ಸಾಂದರ್ಭಿಕ ಚಿತ್ರ 
ವಾಣಿಜ್ಯ

ಈ ವರ್ಷ ಚೀನಾದಿಂದ ಆಮದು ಶೇ. 45.51 ರಷ್ಟು ಏರಿಕೆ, 7.02 ಟ್ರಿಲಿಯನ್ ವಹಿವಾಟು!

ಈ ವರ್ಷ ಭಾರತವು ಚೀನಾದಿಂದ ಅತೀ ಹೆಚ್ಚಿನ ಮೌಲ್ಯದ ವಸ್ತುಗಳನ್ನು ಆಮದು ಮಾಡಿಕೊಂಡಿದ್ದು, 2021ಕ್ಕೆ ಹೋಲಿಸಿದರೆ 2022ನೇ ಆರ್ಥಿಕ ವರ್ಷದಲ್ಲಿ ಆಮದು ಪ್ರಮಾಣ ಶೇ. 45.51% ರಷ್ಟು ಏರಿಕೆಯಾಗಿದೆ.

ನವದೆಹಲಿ: ಈ ವರ್ಷ ಭಾರತವು ಚೀನಾದಿಂದ ಅತೀ ಹೆಚ್ಚಿನ ಮೌಲ್ಯದ ವಸ್ತುಗಳನ್ನು ಆಮದು ಮಾಡಿಕೊಂಡಿದ್ದು, 2021ಕ್ಕೆ ಹೋಲಿಸಿದರೆ 2022ನೇ ಆರ್ಥಿಕ ವರ್ಷದಲ್ಲಿ ಆಮದು ಪ್ರಮಾಣ ಶೇ. 45.51% ರಷ್ಟು ಏರಿಕೆಯಾಗಿದೆ. ಈ ವರ್ಷ ಚೀನಾದಿಂದ ಆಮದು ಮಾಡಿಕೊಂಡ ವಸ್ತುಗಳ ಮೌಲ್ಯ 7.02 ಟ್ರಿಲಿಯನ್‌ ರೂಪಾಯಿಗೆ ಏರಿಕೆಯಾಗಿದೆ ಎಂದು ವಾಣಿಜ್ಯ ಸಚಿವಾಲಯದ ಅಂಕಿಅಂಶಗಳು ತಿಳಿಸಿವೆ. ಕಳೆದ ವರ್ಷ ಭಾರತ ಚೀನಾದಿಂದ 4.82 ಟ್ರಿಲಿಯನ್‌ ಮೌಲ್ಯದ ಸರಕುಗಳನ್ನು ಆಮದು ಮಾಡಿಕೊಂಡಿತ್ತು.

ಚೀನಾದಿಂದ ಅತಿದೊಡ್ಡ ಆಮದುಗಳಲ್ಲಿ ಖನಿಜ ಇಂಧನಗಳು, ಖನಿಜ ತೈಲಗಳು, ರಾಸಾಯನಿಕಗಳು, ರಸಗೊಬ್ಬರ, ಪ್ಲಾಸ್ಟಿಕ್, ಕಬ್ಬಿಣ ಮತ್ತು ಉಕ್ಕು, ವಿದ್ಯುತ್ ಯಂತ್ರೋಪಕರಣಗಳು ಮತ್ತು ಉಪಕರಣಗಳು ಮತ್ತು ವೈದ್ಯಕೀಯ ಉಪಕರಣಗಳು ಸೇರಿವೆ.

ಚೀನಾದಿಂದ ಆಮದುಗಳ ಗಮನಾರ್ಹ ಹೆಚ್ಚಳದ ಕುರಿತು ಪ್ರತಿಕ್ರಿಯಿಸಿದ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಪಬ್ಲಿಕ್ ಫೈನಾನ್ಸ್ ಅಂಡ್ ಪಾಲಿಸಿ ಪ್ರೊಫೆಸರ್ ಲೇಖಾ ಎಸ್ ಚಕ್ರವರ್ತಿ ಆವರು, “ದ್ವಿಪಕ್ಷೀಯ ರಾಜಕೀಯ ಉದ್ವಿಗ್ನತೆಯ ನಡುವೆಯೂ ಚೀನಾದಿಂದ ಆಮದು ಶೇ. 45 ರಷ್ಟು ಏಕೆ ಹೆಚ್ಚಾಗಿದೆ ಎಂಬುದು ವಿಪರ್ಯಾಸ. ಚೀನಾದ ಮೇಲಿನ ಆಮದು ಅವಲಂಬನೆ ಹೆಚ್ಚಳ ಹಠಾತ್ ಬೆಳವಣಿಗೆಯಲ್ಲ. ಸಾಂಕ್ರಾಮಿಕ ಕಾಲದಲ್ಲಿ ಹೆಚ್ಚು ಆಮದು ಮಾಡಿಕೊಳ್ಳಲಾಗಿದೆ ಎಂದಿದ್ದಾರೆ.

“ಭಾರತದಲ್ಲಿ, ಕೈಗಾರಿಕಾ ಚೇತರಿಕೆ ಪ್ರಾರಂಭವಾಗಿದೆ. ಚೀನಾದಿಂದ ಆಮದು ಮಾಡಿಕೊಳ್ಳುವುದು ಪ್ರಮುಖ ಕಚ್ಚಾ ವಸ್ತುಗಳು, ಘಟಕಗಳು ಮತ್ತು ಕೈಗಾರಿಕೆಗಳಿಗೆ ಅಗತ್ಯವಿರುವ ಇತರ ಕೈಗಾರಿಕಾ ಸರಕುಗಳು. ಕೈಗಾರಿಕಾ ಚೇತರಿಕೆ ಪ್ರಾರಂಭವಾಗಿದೆ ಎಂಬುದನ್ನು ಇದು ಸೂಚಿಸುತ್ತದೆ. ಇದು ಆತಂಕಕ್ಕೆ ಕಾರಣವಲ್ಲ. ಭಾರತದಿಂದ ರಫ್ತು ಕೂಡ ಹೆಚ್ಚಾಗಿದೆ. ನಾವು ಚೀನಾದಿಂದ ಸಿದ್ಧಪಡಿಸಿದ ವಸ್ತುಗಳನ್ನು ಆಮದು ಮಾಡಿಕೊಳ್ಳುತ್ತಿದ್ದರೆ, ಇದು ಕಳವಳಕ್ಕೆ ಕಾರಣವಾಗಬಹುದು ಎಂದು ಹಿರಿಯ ಅರ್ಥಶಾಸ್ತ್ರಜ್ಞ ಆಕಾಶ್ ಜಿಂದಾಲ್ ಅವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

SCROLL FOR NEXT