಕೆ ಕಾಣುತ್ತಿದೆ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ನ ಹಿರಿಯ ವಿಶ್ಲೇಷಕ (ಸರಕುಗಳು) ತಪನ್ ಪಟೇಲ್ ಹೇಳಿದ್ದಾರೆ.

ಗುಡ್ ರಿಟರ್ನ್ಸ್ ಪ್ರಕಾರ, ಬೆಂಗಳೂರಿನಲ್ಲಿಂದು 22 ಕ್ಯಾರಟ್‌ನ 10 ಗ್ರಾಂ ಚಿನ್ನದ ₹ 47,250 ಆಗಿದ್ದರೆ, 24 ಕ್ಯಾರಟ್‌ನ 10 ಗ್ರಾಂ ಚಿನ್ನಕ್ಕೆ ₹ 51,540 ನಷ್ಟಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT